ಸೋನಿಯಾ ಗಾಂಧಿ ವಿರುದ್ಧ ಹೇಳಿಕೆ: ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಒಂದೆಡೆ ನಗರದಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆ ನಡೆಯುತ್ತಿದ್ದರೆ, ಮತ್ತೊಂದೆಡೆ ಕಾಂಗ್ರೆಸ್ ಬಿಜೆಪಿ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದೆ.

ಬೆಂಗಳೂರು: ಒಂದೆಡೆ ನಗರದಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆ ನಡೆಯುತ್ತಿದ್ದರೆ, ಮತ್ತೊಂದೆಡೆ ಕಾಂಗ್ರೆಸ್ ಬಿಜೆಪಿ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದೆ.
ನಗರದಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸುತ್ತಿದ್ದಾರೆ. ಇದೇ ವೇಳೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ.
ನಗರದಲ್ಲಿ ಪ್ರತಿಭಟನೆ ನಡೆಸುತ್ತಿರುವ ಯುವ ಕಾಂಗ್ರೆಸ್ ಸೋನಿಯಾ ಗಾಂಧಿಯವರ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿರುವ ಗಿರಿರಾಜ್ ಸಿಂಗ್ ರನ್ನು ವಜಾ ಮಾಡುವಂತೆ ಒತ್ತಾಯಿಸಿದ್ದು ಅಲ್ಲದೆ ಗಿರಿರಾಜ್ ಸಿಂಗ್ ರ ಪ್ರತಿಕೃತಿಯನ್ನು ದಹಿಸಿದ್ದಾರೆ.
ನವದೆಹಲಿಯಲ್ಲಿ ಬುಧವಾರ ಖಾಸಗಿ ಮಾಧ್ಯಮದೊಂದಿಗೆ ಗಿರಿರಾಜ್ ಸಿಂಗ್ ಮಾತನಾಡಿದ ವೇಳೆ, ರಾಜೀವ್ ಗಾಂಧಿ ನೈಜಿರಿಯಾ ಮಹಿಳೆಯನ್ನೇನಾದರೂ ಮದುವೆಯಾಗಿದ್ದರೆ ಅಥವಾ ಸೋನಿಯಾ ಗಾಂಧಿಯವರು ಬೆಳ್ಳಗಿರದಿದ್ದರೆ ಕಾಂಗ್ರೆಸ್ ಪಕ್ಷ ಸೋನಿಯಾ ಅವರನ್ನು ಅಧ್ಯಕ್ಷೆಯಾಗಿ ಒಪ್ಪಿಕೊಳ್ಳುತ್ತಿತ್ತ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


