ರಾಜಕೀಯ

ಹೂಡಿಕೆದಾರರನ್ನು ಸೆಳೆಯಲು ಇನ್ವೆಸ್ಟ್ ಮೆಂಟ್ ಕರ್ನಾಟಕ-2015 ಆಯೋಜನೆ: ಸಿಎಂ

ಆಟೋಮೊಬೈಲ್, ಏರೋ ಸ್ಪೇಸ್, ಐಟಿಬಿಟಿ, ಔಷಧಿ, ಪ್ರವಾಸೋದ್ಯಮದಲ್ಲಿ ಹೂಡಿಕೆದಾರರನ್ನು ಸೆಳೆಯಲು ರಾಜ್ಯ ಸರ್ಕಾರ ಇನ್ವೆಸ್ಟ್ ಮೆಂಟ್ ಕರ್ನಾಟಕ-2015 ಕಾರ್ಯಕ್ರಮ ಹಮ್ಮಿಕೊಂಡಿದೆ.

ಹೂಡಿಕೆದಾರರನ್ನು ಸೆಳೆಯಲು ಇನ್ವೆಸ್ಟ್ ಮೆಂಟ್ ಕರ್ನಾಟಕ-2015  ಆಯೋಜನೆ: ಸಿಎಂ
ಮುಖ್ಯಮಂತ್ರಿ ಸಿದ್ದರಾಮಯ್ಯ
Published On :

ಬೆಂಗಳೂರು : ಆಟೋಮೊಬೈಲ್, ಏರೋ ಸ್ಪೇಸ್, ಐಟಿಬಿಟಿ, ಔಷಧಿ, ಪ್ರವಾಸೋದ್ಯಮದಲ್ಲಿ ಹೂಡಿಕೆದಾರರನ್ನು ಸೆಳೆಯಲು ರಾಜ್ಯ ಸರ್ಕಾರ ಇನ್ವೆಸ್ಟ್ ಮೆಂಟ್ ಕರ್ನಾಟಕ-2015 ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಜೂ.19 ರಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನ.23 ರಂದು  ಇನ್ವೆಸ್ಟ್ ಮೆಂಟ್ ಕರ್ನಾಟಕ-2015 ಕ್ಕೆ ಚಾಲನೆ ದೊರೆಯಲಿದ್ದು 25 ವರೆಗೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಇದಕ್ಕೂ ಮುನ್ನ ಪ್ರಮುಖ ನಗರಗಳಲ್ಲಿ ರೋಡ್ ಶೋ ನಡೆಸಲಾಗುವುದು ಎಂದು ಸಿ.ಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಹೈದರಾಬಾದ್, ಪುಣೆ, ದೆಹಲಿ, ಚೆನ್ನೈ ನಗರಗಳಲ್ಲಿ ರೋಡ್ ಶೋ ನಡೆಸಲಿದ್ದು, ಅಲ್ಲಿನ ಉದ್ಯಮಿಗಳು ಹಾಗೂ ರಾಯಭಾರಿಗಳೊಂದಿಗೆ ಸಭೆ ನಡೆಸುತ್ತೇವೆ ಎಂದಿದ್ದಾರೆ. ಪ್ರಸಕ್ತ ವರ್ಷದಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ (ಜಿಮ್) ಗಿಂತಲೂ ಹೆಚ್ಚು ಬಂಡವಾಳ ಹೂಡಿಕೆಯಾಗಲಿದೆ ಎಂದು ಸಿ.ಎಂ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಭೂಸ್ವಾಧೀನ ಕಾಯ್ದೆ ಬಗ್ಗೆ ಪ್ರತಿಕ್ರಿಯಿಸಿರುವ ಸಿ.ಎಂ, ಈ ವರೆಗೂ ಕಾಯ್ದೆ ಬಗ್ಗೆ ಸ್ಪಷ್ಟ ನಿರ್ಧಾರವಿಲ್ಲ, ಪ್ರಸ್ತುತ ಮಾಲಿಕರ ಒಪ್ಪಿಗೆ ಪಡೆದೇ ಭೂಸ್ವಾಧೀನ ಮಾಡಲಾಗುತ್ತಿದೆ. ಲ್ಯಾಂಡ್ ಬ್ಯಾಂಕ್ ನಲ್ಲಿ 30 ಸಾವಿರ ಎಕರೆ ಭೂಮಿ ಬಾಕಿ ಇದೆ. ಇನ್ನೂ 20 ಸಾವಿರ ಭೂಸ್ವಾಧೀನ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದು ಸಿಎಂ ತಿಳಿಸಿದ್ದಾರೆ.

ಕಬ್ಬು ಬೆಳೆಗಾರರಿಗೆ ಬಾಕಿ ಹಣ ನೀಡುವ ಸಂಬಂಧ ಸಕ್ಕರೆ ಕಾರ್ಖಾನೆಗಳ ಮಾಲಿಕರಿಗೆ ಈಗಾಗಲೇ ನೊಟೀಸ್ ಜಾರಿ ಮಾಡಲಾಗಿದೆ. ಮಾಲಿಕರೊಂದಿಗೆ ಜೂ.24 ಕ್ಕೆ ಸಭೆ ನಡೆಯಲಿದ್ದು ಈ ಬಗ್ಗೆ ಚರ್ಚಿಸುವುದಾಗಿ ಸಿಎಂ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.