ಬಿಬಿಎಂಪಿ ಅವ್ಯವಹಾರ ತನಿಖೆಗೆ ಸಿಎಂ ಆದೇಶ
ಬಿಬಿಎಂಪಿ ಅವ್ಯವಹಾರ ಬಗ್ಗೆ ದಾಖಲೆ ಪರಿಶೀಲಿಸಿ ವರದಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಮಹತ್ವದ...

ಬೆಂಗಳೂರು: ಬಿಬಿಎಂಪಿ ಅವ್ಯವಹಾರ ಬಗ್ಗೆ ದಾಖಲೆ ಪರಿಶೀಲಿಸಿ ವರದಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಮಹತ್ವದ ಆದೇಶ ಹೊರಡಿಸಿದ್ದಾರೆ. ಬಿಬಿಎಂಪಿ ಕರ್ಮಕಾಂಡ ಮತ್ತು ಚುನಾವಣೆ ಮುಂದೂಡಿಕೆ ಬಗ್ಗೆ ಆರೋಪ- ಪ್ರತ್ಯಾರೋಪ ನಡೆಯುತ್ತಿರುವ ಮಧ್ಯೆಯೇ ಸಿದ್ದರಾಮಯ್ಯ ನೀಡಿರುವ ಈ ಆದೇಶಕ್ಕೆ ವಿಶೇಷ ಅರ್ಥ ಲಭ್ಯವಾಗಿದ್ದು, ದಾಖಲೆ ಪರಿಶೀಲನೆಗಾಗಿ ಹಿರಿಯ ಐಎಎಸ್ ಅಧಿಕಾರಿಯನ್ನು ನಿಯುಕ್ತಿಗೊಳಿಸಲಾಗಿದೆ.
ಐಎಎಸ್ ಅಧಿಕಾರಿ ರಾಜೇಂದ್ರ ಕುಮಾರ್ ಕಠಾರಿಯಾ ಅವರಿಗೆ ದಾಖಲೆ ಪರಿಶೀಲನೆ ನಡೆಸಿ ವರದಿ ನೀಡುವ ಜವಾಬ್ದಾರಿ ನೀಡಲಾಗಿದ್ದು, ಬೆಂಗಳೂರು ನಗರದ ರಸ್ತೆಗಳು, ಘನತ್ಯಾಜ್ಯ ವಿಲೇವಾರಿ, ಜಾಹೀರಾತು, ನಿಯಮ ಬಾಹಿರ ಟೆಂಡರ್, ಕಳಪೆ ಕಾಮಗಾರಿ, ಆಡಳಿತ ವ್ಯವಸ್ಥೆ, ಹಣಕಾಸಿನ ಅವ್ಯವಸ್ಥೆ, ಅನಧಿಕೃತ ಫ್ಲೆ ಕ್ಸ್ ಸೇರಿದಂತೆ ಪಾಲಿಕೆಯಲ್ಲಿ ನಡೆದ ಎಲ್ಲ ಅವ್ಯವಹಾರಗಳ ಬಗ್ಗೆ ತನಿಖೆ ನಡೆಸುವುದು ಸೂಕ್ತ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸಭೆಯಲ್ಲಿ ಸಲಹೆ ನೀಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಸಿದ್ದರಾಮಯ್ಯ ಈ ಆದೇಶ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


