ರಾಜಕೀಯ

ಸಿಎಂ ಜೊತೆ ಅಂಬರೀಷ್ ಮುನಿಸು

ಮಂಡ್ಯ ಜಿಲ್ಲಾ ರಾಜಕಾರಣ ಸಂಬಂಧ ಸಿಎಂ ಸಿದ್ದರಾಮಯ್ಯ ಜತೆ ಮುನಿಸಿಕೊಂಡಿರುವ ವಸತಿ ಸಚಿವ ಅಂಬರೀಷ್ ರಾಜಿನಾಮೆ ...

ಸಿಎಂ ಜೊತೆ ಅಂಬರೀಷ್ ಮುನಿಸು
ಅಂಬರೀಷ್
Published On :

ಸುವರ್ಣ ವಿಧಾನಸೌಧ: ಮಂಡ್ಯ ಜಿಲ್ಲಾ ರಾಜಕಾರಣ ಸಂಬಂಧ ಸಿಎಂ ಸಿದ್ದರಾಮಯ್ಯ ಜತೆ ಮುನಿಸಿಕೊಂಡಿರುವ ವಸತಿ ಸಚಿವ ಅಂಬರೀಷ್ ರಾಜಿನಾಮೆ ಬೆದರಿಕೆಯೊಂದಿಗೆ ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನ ಬಿಟ್ಟು ಬೆಂಗಳೂರಿಗೆ ತೆರಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅಂಬರೀಷ್ ಜಿಲ್ಲಾ  ಉಸ್ತುವಾರಿ ಸಚಿವನಾದರೂ ತಮ್ಮನ್ನು ಗಣನೆಗೆ ತೆಗೆದುಕೊಳ್ಳದೇ ಇರುವ ಬಗ್ಗೆ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಸಂಪುಟದ ಸದಸ್ಯನಾಗಿ ಮತ್ತು  ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವನಾಗಿ ನಾನು 2 ವರ್ಷದಿಂದ ನಿಮ್ಮ ಜತೆ ವಿಶ್ವಾಸ, ನಿಷ್ಠೆಯಿಂದಿದ್ದೇನೆ. ವಹಿಸಿದ ಜವಾ ಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿದ್ದೇನೆ. ಆದರೆ, ನೀವು ನಿರೀಕ್ಷಿತ ಸಹಕಾರ ನೀಡದೇ
ಇರುವುದು ಬೇಸರ ತಂದಿದೆ ಎಂದು ಪತ್ರದಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನನ್ನ ಮಾತಿಗೆ ಬೆಲೆ ಇಲ್ಲದೇ ಇದ್ದರೆ ನಾನು ಏಕೆ ಈ ಹುದ್ದೆಯಲ್ಲಿ ಮುಂದುವರಿಯಬೇಕು.
ನಿಮಗೆ ಬೇಕಾದವರನ್ನೇ ಮಾಡಿಕೊಳ್ಳಿ ಎಂದಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ ದೂರವಾಣಿ ಮೂಲಕ ಮಾತನಾಡಿದ್ದು, ದುಡುಕಿನ ನಿರ್ಧಾರ ತೆಗೆದುಕೊಳ್ಳದಂತೆ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.