ತಿಪ್ಪರಲಾಗ ಹಾಕಿದ್ರೂ ಬಿಜೆಪಿ, ಜೆಡಿಎಸ್ ಅಧಿಕಾರಕ್ಕೆ ಬರಲ್ಲ
ಬಿಜೆಪಿ ಹಾಗೂ ಜೆಡಿಎಸ್ ಎಷ್ಟೇ ತಿಪ್ಪರಲಾಗ ಹಾಕಿದರೂ ರಾಜ್ಯದಲ್ಲಿ ಅಧಿಕಾರಕ್ಕೆ ಬರಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರು: ಬಿಜೆಪಿ ಹಾಗೂ ಜೆಡಿಎಸ್ ಎಷ್ಟೇ ತಿಪ್ಪರಲಾಗ ಹಾಕಿದರೂ ರಾಜ್ಯದಲ್ಲಿ ಅಧಿಕಾರಕ್ಕೆ ಬರಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕಾಂಗ್ರೆಸ್ ಆಯೋಜಿಸಿದ್ದ ವಿಧಾನಪರಿಷತ್ ಚುನಾವಣಾ ಪ್ರಚಾರ ಸಭೆ ಉದ್ಘಾಟಿಸಿ ಮಾತನಾಡಿದ ಅವರು ರಾಜ್ಯದಲ್ಲಿ ಮತ್ತೆ ನಾವೇ (ಕಾಂಗ್ರೆಸ್) ಅಧಿಕಾರಕ್ಕೆ ಬರುತ್ತೇವೆ. ಅವರ ಅಪ್ಪನ ಆಣೆಗೂ ಆ ಪಕ್ಷದವರು ಅಧಿಕಾರಕ್ಕೆ ಬರಲ್ಲ, ಅದು ಸಾಧ್ಯವೂ ಇಲ್ಲ' ಎಂದು ಹೇಳಿದರು. ರಾಜ್ಯದಲ್ಲಿ ನಮ್ಮ ಸರ್ಕಾರ ಬಂದು ಎರಡೂವರೆ ವರ್ಷ ಕಳೆದಿದ್ದರೂ ಒಂದೇ ಒಂದು ಹಗರಣ ನಡೆದಿಲ್ಲ. ಹಗರಣ ನಡೆದಿರುವುದಾಗಿ ಕೆಲವರು ಆರೋಪ ಮಾಡುತ್ತಿದ್ದಾರಷ್ಟೇ. ಪರಿಷತ್ ಚುನಾವಣೆಯಲ್ಲಿ ಇಡೀ ರಾಜ್ಯದಲ್ಲಿ ಬಿಜೆಪಿ, ಜೆಡಿಎಸ್‍ಗಿಂತ ಕಾಂಗ್ರೆಸ್‍ಗೆ ಹೆಚ್ಚಿನ ಅವಕಾಶವಿದೆ ಎಂದು ಸಿಎಂ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


