ರಾಜಕೀಯ

ರೈತರ ಆತ್ಮಹತ್ಯೆ: ಉಪವಾಸ ಸತ್ಯಾಗ್ರಹ ಆರಂಭಿಸಿದ ದೇವೇಗೌಡ

ರೈತರ ಸರಣಿ ಆತ್ಮಹತ್ಯೆ ಪ್ರಕರಣದ ಕುರಿತು ಸಂಸತ್ ಅಧಿವೇಶನದಲ್ಲಿ ಚರ್ಚೆಗೆ ಅವಕಾಶ ಕಲ್ಪಿಸುವಂತೆ ಒತ್ತಾಯಿಸಿರುವ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಅವರು...

ರೈತರ ಆತ್ಮಹತ್ಯೆ: ಉಪವಾಸ ಸತ್ಯಾಗ್ರಹ ಆರಂಭಿಸಿದ ದೇವೇಗೌಡ
ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ (ಸಂಗ್ರಹ ಚಿತ್ರ)
Published On :

ನವದೆಹಲಿ: ರೈತರ ಸರಣಿ ಆತ್ಮಹತ್ಯೆ ಪ್ರಕರಣದ ಕುರಿತು ಸಂಸತ್ ಅಧಿವೇಶನದಲ್ಲಿ ಚರ್ಚೆಗೆ ಅವಕಾಶ ಕಲ್ಪಿಸುವಂತೆ ಒತ್ತಾಯಿಸಿರುವ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಅವರು ಸೋಮವಾರ ದೆಹಲಿಯ ಜಂತರ್ ಮಂತರ್ ನಲ್ಲಿ ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ.

ಇಂದು ಬೆಳಿಗ್ಗೆ 10 ಗಂಟೆಗೆ ಜಂತರ್ ಮಂತರ್ ಗೆ ಭೇಟಿ ನೀಡಿರುವ ದೇವೇಗೌಡ ಅವರು ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ. ಉಪವಾಸ ಸತ್ಯಾಗ್ರಹ ಕುರಿತಂತೆ ಮಾತನಾಡಿರುವ ಅವರು ರೈತರ ಆತ್ಮಹತ್ಯೆ ತಡೆಯುವುದರಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಪ್ರಕರಣಗಳ ಸಂಬಂಧ ಸಂಸತ್ ನಲ್ಲಿ ನಡೆಯುತ್ತಿರುವ ಮುಂಗಾರು ಅಧಿವೇಶನದಲ್ಲಿ ಚರ್ಚೆ ಅವಕಾಶ ನೀಡಬೇಕೆಂದು ಆಗ್ರಹಿಸಿದ್ದಾರೆ.

ಇದೇ ವೇಳೆ ರೈತರ ಸರಣಿ ಆತ್ಮಹತ್ಯೆ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಕಿಡಿರುವ ಅವರು, ರೈತರ ಸರಣಿ ಆತ್ಮಹತ್ಯೆಯಂತಹ ಪ್ರಕರಣಗಳು ದೇಶದೆಲ್ಲೆಡೆ ಚರ್ಚೆಯಾಗುತ್ತಿವೆ. ಆದರೂ, ಪ್ರಧಾನಮಂತ್ರಿ ಮಾತ್ರ ಈ ಕುರಿತಂತೆ ಏನನ್ನೂ ಮಾತನಾಡದೇ ತಮ್ಮ ಮೌನವನ್ನು ಮುಂದುವರೆಸಿರುವುದೇಕೆ ಎಂದು ಪ್ರಶ್ನಿಸಿದ್ದಾರೆ. ಪ್ರಕರಣ ಸಂಬಂಧ ಸಂಸತ್ ಅಧಿವೇಶನದಲ್ಲಿ ಚರ್ಚೆಗೆ ಅವಕಾಶ ಮಾಡಿಕೊಡುವಂತೆ ಸ್ಪೀಕರ್ ಬಳಿ ಮನವಿ ಮಾಡಲಾಗಿದೆ. ಆದರೂ ನಮ್ಮ ಮನವಿಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಈ ಕುರಿತಂತೆ ಚರ್ಚೆ ನಡೆಸಲೂ ಈ ವರೆಗೂ ಅವಕಾಶ ಸಿಕ್ಕಿಲ್ಲ ಎಂದು ತಮ್ಮ ಬೇಸರವನ್ನು ವ್ಯಕ್ತಪಡಿಸಿದ್ದಾರೆ.

ನಂತರ ಕೇಂದ್ರ ಕೃಷಿ ಸಚಿವರ ಹೇಳಿಕೆ ವಿರುದ್ಧ ವಾಗ್ಧಾಳಿ ನಡೆಸಿದ ಅವರು, ಕೃಷಿ ಸಚಿವರಾಗಿ ರೈತರ ಆತ್ಮಹತ್ಯೆ ಕುರಿತಂತೆ ನಿರ್ಲಕ್ಷ್ಯಕರ ರೀತಿಯ ಹೇಳಿಕೆ ನೀಡಿರುವುದು ನಿಜಕ್ಕೂ ವಿಪರ್ಯಾಸವೇ ಸರಿ. ಈ ಬಗ್ಗೆ ನಾನು ಕ್ಷಮೆಯಾಚಿಸುತ್ತೇನೆ. ಇಂತಹ ಹೇಳಿಕೆಗಳನ್ನು ನೀಡುವ ಸಚಿವರನ್ನು ಮೋದಿ ಅವರು ಹೇಗೆ ಸಹಿಸಿಕೊಳ್ಳುತ್ತಾರೆಯೇ ತಿಳಿಯದು. ಇಂತಹ ಹೇಳಿಕೆಗಳನ್ನು ನಾವು ಖಂಡಿಸುತ್ತೇವೆ ಎಂದು ಹೇಳಿದ್ದಾರೆ.

ರೈತರ ಆತ್ಮಹತ್ಯೆಗೆ ಪ್ರಮುಖ ಕಾರಣ ಕುರಿತಂತೆ ಜು.24 ರಂದು ರಾಜ್ಯಸಭೆಯಲ್ಲಿ ಲಿಖಿತ ಉತ್ತನ ನೀಡಿದ್ದ ಕೇಂದ್ರ ಕೃಷಿ ಸಚಿವ ರಾಧಾ ಮೋಹನ್ ಸಿಂಗ್ ಅವರು, ಪ್ರೇಮ ವೈಫಲ್ಯ, ಡ್ರಗ್ಸ್, ಕೌಟುಂಬಿಕ ಸಮಸ್ಯೆ, ಅನಾರೋಗ್ಯ ಮತ್ತು ಸಾಲಬಾದೆಯೇ ಪ್ರಮುಖ ಕಾರಣ ಎಂದು ಹೇಳುವ ಮೂಲಕ ಹೊಸ ವಿವಾದವೊಂದನ್ನು ಹುಟ್ಟುಹಾಕಿದ್ದರು. ಕೃಷಿ ಸಚಿವ ಈ ಹೇಳಿಕೆ ದೇಶದಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.