ರಾಜಕೀಯ

ರಾಜ್ಯಕ್ಕೆ ದಲಿತ ಸಿಎಂ ಅಗತ್ಯವಿಲ್ಲ

ರಾಜ್ಯಕ್ಕೆ ದಲಿತ ಮುಖ್ಯಮಂತ್ರಿಯ ಅಗತ್ಯವಿಲ್ಲ. ಸಿಎಂ ಸಿದ್ದರಾಮಯ್ಯ ಅವರನ್ನು ಹುದ್ದೆಯಿಂದ ಕೆಳಗಿಳಿಸಲು ಕೆಲವು ಪಟ್ಟಭದ್ರ ...

ರಾಜ್ಯಕ್ಕೆ ದಲಿತ ಸಿಎಂ ಅಗತ್ಯವಿಲ್ಲ
ಸಿದ್ದರಾಮಯ್ಯ
Published On :

ಬೆಂಗಳೂರು: ರಾಜ್ಯಕ್ಕೆ ದಲಿತ ಮುಖ್ಯಮಂತ್ರಿಯ ಅಗತ್ಯವಿಲ್ಲ. ಸಿಎಂ ಸಿದ್ದರಾಮಯ್ಯ ಅವರನ್ನು ಹುದ್ದೆಯಿಂದ ಕೆಳಗಿಳಿಸಲು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಹುನ್ನಾರ ನಡೆಸಿವೆ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಐಕ್ಯತಾ ಆಂದೋಲನ ಸಮಿತಿ ಅಧ್ಯಕ್ಷ ಎಸ್. ವೀರಣ್ಣಆಕ್ರೋಶ ವ್ಯಕ್ತಪಡಿಸಿದರು. ರಾಜ್ಯಕ್ಕೆ ದಲಿತ ಸಿಎಂ ಬೇಕೆಂದು ನಿವೃತ್ತ ಐಎಎಸ್ ಅಧಿಕಾರಿ ಶಿವರಾಂ ನೇತೃತ್ವದಲ್ಲಿ ಕೆಲವರು ದಲಿತ ಸಮುದಾಯಕ್ಕೆ ತಪ್ಪು ಸಂದೇಶ ರವಾನಿಸುತ್ತಿದ್ದಾರೆ. ಸಿದ್ದರಾಮಯ್ಯಕೇವಲ ಹಿಂದುಳಿದ ವರ್ಗಗಳ ಮುಖ್ಯಮಂತ್ರಿಯಲ್ಲ. ಸಮಾಜದ ಎಲ್ಲ ವರ್ಗಗಳಿಗೂ ಮುಖ್ಯಮಂತ್ರಿಯಾಗಿದ್ದಾರೆ. ಉತ್ತಮ ಆಡಳಿತ ನೀಡುತ್ತಿದ್ದಾರೆ. ಈಗಾಗಲೇ ದಲಿತಮುಖಂಡರೆಲ್ಲರೂ ದಲಿತ ಸಿಎಂ ಅಗತ್ಯವನ್ನು ತಿರಸ್ಕರಿಸಿದ್ದಾರೆ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ದಲಿತ ಸಿಎಂ ಹಕ್ಕೊತ್ತಾಯದ ವಿರುದ್ಧ  ಹಿಂದುಳಿದ ವರ್ಗಗಳ ಗಣ್ಯರು ಸೇರಿ ರಾಜ್ಯಾದ್ಯಂತ ಜನಾಂದೋಲನ ನಡೆಸಲು ತೀರ್ಮಾನಿಸಿದ್ದೇವೆ. ಚಿತ್ರದುರ್ಗ, ಬಳ್ಳಾರಿ, ಕಲಬುರುಗಿ, ದಾವಣಗೆರೆ, ಚಿಕ್ಕಮಗಳೂರು, ಕೋಲಾರ, ಮೈಸೂರು, ಮಂಗಳೂರು, ಹುಬ್ಬಳ್ಳಿ ಹಾಗೂ ಧಾರವಾಡದಲ್ಲಿ ಜನಾಂದೋಲನ ಸಭೆಗಳನ್ನು ನಡೆಸಲಾಗುವುದು. ಸಭೆಗೆ ದಲಿತ ಸಾಹಿತಿಗಳು ಹಾಗೂ ಚಿಂತಕರು ಆಗಮಿಸಲಿದ್ದಾರೆ. ಶಿವರಾಂ ನೇತೃತ್ವದ ಯಾವಸಂಘಟನೆಗಳಿಗೂ ನಮ್ಮ ಬೆಂಬಲವಿಲ್ಲ. ಇನ್ನು ಮೂರು ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಯಾಗಿರಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.