ರೈತರ ಆತ್ಮಹತ್ಯೆ: ಕಾಂಗ್ರೆಸ್, ಬಿಜೆಪಿ ಸದಸ್ಯರ ವಾಗ್ವಾದ
ರೈತರ ಆತ್ಮಹತ್ಯೆ ವಿಷಯದಲ್ಲಿ ಸರ್ಕಾರ ಸೂಕ್ತ ಪರಿಹಾರ ನೀಡುತ್ತಿಲ್ಲ ಹಾಗೂ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಪ್ರತಿಪಕ್ಷದ ನಾಯಕ ಜಗದೀಶ್ ಶೆಟ್ಟರ್ ಅವರು ಸರ್ಕಾರದ ಮೇಲೆ ಟೀಕಾಪ್ರಹಾರ ಮಾಡಿದ ಸಂದರ್ಭದಲ್ಲಿ ಆಡಳಿತ ಪಕ್ಷ...

ವಿಧಾನಸಭೆ: ರೈತರ ಆತ್ಮಹತ್ಯೆ ವಿಷಯದಲ್ಲಿ ಸರ್ಕಾರ ಸೂಕ್ತ ಪರಿಹಾರ ನೀಡುತ್ತಿಲ್ಲ ಹಾಗೂ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಪ್ರತಿಪಕ್ಷದ ನಾಯಕ ಜಗದೀಶ್ ಶೆಟ್ಟರ್ ಅವರು ಸರ್ಕಾರದ ಮೇಲೆ ಟೀಕಾಪ್ರಹಾರ ಮಾಡಿದ ಸಂದರ್ಭದಲ್ಲಿ ಆಡಳಿತ ಪಕ್ಷ ಹಾಗೂ ಬಿಜೆಪಿ ಸದಸ್ಯರ ನಡುವೆ ತೀವ್ರ ವಾಗ್ವಾದ ನಡೆದು, ಕಲಾಪವನ್ನು ಮುಂದೂಡಿ
ದ ಪ್ರಸಂಗ ಗುರುವಾರ ನಡೆಯಿತು.
ಕಲಾಂ ಹಾಗೂ ಸಾಲಿಯಾನ ಅವರಿಗೆ ಸಂತಾಪ ಸೂಚಿಸಿದ ನಂತರ ಕಲಾಪ ಮುಂದುವರಿದಾಗ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರು ರೈತರ ಆತ್ಮಹತ್ಯೆ ಬಗ್ಗೆ ಶೂನ್ಯ ವೇಳೆಯಲ್ಲಿ ಚರ್ಚಿಸಲು ಅವಕಾಶ ನೀಡಬೇಕು ಎಂದು ವಿಷಯ ಪ್ರಸ್ತಾಪಿಸಿದರು. ನಮ್ಮ ಪಕ್ಷದ ನಾಯಕರು ರಾಜ್ಯಾದ್ಯಂತ ಪ್ರವಾಸ ಮಾಡಿ ಅಧ್ಯಯನ ಮಾಡಿದ್ದಾರೆ. 200ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರೂ 63 ಜನರಿಗೆ ಮಾತ್ರ ಪರಿಹಾರ ಕಲ್ಪಿಸಲಾಗಿದೆ. ಮಾನವೀಯ ಆಧಾರದಲ್ಲಿ ನೋಡದೆ ತಾಂತ್ರಿಕವಾಗಿ ಎಲ್ಲವನ್ನೂ ಪರಿಗಣಿಸಲಾಗಿದೆ ಎಂದು ದೂರಿದರು.
ಸರ್ಕಾರಕ್ಕೆ ಗಂಬೀರತೆಯೇ ಇಲ್ಲ. ಮೂರು ತಿಂಗಳಾದರೂ ರೈತರಿಗೆ ಪರಿಹಾರ ನೀಡಿಲ್ಲ. ಹಾಲಿನ ಪ್ರೋತ್ಸಾಹ ಧನವನ್ನು ಜನವರಿಯಿಂದ ನೀಡಿಲ್ಲ. ಕೃಷಿ ಸಚಿವರು
ಬರೀ ಬೇಜವಾಬ್ದಾರಿಯಿಂದ ಉತ್ತರ ನೀಡುತ್ತಾರೆ. ಯಾವುದೇ ವಾಸ್ತವತೆ ಅದರಲ್ಲಿ ಇಲ್ಲ. ಅಂಕಿ-ಅಂಶ ನೀಡುತ್ತಾರೆ ಅಷ್ಟೇ. ಕಾನೂನು ಹೇಳುತ್ತಾರೆ. ಕೆಲಸವನ್ನು ಮಾಡಿಲ್ಲ.
ರೈತರ ಬಗ್ಗೆ ಇವರಿಗೆ ಮಾನವೀಯತೆಯೇ ಇಲ್ಲ ಎಂದು ಶೆಟ್ಟರ್, ವಿಶ್ವೇಶ್ವರ ಹೆಗಡೆ ಕಾಗೇರಿ, ಸಿ.ಟಿ. ರವಿ ದೂರಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. `ರಾಹುಲ್ ಗಾಂ„ ಹೇಳಿದರೂ ರೈತರ ಬಗ್ಗೆ, ಪರಿಹಾರ ದ ಬಗ್ಗೆ ಕ್ರಮ ಕೈಗೊಂಡಿಲ್ಲ' ಎಂದು ಕಾಗೇರಿ ಜರಿದರು. ಕೇಂದ್ರ ಕೃಷಿ ಸಚಿವರು ಬೇಜವಾಬ್ದಾರಿಯಿಂದ ಹೇಳಿಕೆ ನೀಡಿರುವುದು ದುರಂತ ಎಂದು ಕಾಂಗ್ರೆಸ್ ಸದಸ್ಯರು ತಿರುಗೇಟು ನೀಡಿದರು.
`ಪೋಸ್ಟ್ ಮಾರ್ಟಮ್, ಫೋರೆನ್ಸಿಕ್ ಸೈನ್ಸ್ ಲ್ಯಾಬೋರೇಟರಿ ವರದಿ ಬರುವುದು ತಡವಾಗಿದೆ. ಅದು ಬಂದ ನಂತರ ಎಲ್ಲವನ್ನೂ ನೀಡಲಾಗುತ್ತದೆ. ಡಿಸಿ ಬಳಿ ಹಣ ಇದೆ'
ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. `ಸುಳ್ಳು ಹೇಳುತ್ತೀರಿ ಅಷ್ಟೇ. ಅಲ್ಲಿ ಹಣವೇ ಇಲ್ಲ. ಜಮಖಂಡಿ ಸೇರಿದಂತೆ ಹಲವು ಭಾಗದಿಂದ ಪರಿಹಾರ ನೀಡುವ ಬಗ್ಗೆ ತಹಸೀಲ್ದಾರ್, ಉಪವಿಭಾಗಾಧಿಕಾರಿಗಳು ಸರ್ಕಾರಕ್ಕೆ ವಿವರಣೆ ಕೇಳಿ ಪತ್ರ ಬರೆದಿದ್ದಾರೆ. ಸರ್ಕಾರಕ್ಕೆ ರೈತರ ಗಂಭೀರತೆಯೇ ಇಲ್ಲ' ಎಂದು ಗೋವಿಂದ ಕಾರಜೋಳ ದೂರಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್-ಬಿಜೆಪಿ ಸದ ಸ್ಯರ ನಡುವೆ ತೀವ್ರ ವಾಗ್ವಾದ ನಡೆಯಿತು. ಉಪಸಭಾಧ್ಯಕ್ಷ ಶಿವಶಂಕರ ರೆಡ್ಡಿ ಸದನವನ್ನು ಭೋಜನ ವಿರಾಮಕ್ಕೆ ಮುಂದೂಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


