ರಾಜಕೀಯ

ನ್ಯಾಷನಲ್ ಹೆರಾಲ್ಡ್ ಪ್ರಕರಣ ನಾಳೆ ಕೈ ಪ್ರತಿಭಟನೆ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸರ್ಕಾರ ರಾಜಕೀಯ ಪಿತ್ತೂರಿ...

ನ್ಯಾಷನಲ್ ಹೆರಾಲ್ಡ್ ಪ್ರಕರಣ ನಾಳೆ ಕೈ ಪ್ರತಿಭಟನೆ
ಕಾಂಗ್ರೆಸ್
Published On :

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸರ್ಕಾರ ರಾಜಕೀಯ ಪಿತ್ತೂರಿ ನಡೆಸುತ್ತಿದೆ ಎಂದು ಆರೋಪಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ.

ಬೆಂಗಳೂರು ನಗರ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಹಾಗೂ ಬೆಂಗಳೂರು ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಟಿ.ಸೋಮಶೇಖರ್ ಅಧ್ಯಕ್ಷತೆಯಲ್ಲಿ ಪ್ರದೇಶ ಕಾಂಗ್ರೆಸ್ ಕಚೇರಿಯಲ್ಲಿ ನಡೆದ  ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಡಿಸೆಂಬರ್ 19ರಂದು ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ಜತೆಗೆ ಎಲ್ಲ ಜಿಲ್ಲಾ ಕಾಂಗ್ರೆಸ್ ಘಟಕಗಳ ವ್ಯಾಪ್ತಿಯಲ್ಲೂ ಪ್ರತಿಭಟನೆ ನಡೆಸಲು ಸೂಚನೆ ನೀಡಲಾಗಿದೆ.

ಮತ ಯಾಚನೆ: ಇದರ ಜತೆಗೆ ಬೆಂಗಳೂರು ನಗರದ ಕಾಂಗ್ರೆಸ್ ಅಭ್ಯರ್ಥಿ ಎಂ.ನಾರಾಯಣಸ್ವಾಮಿ ಅವರ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಶುಕ್ರವಾರ ಮತಯಾಚನೆ ಮಾಡಲಿದ್ದಾರೆ. ಅರಮನೆ ಮೈದಾನದಲ್ಲಿ ಮಧ್ಯಾಹ್ನ 2.30ಕ್ಕೆ ಸಭೆ ಆಯೋಜಿಸಲಾಗಿದೆ. ಪ್ರಚಾರಕ್ಕಾಗಿ ಗೃಹ ಸಚಿವ ಪರಮೇಶ್ವರ್ ಹೈದರಾಬಾದ್ ಕರ್ನಾಟಕದ ಜಿಲ್ಲೆಗಳಲ್ಲಿ
ಪ್ರವಾಸ ಮಾಡಬೇಕಿತ್ತು. ಆದರೆ ಅವರು, ತುಮಕೂರು ಚಿತ್ರದುರ್ಗಕ್ಕೆ ತಮ್ಮನ್ನು ಸೀಮಿತಗೊಳಿಸಿಕೊಂಡಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.