ಬೆಂಗಳೂರಿಗರು ಮತ್ತೆ ಭ್ರಷ್ಟರನ್ನೇ ಆರಿಸಿದ್ದಾರೆ: ಕುಮಾರಸ್ವಾಮಿ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯ ಹೀನಾಯ ಸೋಲಿನಿಂದ ಹತಾಶರಾಗಿರುವ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ...

Published On :
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯ ಹೀನಾಯ ಸೋಲಿನಿಂದ ಹತಾಶರಾಗಿರುವ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಬಿಬಿಎಂಪಿ 'ಚುನಾವಣೆಯಲ್ಲಿ ಭ್ರಷ್ಟರಿಗೇ ಗೆಲುವು ಸಿಕ್ಕಿದೆ. ಬೆಂಗಳೂರಿಗರು ಮತ್ತೆ ಭ್ರಷ್ಟರನ್ನೇ ಆರಿಸಿದ್ದಾರೆ' ಎಂದು ಹೇಳಿದ್ದಾರೆ.
ಫಲಿತಾಂಶ ನಂತರ ಪತ್ರಿಕಾಗೋಷ್ಠಿ ನಡೆಸಿದ ಕುಮಾರಸ್ವಾಮಿ ಅವರು, ‘ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಭ್ರಷ್ಟಾಚಾರವನ್ನು ನಾವು ಬಯಲಿಗೆಳೆದಿದ್ದೆವು. ಜನರ ಮುಂದೆ ಸತ್ಯವನ್ನು ತೆರೆದಿಟ್ಟಿದ್ದೆವು. ಆದರೂ ಜನರು ಭ್ರಷ್ಟರ ಕೈಗೇ ಅಧಿಕಾರ ನೀಡಿದ್ದಾರೆ’ ಎಂದು ಬೇಸರ ವ್ಯಕ್ತಪಡಿಸಿದರು.
ಪದ್ಮನಾಭನಗರದಲ್ಲಿ ಏಳು ಮಂದಿ ಬಿಜೆಪಿ ಅಭ್ಯರ್ಥಿಗಳು ಗೆದ್ದಿದ್ದಾರೆ. ಅವರೆಲ್ಲ ಕೆರೆ ನುಂಗಿರುವವರಾಗಿದ್ದು ಈ ಚುನಾವಣೆಯಲ್ಲಿ ಆರಿಸಿ ಬಂದಿರುವುದು ದುರಾದೃಷ್ಟಕರ ಎಂದು ಹೇಳಿರುವ ಕುಮಾರಸ್ವಾಮಿ ಅವರು, ಬೇಕಿದ್ದರೆ ಅವರ ವಿರುದ್ಧ ದಾಖಲೆ ನೀಡಲು ಸಿದ್ಧ ಎಂದು ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


