ರಾಜಕೀಯ

ನಿತೀಶ್ ಬೆಂಬಲಿಸಿ ರಾಜ್ಯಪಾಲರಿಗೆ ಶಾಸಕ ಪತ್ರ

ನಿತೀಶ್ ಬೆಂಬಲಿಸಿ ರಾಜ್ಯಪಾಲರಿಗೆ ಶಾಸಕ ಪತ್ರ
ನಿತೀಶ್ ಕುಮಾರ್
Published On :

ಪಾಟ್ನಾ: ಜೆಡಿಯು ಶಾಸಕಾಂಗ ಪಕ್ಷದ ನಾಯಕ ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು 130 ಶಾಸಕರ ಬಲ ಹೊಂದಿದ್ದಾರೆ. ಹೀಗಾಗಿ ಸರ್ಕಾರ ರಚನೆಗೆ ಅವಕಾಶ ನೀಡಬೇಕು ಎಂದು ಕೋರಿ ಜೆಡಿಯು ಹಾಗೂ ಮಿತ್ರ ಪಕ್ಷಗಳು ಭಾನುವಾರ ರಾಜ್ಯಪಾಲರಿಗೆ ಮನವಿ ಸಲ್ಲಿಸಿವೆ.

ಆರ್ ಜೆಡಿ, ಕಾಂಗ್ರೆಸ್, ಸಿಪಿಐ, ಪಕ್ಷೇತರ ಶಾಸಕ ದುಲಾಲಚಂದ ಗೋಸ್ವಾಮಿ ಸೇರಿದಂತೆ 130 ಶಾಸಕರ ಬೆಂಬಲ ಪಕ್ಷದ ನಿತೀಶ್ ಕುಮಾರ್ ಅವರಿಗೆ ಇರುವ ಕುರಿತು ಮನವಿಯಲ್ಲಿ ವಿವರಿಸಲಾಗಿದೆ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ. ನಾರಾಯಣ ಸಿಂಗ್ ಅವರು ರಾಜಭವನಕ್ಕೆ ತೆರಳಿ ಮನವಿ ಸಲ್ಲಿಸಿದ ಬಳಿಕ ಸುದ್ದಿಗಾರರಿಗೆ ತಿಳಿಸಿದರು.

ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ಅವರು ಸೋಮವಾರ ನಗರಕ್ಕೆ ಆಗಮಿಸಲಿದ್ದು, ಜೆಡಿಯು ಮುಖಂಡ ನಿತೀಶ್ ಕುಮಾರ್ ಅವರು ರಾಜ್ಯಪಾಲರನ್ನು ಭೇಟಿ ಮಾಡಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

243 ಸದಸ್ಯ ಬಲದ ವಿಧಾನಸಭೆಯಲ್ಲಿ ಜೆಡಿಯು 111, ಬಿಜೆಪಿ 87, ಆರ್ ಜೆಡಿ 24, ಕಾಂಗ್ರೆಸ್ 5, ಇತರ ಐದು ಶಾಸಕ ಸ್ಥಾನಗಳ ಬಲ ಹೊಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.