ಬಿಹಾರ ವಿಧಾನಸಭೆ ಸ್ಪೀಕರ್ ಆಗಿ ನಿತೀಶ್ ಕುಮಾರ್ ನಂಬಿಕಸ್ಥ ವಿಜಯ್ ಚೌಧರಿ ಆಯ್ಕೆ
ಜೆಡಿಯು ಹಿರಿಯ ಶಾಸಕ ಹಾಗೂ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಂಬಿಗಸ್ಥರಾಗಿರುವ ವಿಜಯ್ ಚೌಧರಿ ಅವರನ್ನು,ಬಿಹಾರ ವಿಧಾನಸಭೆಯ ಸ್ಪೀಕರ್ ಆಗಿ ...

ಪಾಟ್ನಾ: ಜೆಡಿಯು ಹಿರಿಯ ಶಾಸಕ ಹಾಗೂ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಂಬಿಗಸ್ಥರಾಗಿರುವ ವಿಜಯ್ ಚೌಧರಿ ಅವರನ್ನು,ಬಿಹಾರ ವಿಧಾನಸಭೆಯ ಸ್ಪೀಕರ್ ಆಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.
ಜೆಡಿಯು, ಆರ್‌ಜೆಡಿ, ಕಾಂಗ್ರೆಸ್ ಮಾತ್ರವಲ್ಲದೆ ವಿರೋಧ ಪಕ್ಷಗಳಾದ ಬಿಜೆಪಿ, ಹಿಂದುಸ್ಥಾನಿ ಆವಾಮ್ ಮೋರ್ಚಾ ಮತ್ತು ಎಲ್‌ಜೆಪಿ ಸಹಿತವಾಗಿ ಎಲ್ಲ ಪಕ್ಷಗಳ ಸದಸ್ಯರು ಚೌಧರಿ ಅವರ ಹೆಸರನ್ನು ಸ್ಪೀಕರ್ ಹುದ್ದೆಗೆ ಪ್ರಸ್ತಾವಿಸಿ ಅವಿರೋಧವಾಗಿ ಆಯ್ಕೆಗೆ ಸಮ್ಮತಿಸಿದರು.
16ನೇ ಬಿಹಾರ ವಿಧಾನಸಭೆಯ ಸ್ಪೀಕರ್ ಹುದ್ದೆಗೆ ನಡೆದ ಚುನಾವಣೆಯ ವೇಳೆ ಸಿಪಿಐ-ಎಂಎಲ್ ನ ಮೂವರು ಸದಸ್ಯರು ಸದನದಲ್ಲಿ ಗೈರಾಗಿದ್ದರು.
58 ವರ್ಷದ ವಿಜಯ್ ಚೌಧರಿ ಸತತವಾಗಿ 5ನೇ ಬಾರಿ ಶಾಸಕರಾಗಿ ಆಯ್ಕೆಗೊಂಡಿದ್ದಾರೆ. 1982 ರಲ್ಲಿ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗುವ ಮೂಲಕ ರಾಜಕೀಯ ಜೀವನ ಆರಂಭಿಸಿದ ವಿಜಯ್ ಚೌಧರಿ ನಂತರ ಜೆಡಿಯು ಸೇರ್ಪಡೆಗೊಂಡರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


