ಬೆಟ್ಟಿಂಗ್ ತಡೆ ಕಾನೂನು ಬಲಪಡಿಸಲು ನಿರ್ಧಾರ
ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಗಳ ವ್ಯಾಪ್ತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆಯ ಜೂಜು ನಿಯಂತ್ರಣ ವಿಧಿಯನ್ನು ಬಲಪಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ರಾಜ್ಯದಲ್ಲಿ ನಡೆಯುತ್ತಿರುವ ಬೆಟ್ಟಿಂಗ್ ದಂಧೆ ಬಗ್ಗೆ ...

ವಿಧಾನಸಭೆ: ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಗಳ ವ್ಯಾಪ್ತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆಯ ಜೂಜು ನಿಯಂತ್ರಣ ವಿಧಿಯನ್ನು ಬಲಪಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ರಾಜ್ಯದಲ್ಲಿ ನಡೆಯುತ್ತಿರುವ ಬೆಟ್ಟಿಂಗ್ ದಂಧೆ ಬಗ್ಗೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರು ನಿಯಮ 69ರ ಅನ್ವಯ ನಡೆಸಿದ ಚರ್ಚೆಗೆ ಉತ್ತರ ನೀಡಿದ ಗೃಹ ಸಚಿವ ಕೆ.ಜೆ. ಜಾರ್ಜ್ ವಿಧಾನಸಭೆಯಲ್ಲಿ ಶುಕ್ರವಾರ ಈ ವಿಷಯ ತಿಳಿಸಿದರು.
ಅಗತ್ಯ ಬಿದ್ದರೆ ಬೆಟ್ಟಿಂಗ್ ದಂಧೆಯನ್ನು ಸಿಬಿಐ ತನಿಖೆಗೆ ವಹಿಸಲು ಸಿದ್ಧ ಎಂದು ಸರ್ಕಾರ ಈ ಹಿಂದೆಯೇ ಸ್ಪಷ್ಟಪಡಿಸಿದೆ. ಇದು ಅಂತಾರಾಷ್ಟ್ರೀಯ ದಂಧೆ. ರಾಜ್ಯದಲ್ಲಿ ಈ ವ್ಯವಹಾರಕ್ಕೆ ಸಂಬಂಧಿಸಿದ ಬುಕ್ಕಿಗಳನ್ನು ನಾವು ಹಲವೆಡೆ ಬಂಧಿಸಿದ್ದೇವೆ. ಆದರೆ, ಇದರ ನಿಯಂತ್ರಣಕ್ಕೆ ಕರ್ನಾಟಕ ಪೊಲೀಸ್ ಕಾಯ್ದೆಯ ಉಪವಿಧಿಗಳು ಪ್ರಬಲವಾಗಿಲ್ಲ.
ದಂಧೆಕೋರರಿಗೆ 6 ತಿಂಗಳು ಮಾತ್ರ ಸಜೆ ವಿಧಿಸುವ ಅವಕಾಶವಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಸರ್ಕಾರ ಅಗತ್ಯ ತಿದ್ದುಪಡಿ ತರುತ್ತದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


