ಸೋಲು ರಾಜ್ಯ ಸರ್ಕಾರದ ಮೇಲೆ ಪರಿಣಾಮ ಬೀರಲ್ಲ: ಮಲ್ಲಿಕಾರ್ಜುನ ಖರ್ಗೆ
ಬಿಎಂಪಿ ಚುನಾವಣೆಯಲ್ಲಿ ಕಾಂಗ್ರೆಸ್ ಸೋತಿದ್ದರೂ ರಾಜ್ಯ ಸರ್ಕಾರದ ಮೇಲೆ ಅದರಿಂದ ಯಾವ ಪರಿಣಾಮವೂ ಬೀರುವುದಿಲ್ಲ ಎಂದು ಲೋಕಸಭೆಯಲ್ಲಿ

ನವದೆಹಲಿ: ಬಿಬಿಎಂಪಿ ಚುನಾವಣೆಯಲ್ಲಿ ಕಾಂಗ್ರೆಸ್ ಸೋತಿದ್ದರೂ ರಾಜ್ಯ ಸರ್ಕಾರದ ಮೇಲೆ ಅದರಿಂದ ಯಾವ ಪರಿಣಾಮವೂ ಬೀರುವುದಿಲ್ಲ ಎಂದು ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ನಮಗೆ ಹಿನ್ನಡೆಯಾಗಿದೆ, ನಿಜ. ಆದರೆ, ಸೋಲಿಗೆ ಯಾರೋ ಒಬ್ಬರನ್ನು ಹೊಣೆಗಾರರನ್ನಾಗಿ ಮಾಡುವುದಿಲ್ಲ, ಸೋಲಿನ ಬಗ್ಗೆ ನಾವು ವಿಶ್ಲೇಷಣೆ ಮಾಡಿ, ಆಗಿರುವ ಲೋಪಗಳನ್ನು ಸರಿಪಡಿಸಿ ಕೊಳ್ಳುತ್ತೇವೆ ಎಂದು ಹೇಳಿದ್ದಾರೆ. ಬಿಬಿಎಂಪಿ ಫಲಿತಾಂಶ ನನಗೆ ಅಚ್ಚರಿ ಮೂಡಿಸಿದೆ, ಆಘಾತ ವನ್ನೂ ತಂದಿದೆ. ಐದು ವರ್ಷಗಳ ಕಾಲ ಬಿಜೆಪಿ ನಡೆಸಿದ ಭ್ರಷ್ಚಾಚಾರ, ಆರ್ಥಿಕ ದಿವಾಳಿತನ ಇದ್ದರೂ ಜನತೆ ಆ ಪಕ್ಷಕ್ಕೆ ಮತ ನೀಡಿದ್ದಾರೆ. ವಾಸ್ತವವಾಗಿ ನಾವು ಬಿಬಿಎಂಪಿಯಲ್ಲಿ ಅಧಿಕಾರಕ್ಕೆ ಬರಬೇಕಿತ್ತು. ಆದರೆ, ಕೆಲವರು ಕಾಂಗ್ರೆಸ್‍ನ ಮತಗಳನ್ನು ವಿಭಜಿಸಲೆಂದೇ ಚುನಾವಣೆಗೆ ಸ್ಪರ್ಧಿಸಿದ್ದರು. ಹೀಗಾಗಿ ನಮಗೆ ಹಿನ್ನಡೆಯಾಗಿದೆ ಎಂದರು.
ಸಿಎಂ ಹೊಣೆಹೊರಬೇಕು: ಬಿಬಿಎಂಪಿಯಲ್ಲಿ ಬಿಜೆಪಿ ಸಾಧಿಸಿರುವ ಗೆಲುವು ಯಾರೊಬ್ಬರದ್ದಲ್ಲ, ಎಲ್ಲ ನಾಯಕರ ಹಾಗೂ ಕಾರ್ಯಕರ್ತರ ಸಂಘ ಟಿತ ಪ್ರಯತ್ನ ಎಂದು ಸಂಸದ, ಬಿಜೆಪಿ
ರಾಷ್ಟ್ರೀಯ ಉಪಾಧ್ಯಕ್ಷ ಯಡಿಯೂರಪ್ಪ ಹೇಳಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದ್ದರೂ ಬಿಬಿಎಂಪಿಯಲ್ಲಿ ಕಾಂಗ್ರೆಸ್ ಸೋಲು ಅನುಭವಿಸಿದೆ. ಇದು ರಾಜ್ಯ ಸರ್ಕಾರದ ವಿರುದ್ಧ ಜನತೆ ನೀಡಿರುವ ತೀರ್ಪು. ಸೋಲಿನ ಹೊಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹೊರಬೇಕು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


