ಪ್ರಧಾನಿ ಕೌಂಟ್ ಡೌನ್ ಶುರುವಾಗಿತ್ತೆ?
ಬಿಬಿಎಂಪಿ ಚುನಾವಣೆ ಫಲಿತಾಂಶ ಸರ್ಕಾರದ ವಿರುದ್ಧದ ಜನಾದೇಶವಲ್ಲ ಎಂದು ಮತ್ತೆ ಪ್ರತಿಪಾದಿಸಿರುವ...

ಬೆಂಗಳೂರು: ಬಿಬಿಎಂಪಿ ಚುನಾವಣೆ ಫಲಿತಾಂಶ ಸರ್ಕಾರದ ವಿರುದ್ಧದ ಜನಾದೇಶವಲ್ಲ ಎಂದು ಮತ್ತೆ ಪ್ರತಿಪಾದಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿ ವಿಧಾನಸಭೆ ಚುನಾವಣೆ ಯಲ್ಲಿ ಸೋತ ನಂತರ ಪ್ರಧಾನಿ ನರೇಂದ್ರ ಮೋದಿ ಅವರ ಕೌಂಟ್ ಡೌನ್ ಶುರುವಾಗಿತ್ತೇ? ಎಂದು ಪ್ರಶ್ನಿಸಿದ್ದಾರೆ.
ವಿಜಯನಗರದಲ್ಲಿ ನೂತನವಾಗಿ ಆರಂಭಿಸಿರುವ ಮಾರುತಿ ನೇತ್ರಾಲಯವನ್ನು ಬುಧವಾರ ಉದ್ಘಾಟಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು ಈ ವಾದ ಮುಂದಿಟ್ಟರು. ಬಿಬಿಎಂಪಿ ಚುನಾವಣೆ ಫಲಿತಾಂಶ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಅಧಿಕಾರ ಪತನಕ್ಕೆ ಕೌಂಟ್ ಡೌನ್ ಶುರುವಾಗಿದೆ ಎಂದು ಕೇಂದ್ರ ಸಚಿವ ಅನಂತ್‍ಕುಮಾರ್ ಹೇಳಿಕೆ ನೀಡಿರುವ ಬಗ್ಗೆ ಪ್ರಶ್ನಿಸಿದಾಗ, ಹಾಗಾದರೆ ಪ್ರಧಾನಿ ನರೇಂದ್ರ ಮೋದಿ ಅವರ ಕೌಂಟ್‍ಡೌನ್ ಶುರುವಾಗಿದೆಯೇ? ಎಂದು ಮರುಪ್ರಶ್ನಿಸಿದರು.
ಲೋಕಸಭಾ ಚುನಾವಣೆ ಬಳಿಕ ನಡೆದ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯವರು ಸೋತರು. ಅಷ್ಟೇ ಅಲ್ಲ, ಸಂಪೂರ್ಣವಾಗಿ ನಿರ್ನಾಮವಾಗಿಬಿಟ್ಟರು. ಮೂರು ಸ್ಥಾನ ಮಾತ್ರ ಗೆದ್ದಿದ್ದರು. ಹಾಗಾದರೆ ಅದು ನರೇಂದ್ರ ಮೋದಿ ಅವರ ಕೌಂಟ್ ಡೌನ್ ಅಲ್ಲವಾ? ಬಿಬಿಎಂಪಿ ಚುವಾವಣೆ ಯಾವ ಕಾಲಕ್ಕೂ ಸರ್ಕಾರದ ವಿರುದ್ಧದ ಜನಾದೇಶವಾಗಲು ಸಾಧ್ಯವಿಲ್ಲ. ಇತಿಹಾಸದಲ್ಲಿ ಯಾವಾಗಲಾದರೂ ನಗರ ಪಾಲಿಕೆಯಲ್ಲಿ ಸೋತಿದ್ದನ್ನು ಸರ್ಕಾರದ ವಿರುದ್ಧದ ಜನಾದೇಶ ಎಂದು ಹೇಳಿದ ಉದಾಹರಣೆ ಇದೆಯೇ? ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಹೈಕಮಾಂಡ್ ನನ್ನಿಂದ ಯಾವುದೇ ರೀತಿಯ ವರದಿಯನ್ನು ಕೇಳಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


