ಬಂಡಾಯಗಾರರ ಮನವೊಲಿಸುವೆ: ಸಿಎಂ
ವಿಧಾನ ಪರಿಷತ್ತಿನ ಚುನಾವಣೆಗೆ ಟಿಕೆಟ್ ನಿರೀಕ್ಷಿಸಿದ್ದ ಕೆಲವು ಆಕಾಂಕ್ಷಿಗಳಲ್ಲಿ ಅಸಮಾಧಾನವಿರುವುದು ನಿಜ. ಇದು ಸಹಜ ಕೂಡ. ಅಸಮಾಧಾನಗೊಂಡವರನ್ನು ಸಮಾಧಾನಪಡಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ...
ಬೆಂಗಳೂರು: ವಿಧಾನ ಪರಿಷತ್ತಿನ ಚುನಾವಣೆಗೆ ಟಿಕೆಟ್ ನಿರೀಕ್ಷಿಸಿದ್ದ ಕೆಲವು ಆಕಾಂಕ್ಷಿಗಳಲ್ಲಿ ಅಸಮಾಧಾನವಿರುವುದು ನಿಜ. ಇದು ಸಹಜ ಕೂಡ. ಅಸಮಾಧಾನಗೊಂಡವರನ್ನು ಸಮಾಧಾನಪಡಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕಾಂಗ್ರೆಸ್ 21 ಸ್ಥಾನಗಳಲ್ಲಿ ಗೆಲ್ಲುವುದಕ್ಕೆ ಸಾಧ್ಯವಿದೆ. ಆದ್ದರಿಂದ 21 ಸ್ಥಾನಗಳಲ್ಲಿ ಮಾತ್ರ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿದ್ದೇವೆ. ಇದರ ಬಗ್ಗೆ ಅನುಮಾನ ಬೇಡ ಎಂದು ಅವರು ಭಾನುವಾರ ಸುದ್ದಿಗಾರರಿಗೆ ತಿಳಿಸಿದರು.
ಕೋಲಾರ ಜಿಲ್ಲೆ ಬಿಟ್ಟು ಉಳಿದೆಲ್ಲಾ ಸ್ಥಾನಗಳಿಗೂ ಅಭ್ಯರ್ಥಿಗಳನ್ನು ಪ್ರಕಟಿಸಲಾಗಿದೆ. ಕೋಲಾರದಲ್ಲಿ ಯಾರನ್ನು ಆಯ್ಕೆ ಮಾಡಬೇಕೆಂದು ತೀರ್ಮಾನ ಕೈಗೊಳ್ಳುವಂತೆ ಕೈಗೊಳ್ಳುವಂತೆ ಪಕ್ಷದ ರಾಜ್ಯ ಉಸ್ತುವಾರಿ ದಿಗ್ವಿಜಯಸಿಂಗ್ ಸೂಚಿಸಿದ್ದಾರೆ. ಆದ್ದರಿಂದ ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಜತೆ ಮಾತುಕತೆ ನಡೆಸುತ್ತೇನೆ. ಬಹುತೇಕ ಸೋಮವಾರ ಕೋಲಾರ ಅಭ್ಯರ್ಥಿಯನ್ನು ಅಂತಿಮಗೊಳಿಸುತ್ತೇವೆ ಎಂದರು.
ಅಂಬೇಡ್ಕರ್ ಸ್ಮರಣೆ: ಇದಕ್ಕೂ ಮುನ್ನ ಡಾ.ಬಿ.ಆರ್. ಅಂಬೇಡ್ಕರ್ ಪರಿನಿರ್ವಾಣ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ಮತ್ತೊಂದು ಹೆಸರೇ ಅಂಬೇಡ್ಕರ್. ಅವರು ಅಸಮಾನತೆಯ ನೋವು ಅನುಭವಿಸಿದ್ದವರು. ಅಧಕ್ಕಾಗಿಯೇ ಸಮಾನತೆಯ ತಳಹದಿಯಲ್ಲಿ ಸಮಾಜ ಕಟ್ಟಬೇಕೆಂದು ಹೋರಾಟ ನಡೆಸಿದರು. ಸಮಜಾದಲ್ಲಿ ಜಾತಿ ವ್ಯವಸ್ಥೆ ಇರವವರೆಗೂ ಮಾಸಲು ಬೇಕೆಂದು ಪ್ರತಿಪಾದಿಸಿದವರು ಎಂದು ಬಣ್ಣಿಸಿದರು.
ಸಾಮಾಜಿಕ ನ್ಯಾಯ ಎಂದು ಒಬ್ಬರ ಸೌಲಭ್ಯವನ್ನು ಮತ್ತೊಬ್ಬರಿಗೆ ಕಿತ್ತು ಕೊಡುವುದಲ್ಲ. ಎಲ್ಲರಿಗೂ ಸಮಾನ ಅವಕಾಶ ಸಿಗುವಂತೆ ಮಾಡಿ ಶೋಷಿತರನ್ನು ಮೇಲೆ ತರುವುದು. ಇದನ್ನು ಪ್ರತಿಪಾದಿಸಿದ ಅಂಬೇಡ್ಕರ್ ಅವರ ತತ್ವ ಆದರ್ಶವೇ ನಮಗೆ ದಾರಿ ದೀಪ ಎಂದು ಸಿದ್ದರಾಮಯ್ಯ ಹೇಳಿದರು. ಸಚಿವರಾದ ಆಂಜನೇಯ ಮತ್ತು ರಾಮಲಿಂಗಾ ರೆಡ್ಡಿ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

