ಮತ ಎಣಿಕೆಯಲ್ಲಿ ಕರ್ತವ್ಯಲೋಪ ಆರೋಪ
ಬಿಬಿಎಂಪಿ ಚುನಾವಣೆಯ ಮತಎಣಿಕೆಯಲ್ಲಿ ಚುನಾವಣಾ ಅಧಿಕಾರಿಗಳು ಕರ್ತವ್ಯಲೋಪ ಎಸಗಿದ್ದಾರೆ...

Published On :
ಬೆಂಗಳೂರು: ಬಿಬಿಎಂಪಿ ಚುನಾವಣೆಯ ಮತಎಣಿಕೆಯಲ್ಲಿ ಚುನಾವಣಾ ಅಧಿಕಾರಿಗಳು ಕರ್ತವ್ಯಲೋಪ ಎಸಗಿದ್ದಾರೆ. ಇದನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಅಪೀಲು ಸಲ್ಲಿಸಲಾಗುವುದು ಎಂದು 53ನೇ ವಾರ್ಡ್‍ನ ಸೋತ ಬಿಜೆಪಿ ಅಭ್ಯರ್ಥಿ ಕೆ. ಸುಂದರ್ ರಾಜ್ ತಿಳಿಸಿದ್ದಾರೆ.
ಚುನಾವಣಾ ಅಧಿಕಾರಿಗಳು ಸಂಪೂರ್ಣ ಕಾಂಗ್ರೆಸ್ ಪರವಾಗಿದ್ದು, ಮೊದಲು ಬಿಜೆಪಿ ಅಭ್ಯರ್ಥಿ ಜಯ ಎಂದು ಘೋಷಿಸಿದರು. ಕೆಲ ನಿಮಿಷಗಳ ನಂತರ 10 ಮತಗಳ ಅಂತರದಿಂದ ಕಾಂಗ್ರೆಸ್ ಗೆಲುವು ಸಾಧಿಸಿದೆ ಎಂದು ಘೋಷಿಸಿದರು. ಇದಕ್ಕೆ ಕಾಂಗ್ರೆಸ್‍ನ ಶಾಸಕ ಭೈರತಿ ಬಸವರಾಜ್ ಕಾರಣ ಎಂದು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
ವಾರ್ಡ್‍ನ 6ನೇ ಬೂತ್ ಮತಎಣಿಕೆ ವೇಳೆ ಚುನಾವಣಾಧಿಕಾರಿಗಳು ಬಿಜೆಪಿ ಏಜೆಂಟ್ ಗಳನ್ನು ಒಳಗೆ ಬಿಡದೆ ಮತ ಎಣಿಕೆ ಮಾಡಿದ್ದಾರೆ. ಬಿಜೆಪಿ ಮತಗಳನ್ನು ಕಾಂಗ್ರೆಸ್ ಮತ ಎಂದು ಷೋಷಿಸಲಾಗಿದೆ. ಚುನಾವಣಾಧಿಕಾರಿಗಳು ಶಾಸಕರ ಒತ್ತಡಕ್ಕೆ ಮಣಿದಿದ್ದಾರೆ ಎಂಬುದು ಮತಎಣಿಕೆಯಲ್ಲಿ ಸ್ಪಷ್ಟವಾಗಿ ಗೋಚರಿಸಿದೆ ಎಂದು ಅವರು ಆರೋಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


