ಮೈತ್ರಿ ಸೂಕ್ತ ನಿರ್ಣಯಕ್ಕೆ ಖರ್ಗೆ ಆಗ್ರಹ
ಬಿಎಂಪಿ ಅಧಿಕಾರ ಹಿಡಿಯುವ ವಿಚಾರದಲ್ಲಿ ಜೆಡಿಎಸ್ ಜೊತೆ ಮೈತ್ರಿ ಪ್ರಸ್ತಾಪ ಹಿನ್ನೆಲೆಯಲ್ಲಿ ಕಾಂಗ್ರೆಸ್ ಲೋಕಸಭೆ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ....

ಬೆಂಗಳೂರು: ಬಿಬಿಎಂಪಿ ಅಧಿಕಾರ ಹಿಡಿಯುವ ವಿಚಾರದಲ್ಲಿ ಜೆಡಿಎಸ್ ಜೊತೆ ಮೈತ್ರಿ ಪ್ರಸ್ತಾಪ ಹಿನ್ನೆಲೆಯಲ್ಲಿ ಕಾಂಗ್ರೆಸ್ ಲೋಕಸಭೆ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಇದೇ ಮೊದಲ ಬಾರಿಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಮೈತ್ರಿ ಪ್ರಸ್ತಾಪದ ಬಗ್ಗೆ ಪರ ಅಥವಾ ವಿರೋಧದ ಸುಳಿವು ನೀಡದ ಅವರು, ಪಕ್ಷದ ಹಿತದೃಷ್ಟಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಸೂಕ್ತ ನಿರ್ಣಯ ತೆಗೆದುಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.
ಭಾನುವಾರ ಮಾತನಾಡಿದ ಅವರು, ಇದುವರೆಗೆ ಬಿಬಿಎಂಪಿ ಮೈತ್ರಿ ವಿಚಾರ ನನ್ನ ಗಮನಕ್ಕೆ ಬಂದಿರಲಿಲ್ಲ. ಪಕ್ಷವು ಮೈತ್ರಿ ಮಾಡಿಕೊಳ್ಳುವ ಸಂದರ್ಭದಲ್ಲಿ ಹಿಂದಿನ ಮತ್ತು ಮುಂದಿನ ಸಂಗತಿಗಳನ್ನು ಗಮನದಲ್ಲಿಟ್ಟುಕೊಳ್ಳಬೇಕಾಗುತ್ತದೆ. ಭವಿಷ್ಯದಲ್ಲಿ ಎದುರಾಗುವ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳ ದೃಷ್ಟಿಯಲ್ಲಿಟ್ಟುಕೊಂಡು ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ ಎಂದು ತಿಳಿಸಿದರು.
ಈ ಬೆಳವಣಿಗೆಗೆ ಸಂಬಂಧಿಸಿದಂತೆ ನಾನು ಈವರೆಗೆ ಯಾವುದೇ ಪಾತ್ರ ವಹಿಸಿಲ್ಲ ಎಂದರು ಬಿಬಿಎಂಪಿ ಅಧಿಕಾರ ಗದ್ದುಗೆಗಾಗಿ ಬಿಜೆಪಿಯರು ಬಂದ್ರು, ಕೇಳಿದ್ರು, ಹೋದ್ರಷ್ಟೆ. ಆದರೆ, ಕಾಂಗ್ರೆಸ್‍ನವರು ಯಾರು ನನ್ನ ಬಳಿಗೆ ಈ ಬಗ್ಗೆ ಮಾತನಾಡಿಲ್ಲ. ಮೈತ್ರಿ ವಿಷಯವೇ ನಮ್ಮ ಬಳಿಗೆ ಬಂದಿಲ್ಲ.
ಎಚ್.ಡಿ. ದೇವೇಗೌಡ ಮಾಜಿ ಪ್ರಧಾನಿ
ಕಳೆದ ಎರಡು ವರ್ಷದಲ್ಲಿ ಕಾಂಗ್ರೆಸ್ ಮುಖಂಡರು ದೇವೇಗೌಡರನ್ನು, ಜೆಡಿಎಸ್ ನಾಯಕರಿಗೆ ಸೊಂಟದ ಕೆಳಗಿನ ಪದಗಳೆಲ್ಲವನ್ನೂ ಬಳಸಿದ್ದಾರೆ.ಇದನ್ನು ಇಟ್ಟುಕೊಂಡು ಜೆಡಿಎಸ್ ಕೈಜೋಡಿಸಲ್ಲ ಎಂಬ ವಿಶ್ವಾಸವಿದೆ. ಕೆಲ ದಿನಗಳಲ್ಲಿ ಅಚ್ಚರಿ ನಡೆಯಲಿದೆ. ಮೇಯರ್ ಆಗುವುದು ಬಿಜೆಪಿಯವರೆ, ಇದು ನಿಶ್ಚಿತ.
ಡಿ.ವಿ. ಸದಾನಂದ ಗೌಡ ಕೇಂದ್ರ ಸಚಿವ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


