ರಾಜಕೀಯ

ರಾಹುಲ್ ಗಾಂಧಿ ಶೀಘ್ರವೇ ಎಐಸಿಸಿ ಅಧ್ಯಕ್ಷರಾಗಬೇಕು: ಸಚಿನ್ ಪೈಲಟ್

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಶೀಘ್ರವೇ ಪಕ್ಷದ ಅಧ್ಯಕ್ಷರಾಗಬೇಕು ಎಂದು ರಾಜಸ್ಥಾನ ಕಾಂಗ್ರೆಸ್ ಮುಖಂಡ ಸಚಿನ್ ಪೈಲೆಟ್ ಆಗ್ರಹಿಸಿದ್ದಾರೆ.

ರಾಹುಲ್ ಗಾಂಧಿ ಶೀಘ್ರವೇ ಎಐಸಿಸಿ ಅಧ್ಯಕ್ಷರಾಗಬೇಕು: ಸಚಿನ್ ಪೈಲಟ್
ರಾಹುಲ್ ಗಾಂಧಿ
Published On :

ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಶೀಘ್ರವೇ ಪಕ್ಷದ ಅಧ್ಯಕ್ಷರಾಗಬೇಕು ಎಂದು ರಾಜಸ್ಥಾನ ಕಾಂಗ್ರೆಸ್ ಮುಖಂಡ ಸಚಿನ್ ಪೈಲೆಟ್  ಆಗ್ರಹಿಸಿದ್ದಾರೆ.

ಲೋಕಸಭಾ ಚುನಾವಣಾ ಸೋಲಿನ ನಂತರ ಸಂಸತ್ ನಲ್ಲಿ ಆಡಳಿತ ಪಕ್ಷದ ನ್ಯೂನತೆಗಳ ವಿರುದ್ಧ ಮಾತನಾಡುತ್ತಿರುವ ರಾಹುಲ್ ಗಾಂಧಿ ಅವರಿಗೆ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬಲು ಸಾಧ್ಯವಾಗಿದೆ. ಆದ್ದರಿಂದ ಶೀಘ್ರವೇ ಎಐಸಿಸಿ ಅಧ್ಯಕ್ಷ ಸ್ಥಾನದ ಜವಾಬ್ದಾರಿ ತೆಗೆದುಕೊಳ್ಳಲಿ. ಎಐಸಿಸಿ ಹಾಲಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸಂಸದೀಯ ಪಕ್ಷದ ಮುಖ್ಯಸ್ಥರಾಗಿ ಪಕ್ಷಕ್ಕೆ ಮಾರ್ಗದರ್ಶನ ನೀಡಲಿ ಎಂದು ಸಚಿನ್ ಪೈಲೆಟ್ ಹೇಳಿದ್ದಾರೆ.

ರಾಹುಲ್ ಗಾಂಧಿ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳಬೇಕೆಂಬುದು ತಮ್ಮ ವಯಕ್ತಿಕ ನಿರ್ಧಾರವಾಗಿದ್ದು, ಈ ಬಗ್ಗೆ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ನಿರ್ಧರಿಸಲಿದೆ. ಸಮಿತಿ ನಿರ್ಧಾರಕ್ಕೆ ಬದ್ಧರಿರುವುದಾಗಿ ಸಚಿನ್ ಪೈಲೆಟ್ ತಿಳಿಸಿದ್ದಾರೆ. ಲೋಕಸಭಾ ಚುನಾವಣೆ ಹಾಗೂ ವಿಧಾನಸಭಾ ಚುನಾವಣೆ ಸೋಲಿನ ನಂತರ, ರಾಹುಲ್ ಗಾಂಧಿ ಅವರು ರಾಜನಸ್ಥಾನ ಕಾಂಗ್ರೆಸ್ ಪಕ್ಷದ ಹೊಣೆಯನ್ನು ಸಚಿನ್ ಪೈಲಟ್ ಗೆ ವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.