ರಾಜಕೀಯ

ಹಲವು ಮಾಜಿ ಸಿಎಂಗಳನ್ನು ನಿರ್ನಾಮ ಮಾಡಿದ್ದು ದೇವೇಗೌಡರು: ಸಿಎಂ ಸಿದ್ದರಾಮಯ್ಯ

ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠಿ ಎಚ್.ಡಿ.ದೇವೇಗೌಡ ಅವರು ಹಲವು ಮಾಜಿ ಸಿಎಂಗಳನ್ನು ನಿರ್ನಾಮ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಹಲವು ಮಾಜಿ ಸಿಎಂಗಳನ್ನು ನಿರ್ನಾಮ ಮಾಡಿದ್ದು ದೇವೇಗೌಡರು: ಸಿಎಂ ಸಿದ್ದರಾಮಯ್ಯ
ಸಿದ್ದರಾಮಯ್ಯ
Published On :

ನವದೆಹಲಿ: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಹಲವು ಮಾಜಿ ಸಿಎಂಗಳನ್ನು ನಿರ್ನಾಮ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಂಭೀರ ಆರೋಪ ಮಾಡಿದ್ದಾರೆ.

ಇಂದು ದೆಹಲಿಯಲ್ಲಿ ಮಾಜಿ ಪ್ರಧಾನಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಸಿಎಂ, ನಾನು ಜೆಡಿಎಸ್ ನಿರ್ನಾಮ ಮಾಡುತ್ತೇನೆ ಎಂಬ ಭಯ ಅವರಿಗೆ ಇದೆ. ಆದರೆ ನಿರ್ನಾಮ ಮಾಡುವ ಸಂಸ್ಕೃತಿ ನಮ್ಮದಲ್ಲ. ದೇವೇಗೌಡರೆ ಹಲವು ಮಾಜಿ ಮುಖ್ಯಮಂತ್ರಿಗಳನ್ನು ನಿರ್ನಾಮ ಮಾಡಿದ್ದಾರೆ ಎಂದರು.

ಮಾಜಿ ಮುಖ್ಯಮಂತ್ರಿಗಳಾದ ರಾಮಕೃಷ್ಣ ಹೆಗಡೆ, ಜೆ.ಎಚ್.ಪಟೇಲ್ ಹಾಗೂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ಮಾಜಿ ಸಿಎಂಗಳನ್ನು ನಿರ್ನಾಮ ಮಾಡಿದ್ದು ದೇವೇಗೌಡರು ಎಂದರು.

ಇನ್ನು ಹಲವು ಜೆಡಿಎಸ್ ಶಾಸಕರು ಕಾಂಗ್ರೆಸ್ ಸೇರುತ್ತಿದ್ದಾರೆ ಎಂಬ ವರದಿಗಳ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಯಾವುದೇ ಜೆಡಿಎಸ್ ನಾಯಕರು ಕಾಂಗ್ರೆಸ್ ಸೇರುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.