ನಾಸ್ತಿಕನಲ್ಲ, ಗೌಡರಂಥ ಆಸ್ತಿಕನೂ ಅಲ್ಲ
ನಾನು ಯಾವತ್ತೂ ನಾಸ್ತಿಕ ಎಂದು ಹೇಳಿಕೊಂಡಿಲ್ಲ. ಆದರೆ ದೇವೇಗೌಡರಷ್ಟು ಮೂಢನಂಬಿಕೆ, ಕಂದಾಚಾರಗಳಲ್ಲಿ ನಂಬಿಕೆ ಇಟ್ಟುಕೊಂಡಿಲ್ಲ ಎಂದು ಮುಖ್ಯಮಂತ್ರಿ...

ಕಾರ್ಕಳ: ನಾನು ಯಾವತ್ತೂ ನಾಸ್ತಿಕ ಎಂದು ಹೇಳಿಕೊಂಡಿಲ್ಲ. ಆದರೆ ದೇವೇಗೌಡರಷ್ಟು ಮೂಢನಂಬಿಕೆ, ಕಂದಾಚಾರಗಳಲ್ಲಿ ನಂಬಿಕೆ ಇಟ್ಟುಕೊಂಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕಾರ್ಕಳ ಬಾಹುಬಲಿ ಮಹಾಮಸ್ತಕಾಭಿಷೇಕ ಮಹೋತ್ಸವದಲ್ಲಿ ಭಾಗವಹಿಸಲು ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಅರ್ಕಾವತಿ ಡಿನೋಟಿಫಿಕೇಶನ್ ಹಗರಣದಲ್ಲಿ ತಪ್ಪು ಮಾಡಿದ್ದರಿಂದ ಭಯಗೊಂಡು ತಿರುಪತಿಗೆ ಹೋಗಿದ್ದಾರೆ ಎಂಬ ದೇವೇಗೊಡರ ಟೀಕೆಗೆ ಅವರು ಈ ಉತ್ತರ ನೀಡಿದ್ದಾರೆ.
ಅರ್ಕಾವತಿ ಹಗರಣದಲ್ಲಿ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ರಾಜಿನಾಮೆ ಪಡೆಯಬೇಕು ಎಂದು ದೇವೇಗೌಡರು ಹೇಳಿರುವುದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅದನ್ನೆಲ್ಲ ಹೇಳುವುದಕ್ಕೆ ದೇವೇಗೌಡ ಯಾರು? ನಮ್ಮ ಪಕ್ಷಕ್ಕೂ ಅವರಿಗೂ ಏನು ಸಂಬಂಧ ಎಂದು ಖಾರವಾಗಿ ಪ್ರತಿಕ್ರಿಯಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


