ಎಚ್ಚೆತ್ತ ಮತದಾರನಿಂದ ಶಿಕ್ಷೆ: ಎಚ್‌ಡಿ ದೇವೇಗೌಡ
ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ ರಾಷ್ಟ್ರೀಯ ಪಕ್ಷಗಳಿಗೆ ದೆಹಲಿ ಮತದಾರ ನೀಡಿದ ಶಿಕ್ಷೆ ಎಂದು...

ಬೆಂಗಳೂರು: ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ ರಾಷ್ಟ್ರೀಯ ಪಕ್ಷಗಳಿಗೆ ದೆಹಲಿ ಮತದಾರ ನೀಡಿದ ಶಿಕ್ಷೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಹೇಳಿದ್ದಾರೆ.
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಸಾಧನೆ ಮಾಡಿರುವ ಆಮ್ ಆದ್ಮಿ ಪಕ್ಷಕ್ಕೆ ಮತ್ತು ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರಿಗೆ ಜೆಡಿಎಸ್ ರಾಷ್ಟ್ರಾಧ್ಯಕ್ಷ ಮತ್ತು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಶುಭಾಷಯ ಕೋರಿದ್ದಾರೆ. ಅಲ್ಲದೆ ರಾಷ್ಚ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ವಿರುದ್ಧ ಕಿಡಿಕಾರಿದ್ದಾರೆ.
ರಾಷ್ಟ್ರೀಯ ಪಕ್ಷಗಳ ಅಹಂಕಾರಕ್ಕೆ ದೆಹಲಿ ಮತದಾರರು ನೀಡಿರುವ ಶಿಕ್ಷೆ ಇದು. ಈ ಎರಡೂ ಪಕ್ಷಗಳು ದೇಶದಲ್ಲಿ ಪ್ರಾಂತೀಯ ಪಕ್ಷಗಳನ್ನು ತುಳಿಯಲೆತ್ನಿಸಿದವು. ದೇಶಾದ್ಯಂತ ಮೋದಿ ಅಲೆ ಇದೆ. ನರೇಂದ್ರ ಮೋದಿ ನಂಬರ್ 1 ನಾಯಕ ಎಂದು ಬಿಜೆಪಿ ಪಕ್ಷದ ನಾಯಕರು ಬಿಂಬಿಸುತ್ತಿದ್ದರು. ಆದರೆ ದೆಹಲಿಯಲ್ಲಿ ಆದದ್ದೇನು? ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ತೀವ್ರ ಹಿನ್ನಡೆ ಅನುಭವಿಸಿದೆ. ರಾಷ್ಟ್ರೀಯ ಪಕ್ಷಗಳ ಒತ್ತಡದ ನಡುವೆಯೂ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ ಅಭೂತಪೂರ್ವ ಸಾಧನೆ ಮಾಡಿದೆ. ದೇಶದ ವಿವಿಧ ಭಾಗಗಳಿಂದ ಆಪ್ ಕಾರ್ಯಕರ್ತರು ದೆಹಲಿಗೆ ತೆರಳಿ ಪ್ರಚಾರ ಮಾಡಿದ್ದಾರೆ. ಇದರ ಫಲವೇ ಇಂದು ಆಪ್ ಪಕ್ಷ ಭರ್ಜರಿ ಜಯಗಳಿಸಿದೆ ಎಂದು ದೇವೇಗೌಡ ಅವರು ಹೇಳಿದರು.
ಫಲಿತಾಂಶದ ನಿರೀಕ್ಷೆ ಇತ್ತು: ಸಿಎಂ ಸಿದ್ದರಾಮಯ್ಯ
ಇನ್ನು ದೆಹಲಿ ಚುನಾವಣಾ ಫಲಿತಾಂಶಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ ಗೆಲುವು ಸಾಧಿಸುತ್ತದೆ ಎಂಬ ನಿರೀಕ್ಷೆ ಇತ್ತು. ಆದರೆ ಇಷ್ಟು ಭಾರಿ ಪ್ರಮಾಣದ ಪೂರ್ಣ ಬೆಂಬಲದೊಂದಿಗೆ ಜಯ ಗಳಿಸುತ್ತದೆ ಎಂದು ನಿರೀಕ್ಷಿಸಿರಲಿಲ್ಲ ಎಂದು ಹೇಳಿದರು.
ಅಲ್ಲದೆ ಕಾಂಗ್ರೆಸ್ ಪಕ್ಷ ಬಿಜೆಪಿಯನ್ನು ಸೋಲಿಸಲು ಸಾಧ್ಯವಿಲ್ಲ ಎಂದು ಭಾವಿಸಿ ದೆಹಲಿ ಜನತೆ ಆಮ್ ಆದ್ಮಿ ಪಕ್ಷಕ್ಕೆ ಮತ ನೀಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


