ಬೆಟ್ಟಿಂಗ್ ತನಿಖೆ ಬಗ್ಗೆ ಜೋಶಿಗೇಕೆ ಚಿಂತೆ?
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎರಡು ವರ್ಷಗಳಲ್ಲಿ 6 ಪ್ರಕರಣಗಳನ್ನು ಸಿಬಿಐ ತನಿಖೆಗೆ ಒಪ್ಪಿಸಿದೆ. ಯಾವ ಪ್ರಕಾರಣದ ತನಿಖೆಯನ್ನು ಯಾವ ಸಂಸ್ಥೆಯಿಂದ ಮಾಡಿಸಬೇಕೆನ್ನುವುದು ನಮಗೆ ಗೊತ್ತಿದೆ..

ರಾಮನಗರ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎರಡು ವರ್ಷಗಳಲ್ಲಿ 6 ಪ್ರಕರಣಗಳನ್ನು ಸಿಬಿಐ ತನಿಖೆಗೆ ಒಪ್ಪಿಸಿದೆ. ಯಾವ ಪ್ರಕಾರಣದ ತನಿಖೆಯನ್ನು ಯಾವ ಸಂಸ್ಥೆಯಿಂದ ಮಾಡಿಸಬೇಕೆನ್ನುವುದು ನಮಗೆ ಗೊತ್ತಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ ಜೋಶಿ ಅವರಿಗೆ ತಿರುಗೇಟು ನೀಡಿದ್ದಾರೆ.
ಮಾಗಡಿ ತಾಲೂಕಿನ ಸೋಲೂರಿನಲ್ಲಿ ಭಾನುವಾರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಉಚಿತವಾಗಿ ತರಬೇತಿ ನೀಡುವ ಆರ್.ಎಲ್.ಜಾಲಪ್ಪ ಅಕಾಡೆಮಿ ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಕ್ರಿಕೆಟ್ ಬೆಟ್ಟಿಂಗ್ ಜಾಲದ ತನಿಖೆಯನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಪ್ರಹ್ಲಾದ ಜೋಶಿ ಒತ್ತಾಯಿಸುತ್ತಿದ್ದಾರೆ. 5 ವರ್ಷ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಒಂದು ಪ್ರಕರಣವನ್ನೂ ಸಿಬಿಐಗೆ ಒಪ್ಪಿಸಿರಲಿಲ್ಲ. ಕ್ರಿಕೆಟ್ ಬೆಟ್ಟಿಂಗ್ ಜಾಲದ ತನಿಖೆ ಬಗ್ಗೆ ಅವರು ತಲೆಕೆಡಿಸಿಕೊಳ್ಳಬೇಕಿಲ್ಲ ಎಂದರು.
ಹಿಂದುಳಿದ ವರ್ಗದವರು ಸ್ಥಾಪಿಸುವ ಶಿಕ್ಷಣ ಸಂಸ್ಥೆ ಮತ್ತು ವಿದ್ಯಾರ್ಥಿ ನಿಲಯಗಳಿಗೆ ಸರ್ಕಾರದಿಂದ ಅಗತ್ಯ ಭೂಮಿ ಜತೆಗೆ ಅನುದಾನ ಬಿಡುಗಡೆ ಮಾಡಲಾಗುವುದು. ರಾಜಕಾರಣ, ಶಿಕ್ಷಣ ರಿದಂತೆ ಎಲ್ಲ ನಿರ್ಣಾಯಕ ಕ್ಷೇತ್ರಗಳಲ್ಲಿ ಎಲ್ಲರಿಗೂ ಸಮಾನ ಅವಕಾಶ ಸಿಗುವಂತಾಗಬೇಕು. ಸಂವಿಧಾನದಲ್ಲಿ ಮೀಸಲು ಒದಗಿಸಿದ್ದರೂ ಸಾಕಷ್ಟು ಕ್ಷೇತ್ರಗಳಲ್ಲಿ ಅರ್ಹರಿಗೆ ಸೌಲಭ್ಯ ದೊರೆತಿಲ್ಲ. ಸರ್ವರಿಗೂ ಸಮಪಾಲು, ಜಾತ್ಯತೀತ ರಾಷ್ಟ್ರ ನಿರ್ಮಾಣದಂತಹ ಘೋಷಣೆಗಳಿಂದ ಏನೂ ಸಾಧ್ಯವಾಗದು. ಅದಕ್ಕೆ ಪೂರಕ ಕಾರ್ಯ ಕ್ರಮಗಳ ಅನುಷ್ಠಾನ ಅಗತ್ಯ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


