ರಾಜಕೀಯ

ಮಾರುಕಟ್ಟೆ ದರದಲ್ಲಿ ಭೂ ಪರಿಹಾರಕ್ಕೆ ದೇವೇಗೌಡ ಆಗ್ರಹ

ಕೇಂದ್ರ ಸರ್ಕಾರ ಭೂಸ್ವಾಧೀನ ತಿದ್ದುಪಡಿ ಕಾಯ್ದೆ ಮೂಲಕ ಫಲವತ್ತಾದ ಭೂಮಿಯನ್ನು ವಶಪಡಿಸಿಕೊಳ್ಳುವ ಮೂಲಕ ಅನ್ನದಾತನನ್ನು ಬೀದಿಗೆ...

ಮಾರುಕಟ್ಟೆ ದರದಲ್ಲಿ ಭೂ ಪರಿಹಾರಕ್ಕೆ ದೇವೇಗೌಡ ಆಗ್ರಹ
ಎಚ್.ಡಿ ದೇವೇಗೌಡ
Published On :

ಅರಸೀಕೆರೆ: ಕೇಂದ್ರ ಸರ್ಕಾರ ಭೂಸ್ವಾಧೀನ ತಿದ್ದುಪಡಿ ಕಾಯ್ದೆ ಮೂಲಕ ಫಲವತ್ತಾದ ಭೂಮಿಯನ್ನು ವಶಪಡಿಸಿಕೊಳ್ಳುವ ಮೂಲಕ ಅನ್ನದಾತನನ್ನು ಬೀದಿಗೆ ತಳ್ಳಲಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅಸಮಾಧಾನ ವ್ಯಕ್ತಪಡಿಸಿದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉದ್ದಿಮೆಗಳ ಸ್ಥಾಪನೆಗೆ ಭೂಮಿ ಅಗತ್ಯವಿದೆ. ಅದಕ್ಕೆ ಅಗತ್ಯ ಇರುವಷ್ಟು ಭೂಮಿ ವಶಪಡಿಸಿಕೊಳ್ಳಲಿ. ಹೆಚ್ಚಿನ ಭೂಮಿ ವಶಪಡಿಸಿಕೊಳ್ಳುವುದರಿಂದ ಭೂಗಳ್ಳರಿಗೆ ಅವಕಾಶವಾಗಲಿದ್ದು ರಿಯಲ್ ಎಸ್ಟೇಟ್ ದಂಧೆಗೆ ಅನುಕೂಲವಾಗಲಿದೆ.
ರೈತರಿಂದ ಪಡೆದುಕೊಳ್ಳುವ ಭೂಮಿಗೆ ಮಾರುಕಟ್ಟೆ ದರ ನೀಡಬೇಕು. ಅಲ್ಲದೆ ಆ ಕುಟುಂಬದ ಸದಸ್ಯರೊಬ್ಬರಿಗೆ ಉದ್ಯೋಗ ನೀಡಬೇಕು ಎಂದು ಆಗ್ರಹಿಸಿದರು.

ಹಾಸನದಲ್ಲಿ ಐಐಟಿ ಸ್ಥಾಪನೆಗೆ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಈಗ ಧಾರವಾಡದಲ್ಲಿ ಸ್ಥಾಪನೆ ಮಾಡಲಾಗುತ್ತಿದೆ ಎಂಬುದು ಗಮನಕ್ಕೆ ಬಂದಿದೆ. ಹಾಸನಕ್ಕೆ ಬಂದು ಶಂಕು ಸ್ಥಾಪನೆ ನೆರವೇರಿಸುವಂತೆ ಪ್ರಧಾನಿಯವರನ್ನು ಕೋರಿರುವೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.