ಭೂ ಸ್ವಾಧೀನ ಕಾಯ್ದೆ ; 14ಕ್ಕೆ ಕಾಂಗ್ರೆಸ್ ರ್ಯಾಲಿ
ಭೂಸ್ವಾಧೀನ ಕಾಯಿದೆಗೆ ಕೇಂದ್ರ ಸರ್ಕಾರ ತಿದ್ದುಪಡಿ ಸುಗ್ರೀವಾಜ್ಞೆ ತಂದಿರುವುದರ ವಿರುದ್ಧ ಕಾಂಗ್ರೆಸ್ ರಾಜ್ಯದಲ್ಲಿ...

ಬೆಂಗಳೂರು: ಭೂಸ್ವಾಧೀನ ಕಾಯಿದೆಗೆ ಕೇಂದ್ರ ಸರ್ಕಾರ ತಿದ್ದುಪಡಿ ಸುಗ್ರೀವಾಜ್ಞೆ ತಂದಿರುವುದರ ವಿರುದ್ಧ ಕಾಂಗ್ರೆಸ್ ರಾಜ್ಯದಲ್ಲಿ ಜನಾಂದೋಲನ ರೂಪಿಸಲು ಮುಂದಾಗಿದೆ. ಇದರ ಆರಂಬಿsಕ ಹಂತವಾಗಿ ಮಾ.14ರಂದು ನಗರ ಸೇರಿದಂತೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ರ್ಯಾಲಿ ನಡೆಸುವುದಾಗಿ ಘೋಷಿಸಿದೆ. ಗುರುವಾರ ಪಕ್ಷದ ಕಚೇರಿಯಲ್ಲಿ ನಡೆದ ಪದಾಧಿಕಾರಿಗಳ ಸಭೆಯ ನಂತರ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಯುಪಿಎ ಸರ್ಕಾರ ಜಾರಿಗೆ ತಂದ ಹಲವು ಮಹತ್ವದ ಯೋಜನೆಗಳನ್ನು ಕೇಂದ್ರ ಸರ್ಕಾರ ನಾಶ ಮಾಡಲು ಹೊರಟಿದೆ. ನರ್ಮ್ ಹಾಗೂ ನರೇಗಾ ಯೋಜನೆಗಳಿಗೆ ಬದಲಿ ಹೆಸರು ಸೂಚಿಸುವ ಯತ್ನ ನಡೆದಿದೆ. ಭೂ ಸ್ವಾಧೀನ ಕಾಯಿದೆಗೆ ಸುಗ್ರಿವಾಜ್ಞೆ ತಂದು ಉದ್ಯಮಿಗಳ ಹಿತ ಕಾಪಾಡಲು ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದರು. ಭೂ ಸ್ವಾಧೀನ ಪ್ರಕ್ರಿಯೆ ರೈತ ವಿರೋಧಿಯಾಗಿದೆ. ಇದರ ವಿರುದ್ಧ ಕಾಂಗ್ರೆಸ್ ರಾಜ್ಯಾದ್ಯಂತ ಹೋರಾಟ ನಡೆಸಲು ನಿರ್ಧರಿಸಿದೆ. ಆರಂಭಿಕವಾಗಿ ಮಾ.14 ರಂದು ಬೆಂಗಳೂರಿನಲ್ಲಿ ರ್ಯಾಲಿ ನಡೆಯಲಿದೆ ಎಂದು ತಿಳಿಸಿದರು.
ಸಾಮಾಜಿಕ ಜಾಲತಾಣ ಬಳಕೆ
ಪ್ರತಿಷ್ಠಿತ ಸಾಮಾಜಿಕ ಜಾಲತಾಣಗಳಾದ ಫೇಸ್‍ಬುಕ್, ಮೊಬೈಲ್ ಸೇರಿದಂತೆ ಪ್ರಮುಖ ನಾಲ್ಕು ಮಾರ್ಗಗಳ ಮೂಲಕ ಪಕ್ಷದ ಸದಸ್ಯತ್ವ ಅಭಿಯಾನ ನಡೆಯುತ್ತಿದೆ. ಈಗಾಗಾಲೇ ಕೆಲವು ಜಿಲ್ಲೆಗಳಲ್ಲಿ ಶೇ.60 ರಷ್ಟು ಪ್ರಗತಿ ಸಾಧಿಸಲಾಗಿದೆ. ಇನ್ನು ಕೆಲವು ಜಿಲ್ಲೆಗಳಲ್ಲಿ ಶೇ. 40 ರಷ್ಟು ಪ್ರಗತಿ ಕಂಡಿದೆ. 1.75 ಲಕ್ಷದಷ್ಟು ಪುಸ್ತಕಗಳನ್ನು ವಿತರಿಸಲಾಗಿದ್ದು, ಇದರಲ್ಲಿ ಈಗಾಗಲೇ ಶೇ. 70 ರಷ್ಟು ಪುಸ್ತಕಗಳು ಬಳಕೆಯಾಗಿವೆ ಎಂದು ವಿವರಿಸಿದರು. ಫೇ ಸ್‍ಬುಕ್ ಜತೆಗೆ ಪಕ್ಷದ ಅಧಿಕೃತ ವೆಬ್‍ಸೈಟ್‍ನಲ್ಲೂ ಅಭಿಯಾನ ನಡೆಯುತ್ತಿದೆ. ಮೊಬೈಲ್ ಬಳಕೆ ಸಾಕಷ್ಟು ಅನುಕೂಲವಾಗಿದೆ. ಲಿಖಿತ ಅರ್ಜಿಗಳ ಮೂಲಕವೂ ಅಭಿಯಾನಸಾಗಿದೆ. ಸದಸ್ಯತ್ವ ನೋಂದಣಿಗೆ ಎಐಸಿಸಿ ಪ್ರತಿಯೊ ಬ್ಬ ಸದಸ್ಯರಿಗೆ ರು. 250 ನಿಗದಿ ಮಾಡಿದೆ. ಇದರಲ್ಲಿ ಶೇ.60 ರಷ್ಟು ಹಣ ಎಐಸಿಸಿಗೆ, ಉಳಿದದ್ದನ್ನು ಕೆಪಿಸಿಸಿ ಘಟಕಗಳಿಗೆ ನೀಡಲಾಗುವುದು ಎಂದರು.
ಚುನಾವಣೆಗಳಿಗೆ ಸಿದ್ಧತೆ
ಗ್ರಾಪಂ ಸೇರಿದಂತೆ ಈ ವರ್ಷ ನಾನಾ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗೆ ಆದ್ಯತೆ ನೀಡಲಾಗಿದೆ. ಚುನಾವಣೆಗೆ ಸಿದಟಛಿತೆ ಮಾಡಿಕೊಳ್ಳಲಾಗುತ್ತಿದೆ. ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ಚುನಾವಣೆಯೂ ಈ ವರ್ಷವೇ ನಡೆಯಲಿದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


