ರಾಜಕೀಯ

ರೈತರ ಮೇಲೆ ಕೇಸು ಹಾಕಲ್ಲ: ಜಾರ್ಜ್

ನ್ಯಾಯಯುತ ಹಕ್ಕುಗಳಿಗಾಗಿ ಪ್ರತಿಭಟನೆಗಿಳಿಯುವ ಅನ್ನದಾತರ ಮೇಲೆ ಇನ್ನು ಮುಂದೆ ಸರ್ಕಾರ ಯಾವುದೇ ರೀತಿಯ ಪ್ರಕರಣಗಳನ್ನು ದಾಖಲಿಸುವುದಿಲ್ಲ...

ರೈತರ ಮೇಲೆ ಕೇಸು ಹಾಕಲ್ಲ: ಜಾರ್ಜ್
ಕೆಜೆ ಜಾರ್ಜ್
Published On :

ವಿಧಾನಸಭೆ: ನ್ಯಾಯಯುತ ಹಕ್ಕುಗಳಿಗಾಗಿ ಪ್ರತಿಭಟನೆಗಿಳಿಯುವ ಅನ್ನದಾತರ ಮೇಲೆ ಇನ್ನು ಮುಂದೆ ಸರ್ಕಾರ ಯಾವುದೇ ರೀತಿಯ ಪ್ರಕರಣಗಳನ್ನು ದಾಖಲಿಸುವುದಿಲ್ಲ ಎಂದು ಸ್ಪಷ್ಟ ಪಡಿಸಿರುವ ಗೃಹ ಸಚಿವ ಕೆ.ಜೆ. ಜಾರ್ಜ್, ರೈತರು ಪ್ರಜಾಪ್ರಭುತ್ವದ ನೆಲೆಗಟ್ಟಿನಲ್ಲಿ ಚಳವಳಿ ಮಾಡಬೇಕೆಂದು ಮನವಿ ಮಾಡಿದರು.

ರೈತ ಮುಖಂಡ, ಶಾಸಕ ಕೆ.ಎಸ್. ಪುಟ್ಟಣ್ಣಯ್ಯ ಮನವಿಗೆ ಸ್ಪಂದಿಸಿದ ಅವರು, ರೈತರ ಹೋರಾಟಗಳನ್ನು ಸರ್ಕಾರ ಗೌರವಿಸುತ್ತದೆ ಮತ್ತು ಅವರ ಹಿತ ಕಾಯಲು ಬದಟಛಿವಾಗಿದೆ. ಹಾಗಾಗಿ ರೈತರ ವಿರುದ್ಧ ಪ್ರಕರಣ ದಾಖಲಿಸುವುದಿಲ್ಲ ಎಂದರು. `ರೈತರ ಸರಣಿ ಆತ್ಮಹತ್ಯೆ, ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಮುಂದಿಟ್ಟು ಸಾವಿರಾರು ರೈತರು ನ್ಯಾಯಬೇಡಿ ಸುವರ್ಣಸೌಧಕ್ಕೆ ಬಂದಿದ್ದರೆ, ಸರ್ಕಾರದಲ್ಲಿನ ಯಾವೊಬ್ಬ ಸಚಿವರು ಅವರ ನೋವಿಗೆ ಕಿವಿಯಾಗುತ್ತಿಲ್ಲ. ಬದಲಾಗಿ ಸರ್ಕಾರ ಹಾದಿ-ಬೀದಿಯಲ್ಲಿ ಅವರನ್ನು ಬಂಧಿಸಿ ದೌರ್ಜನ್ಯ ಎಸಗುತ್ತಿದೆ' ಎಂದು ಪುಟ್ಟಣ್ಣಯ್ಯ ಆಕ್ರೋಶ ವ್ಯಕ್ತಪಡಿಸಿದಾಗ ಸದನದ ಎಲ್ಲ ಪಕ್ಷಗಳ ಸದಸ್ಯರು ಬೆಂಬಲಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಜಾರ್ಜ್ `ಹಿಂದೆ ನಡೆದ ಪ್ರತಿಭಟನೆ, ಚಳವಳಿಗಳಲ್ಲಿ ಕೆಲವು ಅಹಿತಕರ ಘಟನೆಗಳು ನಡೆದಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ತೆಗೆದುಕೊಂಡು ಅನಂತರ ಬಿಟ್ಟು ಬಿಡುತ್ತಿದ್ದಾರೆ. ಯಾವುದೇ ರೈತರ ವಿರುದ್ಧ ಕೇಸು ಹಾಕುವುದಿಲ್ಲ' ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು.


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.