ರಾಜಕೀಯ

ಬಿಎಸ್‍ವೈ-ಎಚ್‍ಡಿಕೆ ಭಾಯಿ-ಭಾಯಿ: ಪರಮೇಶ್ವರ

ಜೆಡಿಎಸ್‍ನ ಕುಮಾರಸ್ವಾಮಿ ಹಾಗೂ ಬಿಜೆಪಿಯ ಯಡಿಯೂರಪ್ಪ ಬಿಬಿಎಂಪಿ ಚುನಾವಣೆಗಾಗಿ `ಭಾಯಿ-ಭಾಯಿ' ಆಗಿದ್ದು, ಜನರು ಕ್ಷಮಿಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಟೀಕಿಸಿದರು...

ಬಿಎಸ್‍ವೈ-ಎಚ್‍ಡಿಕೆ ಭಾಯಿ-ಭಾಯಿ: ಪರಮೇಶ್ವರ
ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್
Published On :

ಬೆಂಗಳೂರು: ಜೆಡಿಎಸ್‍ನ ಕುಮಾರಸ್ವಾಮಿ ಹಾಗೂ ಬಿಜೆಪಿಯ ಯಡಿಯೂರಪ್ಪ ಬಿಬಿಎಂಪಿ ಚುನಾವಣೆಗಾಗಿ `ಭಾಯಿ-ಭಾಯಿ' ಆಗಿದ್ದು, ಜನರು ಕ್ಷಮಿಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಟೀಕಿಸಿದರು.

ಸ್ವಾತಂತ್ರ್ಯ ಉದ್ಯಾನದಲ್ಲಿ ಬುಧವಾರ ಕೇಂದ್ರದ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಎಚ್‍ಡಿಕೆ ಹಾಗೂ ಬಿಎಸ್‍ವೈ ಬಿಬಿಎಂಪಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ಒಂದಾಗಿದ್ದಾರೆ. ಈ ಇಬ್ಬರು ನಾಯಕರು ಯಾವಾಗ `ಭಾಯಿ' ಆಗುತ್ತಾರೆ, ಯಾವ ಸಮಯದಲ್ಲಿ `ಬೈ' ಹೇಳುತ್ತಾರೆ ಎಂದು ತಿಳಿಯುವುದಿಲ್ಲ.

ಬಿಬಿಎಂಪಿಯಲ್ಲಿ ಬಿಜೆಪಿ 5 ವರ್ಷಗಳಲ್ಲಿ ಒಟ್ಟು ರು.45ಸಾವಿರ ಕೋಟಿ ಮೊತ್ತ ಬಜೆಟ್‍ಗಳನ್ನು ಮಂಡಿಸಿದ್ದು, ರು.18ಸಾವಿರ ಮಾತ್ರ ಯೋಜನೆಗಳಿಗಾಗಿ ಖರ್ಚು ಮಾಡಿದೆ. ಬಿಬಿಎಂಪಿಯಲ್ಲಿ ಇನ್ನೂ ರು.12ಸಾವಿರ ಕೋಟಿ ಸಾಲವಿದೆ. ಚುನಾವಣಾ ಪ್ರಚಾರದ ವೇಳೆ ಪ್ರತಿ ಮನೆಗೂ ಭೇಟಿ ನೀಡಿ ಈ ವಿಚಾರ ತಿಳಿಸಲಾಗುವುದು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.