ತೋಮರ್ ಬಂಧನದ ಹಿಂದೆ ಕೇಂದ್ರ ಸರ್ಕಾರದ ಕೈವಾಡವಿಲ್ಲ: ಸದಾನಂದಗೌಡ
ನಕಲಿ ಪದವಿ ಪ್ರಮಾಣ ಪತ್ರ ಪ್ರಕರಣ ಸಂಬಂಧ ಬಂಧನಕ್ಕೀಡಾಗಿರುವ ದೆಹಲಿ ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಬಂಧನದ ಹಿಂದೆ ಕೇಂದ್ರ ಸರ್ಕಾರದ ಪಾತ್ರ ಇಲ್ಲ...

ಬೆಂಗಳೂರು: ನಕಲಿ ಪದವಿ ಪ್ರಮಾಣ ಪತ್ರ ಪ್ರಕರಣ ಸಂಬಂಧ ಬಂಧನಕ್ಕೀಡಾಗಿರುವ ದೆಹಲಿ ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಬಂಧನದ ಹಿಂದೆ ಕೇಂದ್ರ ಸರ್ಕಾರದ ಪಾತ್ರ ಇಲ್ಲ ಎಂದು ಕೇಂದ್ರ ಸಚಿವ ಸದಾನಂದಗೌಡ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೋಮರ್ ಬಂಧನದ ಹಿಂದೆ ಕೇಂದ್ರ ಸರ್ಕಾರದ ಕೈವಾಡವಿಲ್ಲ, ದೆಹಲಿ ಪೊಲೀಸರು ಪ್ರಕರಣವನ್ನು ಕೂಲಂಕೂಷವಾಗಿ ತನಿಖೆ ನಡೆಸಿದ ಬಳಿಕ ತೋಮರನ್ನು ಬಂಧಿಸಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.
ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ದಿಢೀರ್ ಬಂಧಸಿದ್ದ ದೆಹಲಿ ಪೊಲೀಸ್ ಕ್ರಮದ ಬಗ್ಗೆ ಆಪ್ ಪಕ್ಷ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು, ಕೇಂದ್ರ ಸರ್ಕಾರ ದೆಹಲಿ ಸರ್ಕಾರದ ಮೇಲೆ ಒತ್ತಡ ಹೇರುವ ಕುತಂತ್ರ ನಡೆಸಿದೆ ಎಂದು ಆರೋಪಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


