ರಾಜಕೀಯ

ಆತ್ಮಹತ್ಯೆ ತಡೆಗೆ ಸಾಲ ಮನ್ನಾವೊಂದೇ ಪರಿಹಾರವಲ್ಲ: ಮುಖ್ಯಮಂತ್ರಿ

ರಾಜ್ಯದಲ್ಲಿ ನಡೆಯುತ್ತಿರುವ ರೈತರ ಸರಣಿ ಆತ್ಮಹತ್ಯೆ ತಡೆಗೆ ಸಾಲ ಮನ್ನಾವೊಂದೇ ಪರಿಹಾರವಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ..

ಆತ್ಮಹತ್ಯೆ ತಡೆಗೆ ಸಾಲ ಮನ್ನಾವೊಂದೇ ಪರಿಹಾರವಲ್ಲ: ಮುಖ್ಯಮಂತ್ರಿ
ಸಿದ್ದರಾಮಯ್ಯ
Published On :

ಬೆಳಗಾವಿ: ರಾಜ್ಯದಲ್ಲಿ ನಡೆಯುತ್ತಿರುವ ರೈತರ ಸರಣಿ ಆತ್ಮಹತ್ಯೆ ತಡೆಗೆ ಸಾಲ ಮನ್ನಾವೊಂದೇ ಪರಿಹಾರವಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಆತ್ಮಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ತುಂಬಾ ಗಂಭೀರವಾಗಿ ಪರಿಗಣಿಸಿದೆ. ರೈತರ್ಯಾರೂ ಆತ್ಮಹತ್ಯೆ ಮಾಡಿಕೊಳ್ಳಬಾರದು. ರೈತರು ಆತ್ಮಹತ್ಯೆ ಮಾಡಿಕೊಂಡರೆ ಅವರ ಕುಟುಂಬ ಮಕ್ಕಳು ಅನಾಥರಾಗುತ್ತಾರೆ. ಆತ್ಮಹತ್ಯೆಯಿಂದ ಯಾವುದೇ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ. ರೈತರ ಸಮಸ್ಯೆ ಪರಿಹರಿಸಲು ಸರ್ಕಾರ ಕಟಿಬದ್ಧವಾಗಿದೆ. ಆ ದಿಸೆಯಲ್ಲಿ ಎಲ್ಲ ಕ್ರಮ ಕೈಗೊಳ್ಳಲಾಗಿದೆ. ಅವರಲ್ಲಿ ಆತ್ಮಸ್ಥೈರ್ಯ ತುಂಬುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದರು.

ಮೀಟರ್ ಬಡ್ಡಿ ಪ್ರಕರಣ ಸಂಬಂಧಿಸಿದಂತೆ ರಾಜ್ಯಾದ್ಯಂತ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದು, ಒಂದು ತಿಂಗಳ ಅವಧಿಯಲ್ಲಿ ಒಂದು ಸಾವಿರ ಪ್ರಕರಣಗಳನ್ನು ದಾಖಲಿಸಿಕೊಂಡು 560 ಜನರನ್ನು ಬಂಧಿಸಲಾಗಿದೆ.  ರೈತರಿಂದ ಒತ್ತಾಯಪೂರ್ವಕವಾಗಿ ಸಾಲ ವಸೂಲಿ ಮಾಡುವುದರ ವಿರುದ್ಧ ಕೂಡ ಕ್ರಮ ಕೈಗೊಳ್ಳಲಾಗಿದೆ. ಬ್ಯಾಂಕ್ ಗಳಿಗೂ ಈ ಕುರಿತು ಸೂಚನೆ ನೀಡಲಾಗಿದೆ. ಇದಕ್ಕೂ ಮುನ್ನ ಆತ್ಮಹತ್ಯೆಗೀಡಾದ ರೈತ ಗುರುನಾಥ ಚಾಪಗಾವಿ ಅವರ ಮನೆಗೆ ಭೇಟಿ ನೀಡಿ, ಅವರ ಮಗನಿಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯಲ್ಲಿ ಕೆಲಸ ಕೊಡಿಸಲಾಗುವುದು. ಚಾಪಗಾವಿ ಕುಟುಂಬದ ಸಾಲವನ್ನು ಮನ್ನಾ ಮಾಡಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಕಿತ್ತೂರಿನ ಶಾಸಕ ಡಿ.ಬಿ. ಇನಾಮದಾರ ಮೃತ ರೈತನ ಮಗನಿಗೆ ಎಂ.ಕೆ. ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಕೆಲಸ ಕೊಡಿಸುವುದಾಗಿ ಭರವಸೆ ನೀಡಿದರು.

ಪ್ರಧಾನಿ ಭೇಟಿಗೆ ದಿನಾಂಕ ನಿಗದಿಯಾಗಿಲ್ಲ:
ಕಳಸಾ- ಬಂಡೂರಿ ಮತ್ತು ಮಹಾದಾಯಿ ನಾಲಾ ಜೋಡಣೆ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಪ್ರಧಾನಿ ಬಳಿಗೆ ಸರ್ವಪಕ್ಷ ನಿಯೋಗವೊಂದನ್ನು ಕರೆದೊಯ್ಯಲು ಪ್ರಧಾನಿಗೆ ಪತ್ರ ಬರೆಯಲಾಗಿದೆ. ಆದರೆ, ಅವರ ಭೇಟಿಗೆ ಇನ್ನೂ ದಿನಾಂಕ ನಿಗದಿಯಾಗಿಲ್ಲ. ಜುಲೈ 27 ರಂದೇ ಪ್ರಧಾನಿ ಅವರಿಗೆ ಪತ್ರ ಬರೆಯಲಾಗಿದ್ದು, ಅವರಿಂದ ಇನ್ನೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಸಿಎಂ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.