ರಾಜಕೀಯ

ಅವಕಾಶ ಸಿಕ್ಕರೆ ದಲಿತರು ಸಿಎಂ ಆಗಲಿ

ಸದ್ಯಕ್ಕಂತೂ ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಆದರೆ, ದಲಿತರೊಬ್ಬರು ಮುಖ್ಯಮಂತ್ರಿ ಸ್ಥಾನ ಕೇಳುವುದರಲ್ಲಿ ತಪ್ಪೇನಿಲ್ಲ...

ಅವಕಾಶ ಸಿಕ್ಕರೆ ದಲಿತರು ಸಿಎಂ ಆಗಲಿ
ಶಾಸಕ ರಮೇಶ್ ಕುಮಾರ್ (ಸಂಗ್ರಹ ಚಿತ್ರ)
Published On :

ಬೆಂಗಳೂರು: ಸದ್ಯಕ್ಕಂತೂ ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಆದರೆ, ದಲಿತರೊಬ್ಬರು ಮುಖ್ಯಮಂತ್ರಿ ಸ್ಥಾನ ಕೇಳುವುದರಲ್ಲಿ ತಪ್ಪೇನಿಲ್ಲ. ಅವಕಾಶ ಸಿಕ್ಕರೆ ದಲಿತರು ಮುಖ್ಯಮಂತ್ರಿ ಆಗಲಿ ಎಂದು ಶಾಸಕ ರಮೇಶ್ ಕುಮಾರ್ ಹೇಳಿದ್ದಾರೆ.

ನಗರದ ಫ್ರೀಡಂ ಪಾರ್ಕ್‍ನಲ್ಲಿ ಶೂದ್ರಸೇನೆ ಆಯೋಜಿಸಿದ್ದ ಕಾರ್ಯಕ್ರಮದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದಲಿತರೊಬ್ಬರು ಮುಖ್ಯಮಂತ್ರಿಯಾಗಬೇಕು ಎನ್ನುವ ಜಾಗೃತಿ ಮೂಡಿರುವುದು ಒಳ್ಳೆಯ ಬೆಳವಣಿಗೆ. ಆ ಬಗ್ಗೆ ಪ್ರಶ್ನೆ ಮಾಡುವುದನ್ನು ತಪ್ಪು ಎನ್ನುವುದು ಸರಿಯಲ್ಲ. ಇದು ಪ್ರಜಾಪ್ರಭುತ್ವದಲ್ಲಿ ಯಾರೂ ಬೇಕಾದರೂ ಮುಖ್ಯಮಂತ್ರಿಯಾಗಬಹುದು. ಆದರೆ ಅವಕಾಶ ಸಿಗಬೇಕಷ್ಟೆ. ಆದ ಮಾತ್ರಕ್ಕೆ ಅವರು ಸಿಎಂ ಸ್ಥಾನ ಬೇಕು ಎಂದು ಕೇಳುವುದರಲ್ಲಿ ಯಾವ ತಪ್ಪೂ ಇಲ್ಲ ಎಂದು ಹೇಳಿದರು.

ಇಲ್ಲಿಯವರೆಗೆ ಯಾವ ದಲಿತ ವರ್ಗದ ನಾಯಕರೂ ಮುಖ್ಯಮಂತ್ರಿಯಾಗಿಲ್ಲ. ಈ ಬಗ್ಗೆ ಚಕಾರವೂ ಎತ್ತುತ್ತಿರಲಿಲ್ಲ. ಈಗ ಈ ಬಗ್ಗೆ ಧ್ವನಿ ಎದ್ದಿರುವುದು ಉತ್ತಮ ಬೆಳವಣಿಗೆಯಾಗಿದೆ. ಮುಂದೊಂದು ದಿನ ರಾಜ್ಯ ದಲಿತ ಮುಖ್ಯಮಂತ್ರಿಯೊಬ್ಬರನ್ನು ಕಾಣಬಹುದು. ಇದೇನೇ ಇರಲಿ ಸದ್ಯಕ್ಕಂತೂ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಹೀಗಾಗಿ ಈ ವಿಚಾರದ ಬಗ್ಗೆ ಚರ್ಚೆ ನಡೆಸುವುದು ಅನಗತ್ಯ ಎಂದು ಹೇಳಿದರು.

ಮತಾಂತರಗೊಂಡವರನ್ನು `ಘರ್ ವಾಪಸಿ' ಮೂಲಕ ಬಿಜೆಪಿಯು ಮರು ಮತಾಂತರಕ್ಕೆ ಮುಂದಾಗುತ್ತಿದೆ. ಇಂತಹವರು ದಲಿತರನ್ನು ಮುಖ್ಯಮಂತ್ರಿ ಮಾಡುತ್ತಾರೆಯೇ ಎಂದು ಪ್ರಶ್ನಿಸಿದ ಅವರು ಕಾಂಗ್ರೆಸ್‍ನಲ್ಲಿ ಮಾತ್ರ ಅದು ಸಾಧ್ಯ ಎಂದರು. ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮಾಜಮುಖಿಯಾಗಿ ಕೆಲಸ ಮಾಡುವ ಎಲ್ಲ ರಂಗದ ನಾಯಕರ ವಿರುದ್ಧ ಗಾಳಿ ಮಾತುಗಳನ್ನು ತೇಲಿ ಬಿಟ್ಟು ಅದನ್ನೇ ದೊಡ್ಡದು ಮಾಡಿ ಚಾರಿತ್ರ್ಯವಧೆ ಮಾಡಲಾಗುತ್ತದೆ. ಇದಕ್ಕೆ ಉತ್ತರ ನೀಡುವುದರಲ್ಲೇ ವ್ಯಕ್ತಿಯ ಕಾಲ ಕಳೆದು ಹೋಗುತ್ತದೆ ಎಂದು ಅಭಿಪ್ರಾಯಪಟ್ಟರು.

ನನ್ನ ವಿರುದ್ಧವೂ, ನಾನು ಕೊಲೆಗಡುಕ ಎನ್ನುವ ಗಾಳಿ ಸುದ್ದಿ ತೇಲಿ ಬಿಡಲಾಗಿತ್ತು. ಅದು ಎಷ್ಟರ ಮಟ್ಟಿಗೆ ಎಂದರೆ ಕೆಲವರು ನನ್ನ ಬಳಿ ಬಂದು ಕೊಲೆ ಸುಪಾರಿ ನೀಡುವುದರ ಮಟ್ಟಿಗೆ ದೊಡ್ಡದಾಗಿತ್ತು. ಹೀಗೆ ಸಮಾಜ ಮುಖಿಯಾಗಿರುವವರನ್ನು ವ್ಯವಸ್ಥಿತವಾಗಿ ಮಾನಸಿಕ ಸ್ಥೈರ್ಯ ಕುಗ್ಗಿಸುವ ಪ್ರಯತ್ನ ನಡೆಯುತ್ತಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.