ಎಲ್ಲ ವರ್ಗದವರ ಬಜೆಟ್ : ಸಿಎಂ
ಎಲ್ಲ ವರ್ಗದವರ ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ಬಾರಿಯ ಬಜೆಟ್ ಮಂಡಿಸಲಾಗಿದೆ. ಇದು ಕೇವಲ ಅಹಿಂದ ಬಜೆಟ್ ಎಂಬ ಆರೋಪ ಸರಿಯಲ್ಲ ಎಂದು...

ಮೈಸೂರು: ಎಲ್ಲ ವರ್ಗದವರ ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ಬಾರಿಯ ಬಜೆಟ್ ಮಂಡಿಸಲಾಗಿದೆ. ಇದು ಕೇವಲ ಅಹಿಂದ ಬಜೆಟ್ ಎಂಬ ಆರೋಪ ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಜಿಲ್ಲೆಯ ಪಿರಿಯಾಪಟ್ಟಣ ತಾಲೂಕು ಬೆಟ್ಟದತುಂಗದ ಮೇಗಳಕೊಪ್ಪಲು ಗ್ರಾಮದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದರು.
ರಾಜ್ಯ ಸರ್ಕಾರ ಪ.ಜಾತಿ, ಪರಿಸಿಷ್ಟ ವರ್ಗದವರಿಗೆ ಮೀಸಲಿರಿಸಿದ ಅನುದಾನವನ್ನು ಅದೇ ಉದ್ದೇಶಕ್ಕೆ ಬಳಸಬೇಕು ಎಂಬ ಕಾಯ್ದೆಯನ್ನು 2013ರಲ್ಲಿಯೇ ಜಾರಿಗೆ ತಂದಿದೆ.
ಆದ್ದರಿಂದ ಜನಸಂಖ್ಯೆಗೆ ಅನುಗುಣವಾಗಿ ಅನುದಾನ ನೀಡಲಾಗಿದೆ. ಆದರೆ, ಬಜೆಟ್ ನಲ್ಲಿ ಅಹಿಂದ ವರ್ಗವನ್ನೇ ಕೇಂದ್ರೀಕರಿಸಲಾಗಿದೆ ಎಂಬ ಆರೋಪ ಸುಳ್ಳು ಎಂದು ಹೇಳಿದರು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಅನುದಾನ ಕಡಿಮೆ ನೀಡಲಾಗಿದೆ ಎಂಬ ಆರೋಪವೂ ಸತ್ಯಕ್ಕೆ ದೂರವಾದದ್ದು. ಈ ಹಿಂದೆಯೂ ಅನುದಾನ ನೀಡಿದ್ದೆವು. ಈಗ ಮತ್ತೊಮ್ಮೆ ನೀಡಲು ಆಗದು. ಅಲ್ಲದೆ ಬಿಬಿಎಂಪಿ ಕಾರ್ಯ ವೈಖರಿಯ ಬಗ್ಗೆ ತಜ್ಞರ ಸಮಿತಿ ಸರ್ಕಾರಕ್ಕೆ ವರದಿ ನೀಡಿದೆ. ವರದಿಯನ್ನು ಸದ್ಯದಲ್ಲಿಯೇ ಪರಿಶೀಲಿಸಲಾಗುವುದು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


