ರಾಜಕೀಯ

ಎಸ್‍ಡಿಪಿಐಗೆ ಬರುತ್ತಿರುವ ಹಣದ ಬಗ್ಗೆ ತನಿಖೆಯಾಗಲಿ: ಖಾದರ್

ಕಾಂಗ್ರೆಸ್ ವಿರುದ್ಧ ಆಯ್ದ ಕ್ಷೇತ್ರಗಳಲ್ಲಿ ಮಾತ್ರ ಅಭ್ಯರ್ಥಿಗಳನ್ನು ಹೂಡುತ್ತಿರುವ ಎಸ್‍ಡಿಪಿಐ ಸಂಘಟನೆಗೆ ಯಾರು ಹಣ ನೀಡುತ್ತಿದ್ದಾರೆಂದು ತನಿಖೆಯಾಗಲಿ...

ಎಸ್‍ಡಿಪಿಐಗೆ ಬರುತ್ತಿರುವ ಹಣದ ಬಗ್ಗೆ ತನಿಖೆಯಾಗಲಿ: ಖಾದರ್
ಆರೋಗ್ಯ ಸಚಿವ ಯು.ಟಿ.ಖಾದರ್
Published On :

ಬೆಂಗಳೂರು: ಕಾಂಗ್ರೆಸ್ ವಿರುದ್ಧ ಆಯ್ದ ಕ್ಷೇತ್ರಗಳಲ್ಲಿ ಮಾತ್ರ ಅಭ್ಯರ್ಥಿಗಳನ್ನು ಹೂಡುತ್ತಿರುವ ಎಸ್‍ಡಿಪಿಐ ಸಂಘಟನೆಗೆ ಯಾರು ಹಣ ನೀಡುತ್ತಿದ್ದಾರೆಂದು ತನಿಖೆಯಾಗಲಿ, ಕೇಂದ್ರದಲ್ಲಿ ಬಿಜೆಪಿಯದೇ ಸರ್ಕಾರವಿದೆ. ಸುವೊಮೋಟೋ ಪ್ರಕರಣ ದಾಖಲಿಸಿಕೊಳ್ಳಲಿ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಬಿಜೆಪಿಗೆ ಸವಾಲೆಸೆದಿದ್ದಾರೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೈಸೂರು ಹಾಗೂ ಶಿವ ಮೊಗ್ಗದಲ್ಲಾದ ಗಲಭೆಗಳಲ್ಲಿ ಸಿಕ್ಕಿಕೊಂಡ ಸಾವಿರಕ್ಕಿಂತಲೂ ಅಧಿಕ ಮಂದಿ ಹಿಂದೂ-ಮುಸ್ಲಿಂ ಸಹೋದರರ ಪ್ರಕರಣವನ್ನು ಕ್ಯಾಬಿನೆಟ್‍ನಲ್ಲಿ ಹಿಂದಕ್ಕೆ ಪಡೆದಿದ್ದನ್ನು ಬಿಜೆಪಿಯು ರಾಜಕೀಯವಾಗಿ ಬಳಸಿಕೊಂಡು ಜನರ ಮಧ್ಯೆ ಗೊಂದಲ ಸೃಷ್ಟಿಸುತ್ತಿರುವುದು ಶೋಭೆ ತರುವಂತ್ತದ್ದಲ್ಲ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಿಸಲು ಎಸ್‍ಡಿಪಿಐ ಅಭ್ಯರ್ಥಿಗಳನ್ನು ಹಾಕಲು ಕಾರಣ ಎಂಬುದು ಜನರಿಗೆ ಗೊತ್ತಾಗಲಿ.

ರಾಷ್ಟ್ರದ್ರೋಹಿಗಳೆಂದು ಕೂಗುವ ಬಿಜೆಪಿಯವರೊಂದಿಗೆ ಸಭೆ ನಡೆಸಿದ್ದಾರೆಂಬುದು ಗೊತ್ತಾಗಬೇಕಿದೆ. ಗಲಭೆ ಪ್ರಕರಣಗಳಲ್ಲಿ ಅಮಾಯಕರನ್ನು ಕೈಬಿಟ್ಟ ಪ್ರಕರಣವನ್ನು ರಾಜಕೀಯಗೊಳಿಸುವ ಕೆಲಸ ನಡೆಯುತ್ತಿದೆ. ಇದನ್ನು ಸಹಿಸಲು ಸಾಧ್ಯವಿಲ್ಲ, ಬಿಜೆಪಿಯವರ ಸತ್ಯ ಬಿಚ್ಚಿಡುವ ಕೆಲಸ ಮಾಡುತ್ತೇನೆ ಎಂದರು.

ಕೆಪಿಎನ್‍ಎಸ್ ಮಾಹಿತಿ ನೀಡದ ಅಧಿಕಾರಿಗಳಿಗೆ ದಂಡ

ಮಾಹಿತಿ ಹಕ್ಕು ಕಾಯಿದೆಯಡಿ ಅರ್ಜಿದಾರರೊಬ್ಬರಿಗೆ ಸೂಕ್ತ ಮಾಹಿತಿ ನೀಡಿಲ್ಲ ಎಂಬ ಕಾರಣಕ್ಕೆ ಇಬ್ಬರು ಅಧಿಕಾರಿಗಳಿಗೆ ಕರ್ನಾಟಕ ಮಾಹಿತಿ ಆಯೋಗ ದಂಡ ವಿಧಿಸಿ ಆದೇಶಿಸಿದೆ. ಸಾರ್ವಜನಿಕ ಮಾಹಿತಿ ಹಾಗೂ ಸಹಾಯಕ ಕಂದಾಯ ಅಧಿಕಾರಿ ಶ್ರೀಧರ್, ಬಿಬಿಎಂಪಿ ಸಹಾಯಕ ಕಂದಾಯ ಅಧಿಕಾರಿ ಬಿ.ಸಿ.ಭಾರತಿ ಅವರಿಗೆ ತಲಾ ರು.10 ಸಾವಿರ ದಂಡ ವಿಧಿಸಿದೆ. ಅಲ್ಲದೆ ಅರ್ಜಿದಾರರು ಕೋರಿರುವ ಮಾಹಿತಿಯನ್ನು 30 ದಿನದೊಳಗೆ ಉಚಿತ ನೊಂದಾಯಿತ ಅಂಚೆ ಸ್ವೀಕೃತಿ ಮುಖಾಂತರ ಸಲ್ಲಿಸುವಂತೆ ಸೂಚಿಸಿ ಜೂ.23ಕ್ಕೆ ವಿಚಾರಣೆ ಮುಂದೂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.