ಉದ್ಯೋಗ ಸೃಷ್ಟಿಯಲ್ಲಿ ರಾಜ್ಯ ಹಿಂದೆ: ಶೆಟ್ಟರ್
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಒಂದೇ ಒಂದು ಹೊಸ ಉದ್ಯೋಗ...

ಗದಗ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಒಂದೇ ಒಂದು ಹೊಸ ಉದ್ಯೋಗ ಸೃಷ್ಟಿ ಆಗಿಲ್ಲ, ಭ್ರಷ್ಟಾಚಾರ ನಡೆಸುವುದೇ ಕಾಂಗ್ರೆಸ್‌ನವರಿಗೆ ದೊಡ್ಡ ಉದ್ಯೋಗವಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್ ಆರೋಪಿಸಿದರು.
ಅವರು ಶನಿವಾರ ಗದಗ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಉತ್ತರ ಕರ್ನಾಟಕದಲ್ಲಿ ಕೈಗಾರಿಕೆ ಸ್ಥಾಪನೆಯಾಗುವ ನಿಟ್ಟಿನಲ್ಲಿ ಸರ್ಕಾರ ಮಾಡಿದ ನಿರ್ಲಕ್ಷ್ಯ ಧೋರಣೆಯಿಂದ ಧಾರವಾಡಕ್ಕೆ ಬರಬೇಕಾಗಿದ್ದ ಹೀರೋ ಕಂಪನಿ ಇಂದು ಆಂಧ್ರಪ್ರದೇಶದ ಪಾಲಾಯಿತು.
ರಾಜ್ಯದಲ್ಲಿ ಯಾವುದೇ ನೂತನ ಕೈಗಾರಿಕೆಗಳು ಬಂದಿಲ್ಲ, ಬಂಡವಾಳ ಹೂಡಿಕೆ ಮಾಡಲು ಸೂಕ್ತವಾದ ವಾತಾವರಣ ನಿರ್ಮಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


