ರಾಜ್ಯಪಾಲರು ದುಂದುವೆಚ್ಚ ಮಾಡುತ್ತಿಲ್ಲ: ಶೆಟ್ಟರ್
ರಾಜ್ಯಪಾಲ ವಜುಬಾಯಿ ವಾಲಾ ದುಂದುವೆಚ್ಚ ಮಾಡುತ್ತಿದ್ದಾರೆಂಬ ಆರೋಪ ಸತ್ಯಕ್ಕೆ ದೂರವಾಗಿದೆ. ಅವರು ಸರ್ಕಾರಿ ಕಾರ್ಯಕ್ರಮಗಳಿಗಾಗಿ..

ಹುಬ್ಬಳ್ಳಿ: ರಾಜ್ಯಪಾಲ ವಜುಬಾಯಿ ವಾಲಾ ದುಂದುವೆಚ್ಚ ಮಾಡುತ್ತಿದ್ದಾರೆಂಬ ಆರೋಪ ಸತ್ಯಕ್ಕೆ ದೂರವಾಗಿದೆ. ಅವರು ಸರ್ಕಾರಿ ಕಾರ್ಯಕ್ರಮಗಳಿಗಾಗಿ ಪ್ರವಾಸ ಮಾಡುತ್ತಿದ್ದಾರೆಯೇ ವಿನಃ ಖಾಸಗಿ ಕಾರ್ಯಕ್ರಮದಲ್ಲಿ ಹೆಚ್ಚಾಗಿ ಪಾಲ್ಗೊಳ್ಳುತ್ತಿಲ್ಲ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್ ಹೇಳಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ ರಾಜ್ಯಪಾಲರು ಸರ್ಕಾರಿ ಕಾರ್ಯಕ್ರಮಗಳಲ್ಲಿಯೇ ಹೆಚ್ಚಾಗಿ ಪಾಲ್ಗೊಳ್ಳುತ್ತಿದ್ದಾರೆ. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದು ಕಡಿಮೆ. ಅವರು ಪ್ರವಾಸದ ಹೆಸರಲ್ಲಿ ಮೋಜು ಮಸ್ತಿ ಮಾಡುತ್ತಿಲ್ಲ.
ಹೀಗಿರುವಾಗಲೂ ವಿನಾಕಾರಣ ಅವರು ಪ್ರವಾಸಕ್ಕಾಗಿ ಈ ವರೆಗೆ ರು.5ರಿಂದ 6 ಕೋಟಿ ಖರ್ಚು ಮಾಡಿದ್ದಾರೆ ಎಂದು ಗುಲ್ಲು ಹಬ್ಬಿಸಿರುವುದು ಸರಿಯಲ್ಲ .ಇದು ಆಗದವ ಮೊಸರಲ್ಲಿ ಕಲ್ಲು ಹುಡುಕಿದಂತಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


