ಸಿಐಡಿಯನ್ನೇ ಮೊದಲು ವಿಚಾರಣೆಗೆ ಒಳಪಡಿಸಲಿ
ಐಎಎಸ್ ಅಧಿಕಾರಿ ಡಿ.ಕೆ. ರವಿ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಮೊದಲು ಸಿಐಡಿ ಅಧಿಕಾರಿಗಳನ್ನೇ ವಿಚಾರಣೆಗೆ...

ಹುಬ್ಬಳ್ಳಿ: ಐಎಎಸ್ ಅಧಿಕಾರಿ ಡಿಕೆ. ರವಿ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಮೊದಲು ಸಿಐಡಿ ಅಧಿಕಾರಿಗಳನ್ನೇ ವಿಚಾರಣೆಗೆ ಒಳಪಡಿಸಬೇಕಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್ ಅಭಿಪ್ರಾಯಪಟ್ಟಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರವಿ ಸಾವಿನ ವಿಷಯದಲ್ಲಿ ಸರ್ಕಾರದ ನಡೆ ಸಂಶಯಕ್ಕೆ ಎಡೆ ಮಾಡಿಕೊಟ್ಟಿದೆ. ಸಿಐಡಿ ಸಿದ್ಧ ಪಡಿಸಿದ ವರದಿ ಸೋರಿಕೆಯಾಗುವಂತೆ ನೋಡಿಕೊಂಡಿದ್ದೇ ಸರ್ಕಾರ ಎನ್ನುವ ಸಂದೇಹ ವ್ಯಕ್ತವಾಗುತ್ತಿದೆ.
ಸರ್ಕಾರ ಸಾಕ್ಷ್ಯ ನಾಶಪಡಿಸುವ ಪ್ರಯತ್ನ ಮಾಡಿದೆ. ಸಿಬಿಐ ಅಧಿಕಾರಿಗಳು ಸಿಐಡಿಯವರನ್ನು ಮೊದಲು ವಿಚಾರಣೆಗೆ ಒಳಪಡಿಸಿದರೆ ಪ್ರಕರಣದ ಹೂರಣ ಹೊರಬರಲು ಸಾಧ್ಯ ಎಂದರು.
ಡಿಕೆ ರವಿ ಪ್ರಕರಣವನ್ನು ಮುಚ್ಚಿ ಹಾಕುವ ಎಲ್ಲ ಪ್ರಯತ್ನಗಳನ್ನು ರಾಜ್ಯ ಸರ್ಕಾರ ಮಾಡಿತ್ತು.
ಪ್ರತಿಪಕ್ಷಗಳ ಹಾಗೂ ಜನರ ಒತ್ತಾಸೆ ಮೇರೆಗೆ ಪ್ರಕರಣ ಸಿಬಿಐಗೆ ವಹಿಸಲಾಯಿತು. ಸರ್ಕಾರದ ಲೋಪವಿಲ್ಲದೇ ಹೋಗಿದ್ದರೆ ಸಿಬಿಐ ತನಿಖೆಗೇಕೆ ಹಿಂದೇಟು ಹಾಕಿತು? ಯಾವ ಸರ್ಕಾರವೂ ಈ ರೀತಿ ನಡೆದು ಕೊಂಡಿರಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸರ್ಕಾರಕ್ಕೆ ಧೈರ್ಯವಿದ್ದರೆ ಅರ್ಕಾವತಿ ಭೂ ಕಬಳಿಕೆ ಸೇರಿದಂತೆ 20 ವರ್ಷಗಳಿಂದ ಈಚೆಗೆ ನಡೆದಿರುವ ಸಂದೇಹಾಸ್ಪದ ಎಲ್ಲ ಪ್ರಕರಣಗಳನ್ನು ಸಿಬಿಐಗೆ ಒಪ್ಪಿಸಲಿ. ನಾವು ತನಿಖೆ ಎದುರಿಸಲು ಸಿದ್ಧ. ಕಾಂಗ್ರೆಸ್‍ಗೆ ಆ ಧೈರ್ಯ ವಿದೆಯೇ ಎಂದು ಸವಾಲು ಹಾಕಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


