ರಾಜಕೀಯ

ಸಚಿವರ ಮೌಲ್ಯಮಾಪನ ಜನತೆಯ ಹಕ್ಕು: ಆರ್ ವಿ ದೇಶಪಾಂಡೆ

ಶಾಸಕರ ಕಾರ್ಯವೈಖರಿ, ಮೌಲ್ಯ ಮಾಪನ ಮಾಡುವವವರು ರಾಜ್ಯದ ಜನತೆಯೇ ಹೊರತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲ ಎಂದು ಉನ್ನತ ಶಿಕ್ಷಣ ಸಚಿವ ಆರ್.ವಿ. ದೇಶಪಾಂಡೆ ಹೇಳಿದ್ದಾರೆ.

ಸಚಿವರ ಮೌಲ್ಯಮಾಪನ ಜನತೆಯ ಹಕ್ಕು: ಆರ್ ವಿ ದೇಶಪಾಂಡೆ
ಸಿಎಂ ಸಿದ್ದರಾಮಯ್ಯ- ಆರ್ ವಿ ದೇಶಪಾಂಡೆ
Published On :

ಉಡುಪಿ: ಶಾಸಕರ ಕಾರ್ಯವೈಖರಿ, ಮೌಲ್ಯ ಮಾಪನ ಮಾಡುವವವರು ರಾಜ್ಯದ ಜನತೆಯೇ ಹೊರತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲ ಎಂದು ಉನ್ನತ ಶಿಕ್ಷಣ ಸಚಿವ ಆರ್.ವಿ. ದೇಶಪಾಂಡೆ ಹೇಳಿದ್ದಾರೆ.

ಸಚಿವರುಗಳು ಮೌಲ್ಯ ಮಾಪನ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕಿಡಿಕಾರಿರುವ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ಪ್ರಭುಗಳು, ಚುನಾಯಿತ ಪ್ರತಿನಿಧಿಗಳ ಕಾರ್ಯವೈಖರಿಯನ್ನು ಜನರೇ ನಿರ್ಧರಿಸುತ್ತಾರೆ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪರೋಕ್ಷ ಕಿಡಿಕಾರಿದ್ದಾರೆ.

ಶುಕ್ರವಾರ ಮಂಗಳೂರಿನಲ್ಲಿ ನಡೆಯಲಿರುವ ಕೊಂಕಣಿ ಪೀಠ ಸ್ಥಾಪನಾ ಸಮಾರಂಭದಲ್ಲಿ ಭಾಗವಹಿಸಲು ಆಗಮಿಸಿದ್ದ ದೇಶಪಾಂಡೆ ಅವರು ಉಡುಪಿಗೆ ಭೇಟಿ ನೀಡಿದ ಸಂದರ್ಭದಲ್ಲಿ ವರದಿಗಾರರೊಂದಿಗೆ ಮಾತನಾಡಿದರು. ಈ ವೇಳೆ ಸಚಿವರ ಮೌಲ್ಯ ಮಾಪನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಡುವುದರ ಬಗ್ಗೆ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಉತ್ತಮ ಕೆಲಸ ಮಾಡುತ್ತಿದ್ದು, ಒಳ್ಳೆಯ ಆಡಳಿತವನ್ನು ನೀಡುತ್ತಿದೆ. ಪ್ರತಿ ಇಲಾಖೆಯ ಕಾರ್ಯವೈಖರಿಯನ್ನು ಮುಖ್ಯಮಂತ್ರಿಗಳು ಕಾಳಜಿ ವಹಿಸಿ ನೋಡುತ್ತಿದ್ದಾರೆ ಎಂದು ದೇಶಪಾಂಡೆ ಹೇಳಿದರು.

ಒತ್ತಾಯಪೂರ್ವಕವಾಗಿ ಯೋಗ ದಿನಾಚರಣೆ ಸರಿಯಲ್ಲ
ಇದೇ ವೇಳೆ ಕೇಂದ್ರ ಸರ್ಕಾರದ ಯೋಗ ದಿನಾಚರಣೆ ಕುರಿತಂತೆ ಭುಗಿಲೆದ್ದಿರುವ ವಿವಾದಕ್ಕೆ ಸಂಬಂಧಿಸಿದಂತೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ದೇಶಪಾಂಡೆ, ಒತ್ತಾಯಪೂರ್ವಕವಾಗಿ ಯೋಗ ದಿನಾಚರಣೆ ಮಾಡುವಂತೆ ಜನರನ್ನು ಒತ್ತಾಯಿಸುವುದು ಸರಿಯಲ್ಲ. ಯೋಗ ಮಾಡುವುದು ಅವರವರ ವಿವೇಚನೆಗೆ ಬಿಟ್ಟ ವಿಚಾರ. ಯೋಗ ಆರೋಗ್ಯ ಕಾಪಾಡಲು ಯೋಗ ನೆರವಾಗುತ್ತದೆ ಅಂದ ಮಾತ್ರಕ್ಕೆ ಜನರ ಮೇಲೆ ಅದನ್ನು ಬಲವಂತವಾಗಿ ಹೇರುವುದು ಸರಿಯಲ್ಲ ಎಂದು ದೇಶಪಾಂಡೆ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.