ಬಿಬಿಎಂಪಿ ಫಲಿತಾಂಶ ಸರ್ಕಾರದ ಮೊದಲ ಮೌಲ್ಯಮಾಪನ: ಡೀವಿ
ಬೆಂಗಳೂರು ಬಿಬಿಎಂಪಿ ಚುನಾವಣೆ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ನೇರ ಹಣಾಹಣಿ ನಡೆಯಲಿದೆ. ಇದರಫಲಿತಾಂಶ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಎರಡೂವರೆ ವರ್ಷಗಳ ಆಡಳಿತದ ಮೊದಲ ಮೌಲ್ಯಮಾಪನ ಎಂದು ಕೇಂದ್ರ ಕಾನೂನು ಸಚಿವ ಡಿ.ವಿ. ಸದಾನಂದ ಗೌಡ ಹೇಳಿದರು.

ಮಂಗಳೂರು: ಬೆಂಗಳೂರು ಬಿಬಿಎಂಪಿ ಚುನಾವಣೆ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ನೇರ ಹಣಾಹಣಿ ನಡೆಯಲಿದೆ. ಇದರಫಲಿತಾಂಶ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಎರಡೂವರೆ ವರ್ಷಗಳ ಆಡಳಿತದ ಮೊದಲ ಮೌಲ್ಯಮಾಪನ ಎಂದು ಕೇಂದ್ರ ಕಾನೂನು ಸಚಿವ ಡಿ.ವಿ. ಸದಾನಂದ ಗೌಡ ಹೇಳಿದರು.
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ 6 ತಿಂಗಳಲ್ಲಿ ಅವರ ಪಕ್ಷದೊಳಗೆ ಗುಂಪುಗಾರಿಕೆ, ಸಿದ್ದರಾಮಯ್ಯ ಅವರ ಉದ್ಧಟತನ , ಜನಸಾಮಾನ್ಯರೊಂದಿಗೆ ಬೆರೆಯದಿರುವುದು, ಪಕ್ಷದ ಅಧ್ಯಕ್ಷರ ವಿರುದ್ಧದ ನಡೆ, ರೈತರ ಸರಣಿ ಆತ್ಮಹತ್ಯೆಗಳಿಂದ ಜನಸಾಮಾನ್ಯರು ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದು ಆಡಳಿತ ವಿಫಲವಾಗಿದೆ. ಪಕ್ಷದ ವಿರುದ್ಧದ ಜನರ ಅಲೆಯ ಬಗ್ಗೆ ಕಾಂಗ್ರೆಸ್‍ನ ಹಿರಿಯ ನಾಯಕರು ಇದೀಗ ಮುಖ್ಯಮಂತ್ರಿ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ.
ತಡವಾಗಿಯಾದರೂ ಈ ರೀತಿಯ ಹೇಳಿಕೆಗೆ ಅವರನ್ನು ತಾನು ಅಭಿನಂದಿಸುತ್ತೇನೆ. ರಾಷ್ಟ್ರಮಟ್ಟದಲ್ಲಿ ರಾಜಕೀಯ ಅನುಭವ ಇರುವ ಪಕ್ಷದ ಹಿರಿಯರು ಇಷ್ಟು ತಡವಾಗಿ ಹೇಳಿಕೆ ನೀಡಬಾರದಿತ್ತು ಎಂದು ಶುಕ್ರವಾರ ಮಂಗಳೂರಲ್ಲಿ ಸುದ್ದಿಗಾರರಲ್ಲಿ ಪ್ರತಿಕ್ರಿಯಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


