ರಾಜಕೀಯ

ವೈದ್ಯರು ಇಲ್ಲ ಅಂದರೆ ಇವ್ರಿಗೆಲ್ಲ ಚಾಟಿ ತಕ್ಕೊಂಡು ಬಿಗೀರಿ: ಸ್ಪೀಕರ್

ಮಾನ್ಯ ಸಭಾಧ್ಯಕ್ಷರೇ ನಮ್ಮ ಕ್ಷೇತ್ರದಲ್ಲಿ ವೈದ್ಯರ ಕೊರತೆ ಇದೆ. ಏನ್ ಮಾಡಬೇಕು ಅಂತಾ ನೀವೇ ಮಾರ್ಗದರ್ಶನ ಮಾಡಿ ಎಂದು ಶಾಸಕರೊಬ್ಬರು ಮಾಡಿದ ಮನವಿಗೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು ತೋರಿದ ದಾರಿ ಇದು...

ವೈದ್ಯರು ಇಲ್ಲ ಅಂದರೆ ಇವ್ರಿಗೆಲ್ಲ ಚಾಟಿ ತಕ್ಕೊಂಡು ಬಿಗೀರಿ: ಸ್ಪೀಕರ್
ಸ್ಪೀಕರ್ ಕಾಗೋಡು ತಿಮ್ಮಪ್ಪ
Published On :

ವಿಧಾನಸಭೆ: ಮಾನ್ಯ ಸಭಾಧ್ಯಕ್ಷರೇ ನಮ್ಮ ಕ್ಷೇತ್ರದಲ್ಲಿ ವೈದ್ಯರ ಕೊರತೆ ಇದೆ. ಏನ್ ಮಾಡಬೇಕು ಅಂತಾ ನೀವೇ ಮಾರ್ಗದರ್ಶನ ಮಾಡಿ ಎಂದು ಶಾಸಕರೊಬ್ಬರು ಮಾಡಿದ ಮನವಿಗೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು ತೋರಿದ ದಾರಿ ಇದು.

ಪ್ರಶ್ನೋತ್ತರ ಕಲಾಪ ಸಂದರ್ಭದಲ್ಲಿ ಜೆಡಿಎಸ್ ನ ಸುಧಾಕರ್ ಲಾಲ್ ತಮ್ಮ ಕ್ಷೇತ್ರದ ಸಮಸ್ಯೆ ಬಗ್ಗೆ ಪ್ರಸ್ತಾಪಿಸಿದರು. ಇದಕ್ಕೆ ಇನ್ನೂ ಕೆಲ ಶಾಸಕರು ಧ್ವನಿಗೂಡಿಸಿ ನೀವೇ ಮಾರ್ಗದರ್ಶನ ಮಾಡಿ ನಾವೆಲ್ಲ ಅಸಹಾಯಕರಾಗಿದ್ದೇವೆ ಎಂದರು. ಆಗ ಕೋಪಗೊಂಡ ಸ್ಪೀಕರ್, ನೀವೆಲ್ಲ ಹೀಗೆ ಹೇಳಿದರೆ ಆಗುವುದಿಲ್ಲ. ಜನರಿಂದ ಆಯ್ಕೆಗೊಂಡವರಲ್ಲವೇನ್ರಿ ನೀವು? ವೈದ್ಯರು ಇಲ್ಲ ಎಂದಾದರೆ ಅವ್ರಿಗೆಲ್ಲ ಚಾಟಿ ತಕ್ಕೊಂಡು ಬಿಗಿಯಿರಿ ಎಂದು ಸಚಿವರತ್ತ ಕೈ ತೋರಿದರು.

ಪಡಿತರ ಬಗ್ಗೆ ಎಸ್ಎಂಎಸ್

ಬಿಪಿಎಲ್ ಕಾರ್ಡ್ ದಾರರಿಗೆ ನೀಡುವ ಪಡಿತರ ಏನೇನು? ಅವುಗಳಿಗೆ ಸರ್ಕಾರ ನಿಗದಿಪಡಿಸಿದ ದರಗಳೇನು? ಎಂಬ ಬಗ್ಗೆ ಇನ್ನು ಮುಂದೆ ಸರ್ಕಾರ ಎಸ್ಎಂಎಸ್ ಮಾಹಿತಿ ನೀಡಲು ನಿರ್ಧರಿಸಿದೆ.

ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರ ಪ್ರಶ್ನೆಗೆ ವಿಧಾನಸಭೆಯಲ್ಲಿ ಉತ್ತರ ನೀಡಿರುವ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ರಾಜ್ಯ ಸಚಿವ ದಿನೇಶ್ ಗುಂಡೂರಾವ್ ಗುರುವಾರ ಈ ವಿಷಯ ತಿಳಿಸಿದ್ದಾರೆ. ಸರ್ಕಾರ ಬಿಪಿಎಲ್ ಕಾರ್ಡ್ ದಾರರಿಗೆ ನೀಡುವ ಈ ಸೌಲಭ್ಯವನ್ನು ದುರುಪಯೋಗಪಡಿಸಿ ಕೊಳ್ಳುತ್ತಿರುವ ಬಗ್ಗೆ ಮಾಹಿತಿ ಲಭಿಸುತ್ತಿದೆ. ಈ ಹಿನ್ನೆಲೆಯಲ್ಲಿ ಫಲಾನುಭವಿಗಳಿಗೆ ಸರ್ಕಾರ ನೀಡುವ ಸೌಲಭ್ಯಗಳೇನೆಂಬ ಬಗ್ಗೆ ಮಾಹಿತಿ ನೀಡಲು ನಿರ್ಧರಿಸಲಾಗಿದ್ದು, 80 ಲಕ್ಷ ಬಿಪಿಎಲ್ ಕಾರ್ಡ್‍ದಾರರ ಮೊಬೈಲ್ ಸಂಖ್ಯೆಯನ್ನು ಸಂಗ್ರಹಿಸಲಾಗಿದೆ. ಅಕ್ಕಿ, ಗೋಧಿ, ಉಪ್ಪು, ಎಣ್ಣೆ, ಸಕ್ಕರೆಗೆ ಫಲಾನುಭವಿಗಳು ನೀಡಬೇಕಾದ ಹಣವೆಷ್ಟು ಸೇರಿದಂತೆ ಎಲ್ಲ ವಿವರಗಳನ್ನುಎಸ್‍ಎಂಎಸ್ ಮಾಡಲಾಗುವುದು ಎಂದರು.

ಅನ್ನಭಾಗ್ಯ ಯೋಜನೆಯಲ್ಲಿ ಅಲ್ಲಲ್ಲಿ ಅವ್ಯವಹಾರ ನಡೆಯುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. 220 ನ್ಯಾಯಬೆಲೆ ಅಂಗಡಿಗಳನ್ನು ಅಮಾನತುಪಡಿಸಿಕೊಳ್ಳ ಲಾಗಿದ್ದು, 10 ಅಂಗಡಿಗಳನ್ನು ರದ್ದುಪಡಿಸಲಾಗಿದೆ. 16 ಅಂಗಡಿಗಳಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದೆ. ಜತೆಗೆ ಈ ಬಗ್ಗೆ ಜಾಗೃತಿ ಮೂಡಿಸಲು ಜಿಲ್ಲಾ ಮಟ್ಟದಲ್ಲಿ ಜಾಗೃತಿ ಸಮಿತಿಗಳನ್ನು ರಚಿಸಲು ಕ್ರಮ ಕೈಗೊಳ್ಳಲಾಗಿದೆ. 5,140 ನ್ಯಾಯ ಬೆಲೆ ಅಂಗಡಿ ಮಟ್ಟದ ಜಾಗೃತಿ ಸಮಿತಿ ರಚನೆ ಮಾಡಿದ್ದೇವೆ ಎಂದು ಹೇಳಿದರು.

ಮೂರು ತಿಂಗಳಲ್ಲಿ ರದ್ದು:
ರಾಜ್ಯದಲ್ಲಿರುವ ಅಕ್ರಮ ಬಿಪಿಎಲ್ ಕಾರ್ಡ್‍ಗಳನ್ನು ರದ್ದುಗೊಳಿಸುವುದಕ್ಕೆ ಸರ್ಕಾರ ಈಗಾಗಲೇ ಕ್ರಮ ತೆಗೆದುಕೊಂಡಿದೆ. ಇನ್ನು ಮೂರು ತಿಂಗಳೊಳಗಾಗಿ ಎಲ್ಲ ಅಕ್ರಮ ಕಾರ್ಡ್‍ಗಳನ್ನು ರದ್ದುಗೊಳಿಸುತ್ತೇವೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.