ಮೃತ ರೈತರ ಕುಟುಂಬಗಳಿಗೆ ಭೇಟಿ ನೀಡಲು ಕೃಷ್ಣ ನಿರ್ಧಾರ
ರಾಜ್ಯದಲ್ಲಿ ರೈತರ ಆತ್ಮಹತ್ಯೆಗೆ ತೆರೆಬೀಳದಂತಾಗಿರುವ ಹಿನ್ನಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಎಸ್ ಎಂ ಕೃಷ್ಣ...

ಮಂಡ್ಯ: ರಾಜ್ಯದಲ್ಲಿ ರೈತರ ಆತ್ಮಹತ್ಯೆಗೆ ತೆರೆಬೀಳದಂತಾಗಿರುವ ಹಿನ್ನಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಎಸ್ ಎಂ ಕೃಷ್ಣ ಅವರು ಮೃತ ರೈತರ ಕುಟುಂಬಗಳಿಗೆ ಭೇಟಿ ನೀಡಲು ನಿರ್ಧರಿಸಿದ್ದಾರೆ.
ಇಂದಿನಿಂದ ಎರಡು ದಿನ ಮಂಡ್ಯ ಜಿಲ್ಲಾ ಪ್ರವಾಸ ಕೈಗೊಳ್ಳಲಿರುವ ಎಸ್ ಎಂ ಕೃಷ್ಣ, ರೈತರಿಗೆ ಆತ್ಮಸ್ಥೈರ್ಯ ತುಂಬಲು ಮುಂದಾಗಿದ್ದಾರೆ. ಇಂದು ಮಂಡ್ಯ, ಶ್ರೀಂರಗಪಟ್ಟಣ, ಮದ್ದೂರು ಹಾಗೂ ಪಾಂಡವಪುರ ತಾಲೂಕುಗಳಿಗೆ ಭೇಟಿ ನೀಡಲಿದ್ದಾರೆ.
ಕಳೆದ ಒಂದು ತಿಂಗಳಲ್ಲಿ ಮಂಡ್ಯ ಜಿಲ್ಲೆಯಲ್ಲೇ 18 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಹಿನ್ನಲೆಯಲ್ಲಿ ಮೃತ ರೈತರ ಕುಟುಂಬಗಳಿಗೆ ಎಸ್ ಎಂ ಕೃಷ್ಣ ಭೇಟಿ ನೀಡಿ, ಮೃತರ ಸಂಬಂಧಿಕರಿಗೆ ಸಾಂತ್ವನ ಹೇಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮೃತ ರೈತರ ಆತ್ಮಹತ್ಯೆ ಕುರಿತಂತೆ ಸರ್ಕಾರದ ನಡೆಯ ಬಗ್ಗೆ ಇಂಧನ ಸಚಿವ ಡಿಕೆ ಶಿವಕುಮಾರ್ ಜೊತೆಗೆ ಮಾತುಕತೆ ನಡೆಸಿರುವ ಎಸ್ ಎಂ ಕೃಷ್ಣ, ಈವರೆಗೂ ಜಿಲ್ಲಾ ಉಸ್ತುವಾರಿ ಸಚಿವರಾಗಲಿ ಅಥವಾ ಮುಖ್ಯಮಂತ್ರಿಯಾಗಲಿ ಮೃತ ರೈತರ ಕುಟುಂಬಕ್ಕೆ ಭೇಟಿ ನೀಡದಿರುವುದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೃತ ರೈತರ ಕುಟುಂಬಗಳಿಗೆ ತಾವೇ ಭೇಟಿ ನೀಡಿ ಸಾಂತ್ವಾನ ಹೇಳುವುದಾಗಿ ತಿಳಿಸಿದ್ದಾರೆ. ಕೃಷ್ಣ ಅವರಿಗೆ ಮಂಡ್ಯ ಕಾಂಗ್ರೆಸ್ ಕಾರ್ಯಕರ್ತರು ಸಾಥ್ ನೀಡಲಿದ್ದಾರೆ. ಇದಲ್ಲದೇ, ರಾಜ್ಯದ ಬೇರೆ ಭಾಗಗಳಲ್ಲಿ ಮೃತಪಟ್ಟ ರೈತರ ಕುಟುಂಬಗಳಿಗೂ ಭೇಟಿ ನೀಡಲು ನಿರ್ಧರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


