ಕೈಗಾರಿಕೆ ಅಭಿವೃದ್ಧಿಗೆ ನೆರವು
ರಾಜ್ಯದ ಕೈಗಾರಿಕೆ ಅಭಿವೃದ್ಧಿಗೆ`ಕೈಗಾರಿಕೆ ಹಾಗೂ ಮೂಲ ಸೌಕರ್ಯ ಅಭಿವೃದ್ಧಿಗೆ ನಿಗಮ'ವು ಅಪಾರ ಕೊಡುಗೆ ನೀಡಿದೆ ಎಂದು...

ಬೆಂಗಳೂರು: ರಾಜ್ಯದ ಕೈಗಾರಿಕೆ ಅಭಿವೃದ್ಧಿಗೆ`ಕೈಗಾರಿಕೆ ಹಾಗೂ ಮೂಲ ಸೌಕರ್ಯ ಅಭಿವೃದ್ಧಿಗೆ ನಿಗಮ'ವು ಅಪಾರ ಕೊಡುಗೆ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇನ್ಫೋಸಿಸ್ ಸೇರಿದಂತೆ ಸಾಕಷ್ಟು ಕಂಪನಿಗಳ ಸ್ಥಾಪನೆ ಹಾಗೂ ಅಭಿವೃದ್ಧಿಯಲ್ಲಿ ನಿಗಮದ ಪಾತ್ರ ದೊಡ್ಡದಿದೆ. ಸುಮಾರು 2300 ಕಂಪನಿಗಳ ಹುಟ್ಟಿಗೆ ಕಾರಣವಾದ ಸಂಸ್ಥೆಯು ರು. 2200 ಕೋಟಿಗೂ ಅಧಿಕ ಆರ್ಥಿಕ ನೆರವು ನೀಡಿದೆ. ಇನ್ಫೋಸಿಸ್ ನ ನಾರಾಯಣಮೂರ್ತಿ ಅವರು ಎಂದಿಗೂ ಇದನ್ನು ಸ್ಮರಿಸಿಕೊಳ್ಳುತ್ತಾರೆ ಎಂದು ಕರ್ನಾಟಕ ರಾಜ್ಯ ಕೈಗಾರಿಕೆ ಹಾಗೂ ಮೂಲಸೌಕರ್ಯ ನಿಗಮದ ಸುವರ್ಣ ಮಹೋತ್ಸವದಲ್ಲಿ ಅವರು ಅಭಿಪ್ರಾಯ ಪಟ್ಟರು.
ಸರ್ಕಾರಿ ಹಾಗೂ ಖಾಸಗಿ ಕಂಪನಿಗಳಿಗೆ ನಿಗಮದಿಂದ ಆರ್ಥಿಕ ನೆರವು ನೀಡಲಾಗಿದೆ. ರಾಜ್ಯದಲ್ಲಿ ಕೈಗಾರಿಕೆ ಸ್ಥಾಪನೆ ಹಾಗೂ ಬೆಳವಣಿಗೆಯಾಗಿದ್ದರೆ ನಿಗಮದ ಪಾತ್ರ ಮುಖ್ಯವಾಗಿದೆ. ಭವಿಷ್ಯದಲ್ಲಿಯೂ ಇದೇ ಸಹಕಾರ ಮುಂದುವರಿಯಲಿದೆ. ಹೊಸ ಕಂಪನಿಗಳ ಪಾಲಿಗೆ ಕೆಎಸ್‍ಐಐಡಿಸಿ ಸಂಸ್ಥೆಯು ಮಾರ್ಗದರ್ಶಕನಂತೆ ಕೆಲಸ ಮಾಡುತ್ತಿದೆ ಎಂದು ಹೇಳಿದರು. ರಾಜ್ಯವು ಮೊದಲಿನಿಂದಲೂ ಕೈಗಾರಿಕೆ ಸ್ನೇಹಿಯಾಗಿದೆ. ಈಗ ಮತ್ತಷ್ಟು ಕೈಗಾರಿಕೆ ಸ್ನೇಹಿ ನೀತಿಗಳನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ ಎಂದು ಹೇಳಿದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


