ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ
ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ರೀತಿಯ ಆಂತರಿಕ ಭಿನ್ನಾಭಿಪ್ರಾಯವಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿಯೇ ...

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ರೀತಿಯ ಆಂತರಿಕ ಭಿನ್ನಾಭಿಪ್ರಾಯವಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿಯೇ ಕಾಂಗ್ರೆಸ್ ಸರ್ಕಾರ ಐದು ವರ್ಷ ಪೂರೈಸಲಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಕವಿ ತಿರುವಳ್ಳುವರ್ ಜಯಂತ್ಯುತ್ಸವ ಅಂಗವಾಗಿ ನಗರದ ಹಲಸೂರು ಕೆರೆಬಳಿಯಿರುವ ತಿರುವಳ್ಳುವರ್ ಪ್ರತಿಮೆಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ನಂತರ ಅವರು, ಸುದ್ದಿಗಾರರೊಂದಿಗೆ ಮಾತನಾಡಿದರು. ಒಳ್ಳೆಯ ಆಡಳಿತ ನಡೆಸುವ ನಿಟ್ಟಿನಲ್ಲಿ ಸರ್ಕಾರದ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿವೆ. ಈ ಹಂತದಲ್ಲಿ ಒಂದಷ್ಟು ಬಿರುಸಿನ ಮಾತುಕತೆಗಳು ನಡೆದಿರಬಹುದು. ಆದರೆ, ಇದನ್ನು ಭಿನ್ನಾಭಿಪ್ರಾಯ, ಆಂತರಿಕ ಜಗಳ ಎಂದು ಹೇಳುವುದು ಸರಿಯಲ್ಲ. ಪಕ್ಷದಲ್ಲಿಒಂದಷ್ಟು ಲೋಪದೋಷಗಳಿರ ಬಹುದು,ಅದನ್ನು ತಿದ್ದಿ ನಡೆಯುವ ಪ್ರಯತ್ನ ಇದಾಗಿದೆ ಎಂದರು. ಆಡಳಿತದಲ್ಲಿ ಹಸ್ತಕ್ಷೇಪ ಮಾಡಲಾಗುತ್ತಿದೆ ಎಂಬ ವಿಚಾರವನ್ನು ಯಾರು, ಯಾವ ಕಾರಣಕ್ಕೆ ಹೇಳುತ್ತಿದ್ದಾರೋ ಗೊತ್ತಿಲ್ಲ. ಒಳ್ಳೆಯ ಆಡಳಿತ ನೀಡಲು ಚರ್ಚೆಗಳು ಅಗತ್ಯ. ಇದನ್ನು ನಾವು ಬಗೆಹರಿಸಿಕೊಳ್ಳುತ್ತೇವೆ ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


