ರಾಜಕೀಯ

ತಾಳ್ಮೆಯಿಂದ ಇದ್ದರೆ ಪರಮ್‌ಗೆ ಸಿಎಂ ಹುದ್ದೆ: ಸಚಿವ ಆಂಜನೇಯ ಕಿವಿಮಾತು

ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ತಾಳ್ಮೆ ಕಳೆದುಕೊಳ್ಳಬಾರದು. ತಾಳ್ಮೆಯಿಂದ ಇದ್ದರೆ ಸಿಎಂ ಅಥವಾ ಡಿಸಿಎಂ ಹುದ್ದೆ ಅವರನ್ನು ಅರಸಿಕೊಂಡು ಬರಲಿದೆ...

ತಾಳ್ಮೆಯಿಂದ ಇದ್ದರೆ ಪರಮ್‌ಗೆ ಸಿಎಂ ಹುದ್ದೆ: ಸಚಿವ ಆಂಜನೇಯ ಕಿವಿಮಾತು
ಆಂಜನೇಯ
Published On :

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ತಾಳ್ಮೆ ಕಳೆದುಕೊಳ್ಳಬಾರದು. ತಾಳ್ಮೆಯಿಂದ ಇದ್ದರೆ ಸಿಎಂ ಅಥವಾ ಡಿಸಿಎಂ ಹುದ್ದೆ ಅವರನ್ನು ಅರಸಿಕೊಂಡು ಬರಲಿದೆ ಎಂದು ಸಮಾಜ ಕಲ್ಯಾಣ ಸಚಿವ ಆಂಜನೇಯ ಕಿವಿಮಾತು ಹೇಳಿದ್ದಾರೆ.

ಡಾ.ಪರಮೇಶ್ವರ್ ಒಳ್ಳೆಯ ನಾಯಕರು. ಉನ್ನತ ಹುದ್ದೆಗಳಿಗೆ ಅರ್ಹರಾಗಿದ್ದಾರೆ. ಆ ಬಗ್ಗೆ ಯಾರಿಗೂ ಅನುಮಾನವಿಲ್ಲ. ಆದರೆ, ಯಾವುದಕ್ಕೂ ಇದು ಸಮಯವಲ್ಲ ಎಂದಿದ್ದಾರೆ.

ಸಚಿವ ರೋಷನ್ ಬೇಗ್ ಹೇಳಿಕೆ ಹಿನ್ನೆಲೆಯಲ್ಲಿ ತಾವು ಕೂಡ ಡಿಸಿಎಂ ಹುದ್ದೆಯ ಆಕಾಂಕ್ಷಿಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ತಮಗೆ ಸಚಿವ ಸ್ಥಾನದಲ್ಲಿಯೇ ಮಾಡಲು ಸಾಕಷ್ಟು ಕೆಲಸವಿದೆ. ಆ ಬಗ್ಗೆ ಯೋಚಿಸಿಲ್ಲ ಎಂದು ಹಾಸ್ಯ ಚಟಾಕಿ ಹಾರಿಸಿದರು.

ದಲಿತ ಮುಖ್ಯಮಂತ್ರಿ ಹುದ್ದೆ ವಿಚಾರವೇ ಇಂದು ಅಪ್ರಸ್ತುತ ಎಂದು ಪುನರುಚ್ಚರಿಸಿದ ಅವರು, ದಲಿತ ಸಿಎಂ ವಿಚಾರವನ್ನು ಕೆಲವರು ಯಾವ ಉದ್ದೇಶಕ್ಕಾಗಿ ಪ್ರಸ್ತಾಪ ಮಾಡುತ್ತಿದ್ದಾರೋ ಗೊತ್ತಿಲ್ಲ. ಆದರೆ, ರಾಜ್ಯದಲ್ಲಿ ಸಿಎಂ ಅಥವಾ ಡಿಸಿಎಂ ಹುದ್ದೆಗಳು ಖಾಲಿ ಇಲ್ಲ ಎಂದು ದಲಿತ ಮುಖಂಡರಿಗೆ ಪರೋಕ್ಷವಾಗಿ ತಿರುಗೇಟು ನೀಡಿದರು.

ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮವು ಆಯೋಜಿಸಿದ್ದ ಕುಶಲಕರ್ಮಿಗಳಿಗೆ ಅರ್ಹತಾ ಪತ್ರ ವಿತರಣೆ ಸಮಾರಂಭದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಚರ್ಮೋದ್ಯೋಗದಲ್ಲಿ ತರಬೇತಿ ಪಡೆದ ಕುಶಲಕರ್ಮಿಗಳಿಗೆ ನಿಗಮದ ಪರವಾಗಿ ಅರ್ಹತಾ ಪತ್ರಗಳನ್ನು ಸಚಿವ ಆಂಜನೇಯ ವಿತರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.