ಗ್ರಾಪಂ ಚುನಾವಣೆಗೆ ಕೈ ಸಿದ್ಧ
ಗ್ರಾಮ ಪಂಚಾಯಿತಿ ಚುನಾವಣೆ ಎದುರಿಸಲು ಕಾಂಗ್ರೆಸ್ ಎಲ್ಲ ರೀತಿಯಲ್ಲಿಯೂ ಸಿದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ...

ಮೈಸೂರು: ಗ್ರಾಮ ಪಂಚಾಯಿತಿ ಚುನಾವಣೆ ಎದುರಿಸಲು ಕಾಂಗ್ರೆಸ್ ಎಲ್ಲ ರೀತಿಯಲ್ಲಿಯೂ ಸಿದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಭಾನುವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಪಂ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗವು ಯಾವುದೇ ಕ್ಷಣದಲ್ಲೂ ದಿನಾಂಕ ನಿಗದಿಪಡಿ
ಸಬಹುದು. ಹೀಗಾಗಿ, ಚುನಾವಣೆ ಎದುರಿಸಲು ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಎಲ್ಲ ರೀತಿಯಲ್ಲಿಯೂ ಸಿದ್ದವಾಗಿದ್ದಾರೆ ಎಂದು ತಿಳಿಸಿದರು.
ಚುನಾವಣೆಗೆ ನೂತನ ಕಾಯ್ದೆ ರೂಪಿಸಲಾಗಿದ್ದು, ಅದರಂತೆ ಶೇ.50 ಮಹಿಳಾ ಮೀಸಲಾತಿ ದೊರಕಲಿದೆ. ಈ ಸಂಬಂಧ ಈಗಾಗಲೇ ತಿದ್ದುಪಡಿ ಪ್ರಕಾರ ಹೊಸ ಮೀಸಲು ಪಟ್ಟಿಯನ್ನು ಚುನಾವಣಾ ಆಯೋಗಕ್ಕೆ ಕಳುಹಿಸಲಾಗಿದೆ. ಜತೆಗೆ ಕೆಲವು ಗ್ರಾಪಂಗಳನ್ನು ಮೇಲ್ದರ್ಜೆಗೇರಿಸಿದ್ದು, ಅದರ ಮಾಹಿತಿಯುಳ್ಳ ವಿವರವನ್ನು ಆಯೋಗಕ್ಕೆ ನೀಡಲಾಗಿದೆ ಎಂದು ಅವರು ತಿಳಿಸಿದರು.
6 ಪಥ ರಸ್ತೆಗೆ ಒಪ್ಪಿಗೆ: ಬೆಂಗಳೂರು- ಮೈಸೂರು ರಸ್ತೆಯನ್ನು 6 ಪಥವಾಗಿ ಪರಿವರ್ತಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದ್ದು, ಅದಷ್ಟು ಶೀಘ್ರವಾಗಿ
ಕಾಮಗಾರಿ ಆರಂಭಿಸಲಿದೆ. ಈ ಕುರಿತು ಕೇಂದ್ರ ಭೂ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರೊಂದಿಗೂ ಮಾತುಕತೆ ನಡೆಸಲಾಗಿದೆ.
ರಾಮನಗರ, ಚನ್ನಪಟ್ಟಣ ಸೇರಿದಂತೆ ಪ್ರಮುಖ ಪಟ್ಟಣಗಳಲ್ಲಿ ಬೈ-ಪಾಸ್ ರಸ್ತೆ ನಿರ್ಮಿಸಲು ಸರ್ಕಾರ ನಿರ್ಧರಿಸಿದ್ದು, ಕೇಂದ್ರ ಸರ್ಕಾರದ ಜತೆಗೂಡಿ ಶೀಘ್ರದಲ್ಲೇ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ಅವರು ಹೇಳಿದರು.
ಇದಕ್ಕೂ ಮುನ್ನ ಗ್ರಾಪಂ ಚುನಾವಣೆ ಸಿದ್ಧತೆ ಕುರಿತಂತೆ ಮೈಸೂರಿನಲ್ಲಿ ಕಾಂಗ್ರೆಸ್ ಶಾಸಕರು, ಮುಖಂಡರ ಸಭೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸಿದರು. ಸಹಕಾರ ಮತ್ತು ಸಕ್ಕರೆ ಸಚಿವ ಎಚ್.ಎಸ್. ಮಹದೇವಪ್ರಸಾದ್, ಶಾಸಕರಾದ ಕೆ. ವೆಂಕಟೇಶ್, ಎಸ್. ಜಯಣ್ಣ, ಎಚ್.ಪಿ. ಮಂಜುನಾಥ್, ಆರ್. ನರೇಂದ್ರ, ಸಿ.ಪುಟ್ಟರಂಗಶೆಟ್ಟಿ, ಆರ್. ಧರ್ಮಸೇನ, ಎಂಡಿಎ ಅಧ್ಯಕ್ಷ ಕೆ.ಆರ್. ಮೋಹನ್‍ಕುಮಾರ್, ಮಾಜಿ ಶಾಸಕ ಚಿಕ್ಕಣ್ಣ, ಜಿಪಂ ಉಪಾಧ್ಯಕ್ಷ ಎಲ್.
ಮಾದಪ್ಪ, ರಾಜ್ಯ ವಾಲ್ಮೀಕಿ ನಿಗಮದ ಅಧ್ಯಕ್ಷ ಎಚ್.ಸಿ. ಬಸವರಾಜು, ಜಿಪಂ ಮಾಜಿ ಅಧ್ಯಕ್ಷ ಕೆ. ಮರೀಗೌಡ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


