ರಾಜಕೀಯ

ಇಂದು ಬಿಜೆಪಿ ಕೋರ್ ಕಮಿಟಿ ಸಭೆ

ವಿಧಾನಪರಿಷತ್ತು ಚುನಾವಣೆ ಸಂಬಂಧ ಇನ್ನೂ ನಾಲ್ಕು ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲು ಭಾನುವಾರ ಬಿಜೆಪಿಯ ಕೋರ್ ಕಮಿಟಿ ಸಭೆ ನಡೆಯಲಿದೆ...

ಇಂದು ಬಿಜೆಪಿ ಕೋರ್ ಕಮಿಟಿ ಸಭೆ
ಬಿಜೆಪಿ ಸಭೆ (ಸಂಗ್ರಹ ಚಿತ್ರ)
Published On :

ಬೆಂಗಳೂರು: ವಿಧಾನಪರಿಷತ್ತು ಚುನಾವಣೆ ಸಂಬಂಧ ಇನ್ನೂ ನಾಲ್ಕು ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲು ಭಾನುವಾರ ಬಿಜೆಪಿಯ ಕೋರ್ ಕಮಿಟಿ ಸಭೆ ನಡೆಯಲಿದೆ.

ಬಿಜೆಪಿಯಿಂದ ಒಟ್ಟು 25 ಕ್ಷೇತ್ರಗಳಲ್ಲಿ 12 ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು, ಇನ್ನೂ 13 ಅಭ್ಯರ್ಥಿಗಳ ಹೆಸರು ಪ್ರಕಟಿಸಬೇಕಿದೆ. ಬೆಳಗಾವಿ, ವಿಜಯಪುರ, ಧಾರವಾಡ, ಮೈಸೂರು ಹಾಗೂ  ದಕ್ಷಿಣ ಕನ್ನಡ ಕ್ಷೇತ್ರಗಳಲ್ಲಿ ದ್ವಿಸದಸ್ಯ ಸ್ಥಾನ ಇರುವುದರಿಂದ ಒಬ್ಬೊಬ್ಬ ಅಭ್ಯರ್ಥಿಯನ್ನು ಮಾತ್ರ ಕಣಕ್ಕಿಳಿಸಲಾಗುತ್ತಿದೆ. ಹೀಗಾಗಿ ಇನ್ನೂ 8 ಅಭ್ಯರ್ಥಿಗಳ ಹೆಸರುಗಳ ಬಗ್ಗೆ ಸಭೆಯಲ್ಲಿ  ಚರ್ಚೆಯಾಗುವ ಸಾಧ್ಯತೆಯಿದೆ. ದ್ವಿಸದಸ್ಯತ್ವದ ಕಾರಣದಿಂದ 25 ಕ್ಷೇತ್ರಗಳಲ್ಲಿ 20 ಅಭ್ಯರ್ಥಿಗಳು ಮಾತ್ರ ಸ್ಪರ್ಧಿಸಿದಂತಾಗುತ್ತದೆ. ಆದರೆ, ಈ ಕ್ಷೇತ್ರಗಳಲ್ಲಿ ಇಬ್ಬರನ್ನು ಚುನಾವಣೆಗೆ ಇಳಿಸಿದರೆ ಮತ ವಿಭಜನೆಯಾಗುವ ಸಾಧ್ಯತೆಯಿದೆ. ಇದರಿಂದ ಹೆಚ್ಚಿನ ಸ್ಥಾನಗಳನ್ನು ಕಳೆದುಕೊಳ್ಳುವ ಆತಂಕವೂ ಇದೆ. ಇದೇ ಕಾರಣಕ್ಕಾಗಿ ಇಬ್ಬರ ಬದಲು ಒಬ್ಬರನ್ನೇ ಕಣಕ್ಕಿಳಿಸಲು ತೀರ್ಮಾನಿಸಲಾಗಿದೆ.

ಭಾನುವಾರ ನಡೆಯಲಿರುವ ಸಭೆಯಲ್ಲಿ ಹಿರಿಯ ಮುಖಂಡರು ಈ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ. ನಾಮಪತ್ರ ಸಲ್ಲಿಸಲು ಬುಧವಾರ ಕೊನೆಯ ದಿನವಾಗಿದ್ದು, ಇಷ್ಟರೊಳಗೆ ಅಂತಿಮ ಪಟ್ಟಿ  ಹೊರಬರಬೇಕಿದೆ. ಈ ನಡುವೆ ಚುನಾವಣೆಗೆ ಹೆಚ್ಚಿನ ಹಣ ಖರ್ಚು ಮಾಡುವ ಆತಂಕದಿಂದ ಹಿಂದೆ ಸರಿದ ಅಭ್ಯರ್ಥಿಗಳ ಉದಾಹರಣೆಯೂ ಬಿಜೆಪಿ ಮುಂದಿದೆ. ಹೀಗಾಗಿ ಸಭೆಯಲ್ಲಿ ಈ  ಅಂಶವನ್ನೂ ಪರಿಗಣನೆಗೆ ತೆಗೆದುಕೊಂಡೇಪಟ್ಟಿ ಪ್ರಕಟಿಸಬೇಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.