ಜಮೀರ್ ರಾಜಿನಾಮೆ ಕೊಡ್ತಾರಾ?
ಚಾಮರಾಜಪೇಟೆ ಕ್ಷೇತ್ರದ ಜೆಡಿಎಸ್ ಶಾಸಕ ಜಮೀರ್ ಅಹಮದ್ ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುತ್ತಾರಾ? ಇಂತಹ ಪ್ರಶ್ನೆ ಇದೀಗ ಎದುರಾಗಿದೆ...

ಬೆಂಗಳೂರು: ಚಾಮರಾಜಪೇಟೆ ಕ್ಷೇತ್ರದ ಜೆಡಿಎಸ್ ಶಾಸಕ ಜಮೀರ್ ಅಹಮದ್ ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುತ್ತಾರಾ? ಇಂತಹ ಪ್ರಶ್ನೆ ಇದೀಗ ಎದುರಾಗಿದೆ.
ಬಿಬಿಎಂಪಿ ಚುನಾವಣೆಯಲ್ಲಿ ಜೆಡಿಎಸ್ 15 ಸ್ಥಾನ ಗೆಲ್ಲದಿದ್ದರೆ ನಾನು ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುತ್ತೇನೆ ಎಂದು ಮಾಧ್ಯಮಗಳ ಮುಂದೆ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಸವಾಲು ಹಾಕಿದ್ದರು. `ಜೆಡಿಎಸ್ ಲೆಕ್ಕಕ್ಕಿಲ್ಲ. ಅವರು 15 ಸ್ಥಾನವನ್ನೂ ಗೆಲ್ಲುವುದಿಲ್ಲ' ಎಂದು ರಾಮಲಿಂಗಾರೆಡ್ಡಿ ಹೇಳಿದ್ದರು.
ಇದಕ್ಕೆ ಪ್ರತಿಕ್ರಿಯಿಸಿದ್ದ ಜಮೀರ್ ಅಹಮದ್ `ನಾವು 15 ಸ್ಥಾನ ಗೆಲ್ಲದಿದ್ದರೆ ಶಾಸಕ ಸ್ಥಾನಕ್ಕೇ ರಾಜಿನಾಮೆ ನೀಡುತ್ತೇನೆ. 100 ಸ್ಥಾನ ಗೆಲ್ಲದಿದ್ದರೆ ರಾಮಲಿಂಗಾರೆಡ್ಡಿ ಸಚಿವ ಸ್ಥಾನ ತ್ಯಜಿಸಲಿ' ಎಂದು ಸವಾಲು ಹಾಕಿದ್ದರು. ರಾಮಲಿಂಗಾರೆಡ್ಡಿ ಸವಾಲು ಸ್ವೀಕರಿಸಿರಲಿಲ್ಲ. ಆದರೆ, 15 ಸ್ಥಾನ ಬಾರದಿದ್ದರೆ ರಾಜಿನಾಮೆ ಎಂಬ ಜಮೀರ್ ಅಹಮದ್ ಸವಾಲು ಏನಾಗುತ್ತೋ ಗೊತ್ತಿಲ್ಲ. ಈ ಬಗ್ಗೆ ಅವರ ಪ್ರತಿಕ್ರಿಯೆಗೆ ಪತ್ರಿಕೆ ಸಂಪರ್ಕಿಸಲು ಪ್ರಯತ್ನಿಸಿದಾಗ ಎಂದಿನಂತೆ ಅವರು ಕರೆ ಸ್ವೀಕರಿಸಲಿಲ್ಲ.
ಮತ್ತೊಂದು ಫೋನ್ ಸ್ವಿಚ್ಡ್ ಆಫ್. ವಿಧಾನಸಭೆ ಚುನಾವಣೆ ನಂತರ ಜೆಡಿಎಸ್ ನೊಂದಿಗೆ ಅದರಲ್ಲೂ ಕುಮಾರಸ್ವಾಮಿ ಅವರೊಂದಿಗೆ ಕಾಣಿಸದೆ ಬಂಡಾಯದ ಬಾವುಟ ಹಾರಿಸಿದ್ದ ಜಮೀರ್ ಅಹಮದ್, ಬಿಬಿಎಂಪಿ ಚುನಾವಣೆ ಸಂದರ್ಭದಲ್ಲಿ ಜೆಡಿಎಸ್ ಹಾಗೂ ಕುಮಾರಸ್ವಾಮಿ ಬಿಟ್ಟರೆ ಬೇರಿಲ್ಲ ಎಂಬಂತೆ ಸೇರಿಕೊಂಡಿದ್ದರು. ಅಲ್ಲದೆ, ಪಕ್ಷದ ಪ್ರಣಾಳಿಕೆ- ಯನ್ನೂ ಅವರೇ ಬಿಡುಗಡೆ ಮಾಡಿದ್ದರು. ಈಗ ಅವರ ಮಾತಿನಂತೆಯೇ ಶಾಸಕ ಸ್ಥಾನ ತ್ಯಜಿಸುವ ಸವಾಲು ಎದುರಾಗಿದೆ. ಹೇಗೆ ಪ್ರತಿಕ್ರಿಯಿಸುತ್ತಾರೋ ನೋಡಬೇಕಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


