ರಾಜಕೀಯ

ನೀರಾವರಿಗೆ ನೀಡಿ ಆದ್ಯತೆ: ಶೆಟ್ಟರ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಾರಿಯ ಬಜೆಟ್‍ನಲ್ಲಿ ಎಲ್ಲ ಇಲಾಖೆಗಳ ಬಗ್ಗೆಯೂ ಗಮನ ಹರಿಸಬೇಕು. ನೀರಾವರಿಗೆ ಹೆಚ್ಚಿನ...

ನೀರಾವರಿಗೆ ನೀಡಿ ಆದ್ಯತೆ: ಶೆಟ್ಟರ್
ಜಗದೀಶ್ ಶೆಟ್ಟರ್
Published On :

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಾರಿಯ ಬಜೆಟ್‍ನಲ್ಲಿ ಎಲ್ಲ ಇಲಾಖೆಗಳ ಬಗ್ಗೆಯೂ ಗಮನ ಹರಿಸಬೇಕು. ನೀರಾವರಿಗೆ ಹೆಚ್ಚಿನ ಪ್ರಾಮುಖ್ಯ ನೀಡುವ ಅವಶ್ಯಕತೆ ಇದೆ. ಕನಿಷ್ಠ ಪಕ್ಷ 30,000 ಕೋಟಿಯನ್ನಾದರೂ ನೀರಾವರಿಗೆ ಮೀಸಲಿಡಬೇಕು ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿದ ಅವರು, ಸರ್ಕಾರ ಈ ಬಗ್ಗೆ ಗಮನಹರಿಸಲಿದೆ ಎಂಬ ವಿಶ್ವಾಸ ಇದೆ. ಗಮನ ಕೊಡದಿದ್ದರೆ ಮುಂದೇನು ಎಂಬ ಬಗ್ಗೆ ನಮ್ಮಪಕ್ಷ ಚಿಂತನೆ ನಡೆಸುತ್ತದೆ. ನೀರು ಅತಿ ಅವಶ್ಯ ವಸ್ತುವಾಗಿ ರುವುದರಿಂದ ಅದಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಹೆಚ್ಚು ಅನುದಾನ ಬಿಡುಗಡೆ ಮಾಡುವುದರಿಂದ ಕಾಮಗಾರಿಗಳು
ತ್ವರಿತಗತಿಯಲ್ಲಿ ನಡೆಯುತ್ತವೆ ಎಂದು ಅಭಿಪ್ರಾಯ ಪಟ್ಟರು. ರಾಜ್ಯ ಸರ್ಕಾರಕ್ಕೆ ಕೈಗಾರಿಕೆ ಮೇಲೆ ಆಸಕ್ತಿಯೇ  ಇಲ್ಲ. ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು
ಇದುವರೆಗೆ ಕೇವಲ ಮೂರು ಬಾರಿ ಮಾತ್ರ ಸಭೆ ಕರೆದಿದ್ದಾರೆ. ಇದು ಎಷ್ಟರಮಟ್ಟಿಗೆ ಅವರಿಗೆ ನಿರಾಸಕ್ತಿ ಇದೆ ಎಂಬುದನ್ನು ತೋರಿಸುತ್ತದೆ. ಕೇವಲ ಹೇಳಿಕೆ ನೀಡುವುದರಿಂದ
ಯಾವುದೂ ಅನುಷ್ಠಾನವಾಗುವುದಿಲ್ಲ ಎಂದು ಶೆಟ್ಟರ್ ಆಕ್ರೋಶ ವ್ಯಕ್ತಪಡಿಸಿದರು.ಈ ಸರ್ಕಾರ ಕೈಗಾರಿಕೆಯನ್ನು ತೀವ್ರವಾಗಿ ನಿರ್ಲಕ್ಷಿಸುತ್ತಿ ರುವುದರ ಪರಿಣಾಮ ಇಂದು ಅನೇಕ ಕಂಪನಿಗಳು ರಾಜ್ಯಬಿಟ್ಟು ಆಂಧ್ರ, ತೆಲಂಗಾಣಗಳಂಥ ರಾಜ್ಯಗಳತ್ತ ಮುಖ ಮಾಡಿವೆ. ನಾವಾಗಿಯೇ  ಬಂದು ನಮ್ಮಲ್ಲಿ ಹೂಡಿ ಎಂದು ಕೇಳಬೇಕಿಲ್ಲ. ಬಂದವರೊಂದಿಗೆ ಸರಿಯಾಗಿ ಚರ್ಚಿಸಿ,ಅವರು ಕೇಳುವ ಮೂಲ ಸೌಕರ್ಯ ಒದಗಿಸಿದರೆ ಸಾಕು. ಆ ಕೆಲಸವನ್ನೂ ಮಾಡುತ್ತಿಲ್ಲ ಎಂದು ಜಗದೀಶ್ ಶೆಟ್ಟರ್ ವಿಷಾದ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.