ರಾಜಕೀಯ

ಬಿಜೆಪಿ ಬಂಡಾಯ ಶಮನ ಯತ್ನ ವಿಫಲ, ನಾಮಪತ್ರ ಹಿಂಪಡೆಯಲು ಯತ್ನಾಳ್ ನಕಾರ

ಡಿಸೆಂಬರ್ 27ರಂದು ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ ನ 25 ಕ್ಷೇತ್ರಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಸ್ಪರ್ಧಿಸಿರುವ ಬಂಡಾಯ ಅಭ್ಯರ್ಥಿಗಳ...

ಬಿಜೆಪಿ ಬಂಡಾಯ ಶಮನ ಯತ್ನ ವಿಫಲ, ನಾಮಪತ್ರ ಹಿಂಪಡೆಯಲು ಯತ್ನಾಳ್ ನಕಾರ
ಬಸನಗೌಡ ಪಾಟೀಲ್ ಯತ್ನಾಳ್
Published On :

ಬೆಂಗಳೂರು: ಡಿಸೆಂಬರ್ 27ರಂದು ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ ನ 25 ಕ್ಷೇತ್ರಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಸ್ಪರ್ಧಿಸಿರುವ ಬಂಡಾಯ ಅಭ್ಯರ್ಥಿಗಳ ಮನವೊಲಿಸುವಲ್ಲಿ ಬಿಜೆಪಿ ವಿಫಲವಾಗಿದ್ದು, ವಿಜಯಪುರ - ಬಾಗಲಕೋಟೆ ಬಂಡಾಯ ಅಭ್ಯರ್ಥಿ ಬಸನಗೌಡ ಪಾಟೀಲ್ ಯತ್ನಾಳ್ ನಾಮಪತ್ರ ಹಿಂಪಡೆಯಲು ನಿರಾಕರಿಸಿದ್ದಾರೆ.

ಬಿಜೆಪಿ ನಾಯಕ, ಮಾಜಿ ಸಚಿವ ಗೋವಿಂದ ಕಾರಜೋಳ ಅವರು ನಡೆಸಿದ ಸಂಧಾನ ಸಭೆ ವಿಫಲವಾಗಿದ್ದು, ಯಾವುದೇ ಕಾರಣಕ್ಕೂ ನಾಮಪತ್ರ ಹಿಂಪಡೆಯಲ್ಲ ಎಂದು ಯತ್ನಾಳ್ ಹೇಳಿದ್ದಾರೆ.

ಯತ್ನಾಳ್ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಮತ್ತು ಬಿಜೆಪಿ ರಾಜ್ಯಧ್ಯಕ್ಷರನ್ನಾಗಿ ನೇಮಕ ಮಾಡಬೇಕು ಎಂಬ ಬೇಡಿಕೆಯಿಟ್ಟಿದ್ದರು. ಆದರೆ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಯತ್ನಾಳ್ ಬೇಡಿಕೆಯನ್ನು ತಿರಸ್ಕರಿಸಿದ ಹಿನ್ನೆಲೆಯಲ್ಲಿ ನಾಮಪತ್ರ ಹಿಂಪಡೆಯಲು ನಿರಾರಕರಿಸಿದ್ದಾರೆ.

25 ವಿಧಾನ ಪರಿಷತ್ ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಗೆ ನಾಮಪತ್ರ ಹಿಂಪಡೆಯಲು ಇಂದು ಕಡೆಯ ದಿನವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.