ಹಳ್ಳಿಗಳಿಗೂ ಐಟಿ ಸೌಲಭ್ಯ
ಹಳ್ಳಿಗಳಿಗೂ ಐಟಿ ಸೌಲಭ್ಯ ಸಿಗುವಂತೆ ಕೇಂದ್ರ ಸರ್ಕಾರ ಮಾಹಿತಿ ತಂತ್ರಜ್ಞಾನದ ನೂತನ ನೀತಿಯನ್ನು ಅಂತಿಮಗೊಳಿಸಿದ್ದು...

ಬೆಂಗಳೂರು: ಹಳ್ಳಿಗಳಿಗೂ ಐಟಿ ಸೌಲಭ್ಯ ಸಿಗುವಂತೆ ಕೇಂದ್ರ ಸರ್ಕಾರ ಮಾಹಿತಿ ತಂತ್ರಜ್ಞಾನದ ನೂತನ ನೀತಿಯನ್ನು ಅಂತಿಮಗೊಳಿಸಿದ್ದು, ಸದ್ಯದಲ್ಲೇ ಪ್ರಕಟಿಸಲಾಗುವುದು ಎಂದು ಕೇಂದ್ರ ಸಂಪರ್ಕ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ ಪ್ರಸಾದ್ ಹೇಳಿದ್ದಾರೆ.
ಮೋದಿ ಸರ್ಕಾರ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮಂಗಳವಾರ ಏರ್ಪಡಿಸಿದ್ದ ಸಾರ್ಥಕತೆಯ ಒಂದು ವರ್ಷ' ಕಾರ್ಯಕ್ರಮದಲ್ಲಿ ಮಾತನಾಡಿ, ಗ್ರಾಮೀಣ ಪ್ರದೇಶಕ್ಕೂ ಮಾಹಿತಿ ತಂತ್ರಜ್ಞಾನವನ್ನು ತಲುಪಿಸಿ ಯುವಕರಿಗೆ ಉದ್ಯೋಗ ಸಿಗುವಂತೆ ಮಾಡಲು ನೂತನ ಐಟಿ
ನೀತಿಯನ್ನು ಅಂತಿಮಗೊಳಿಸಲಾಗಿದೆ.
ಇದು ಸದ್ಯದಲ್ಲೇ ಜಾರಿಯಾಗಲಿದ್ದು, ಇದರಿಂದ ದೇಶದ ಸಣ್ಣಪುಟ್ಟ ಹಳ್ಳಿಗಳಲ್ಲೂ ಬಿಪಿಒ ಕಾಲ್ ಸೆಂಟರ್‍ಗಳನ್ನು ಸ್ಥಾಪಿಸಲಾಗುತ್ತದೆ. ಇದರಿಂದ ಉದ್ಯಮ ಮತ್ತು ಉದ್ಯೋಗ ಅವಕಾಶಗಳು ಹೆಚ್ಚಲಿದೆ. ಆ ಮೂಲಕ ದೇಶದಲ್ಲಿ ಗಮನಾರ್ಹ ಬದಲಾವಣೆ ಕಾಣಲಿದೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಪ್ಪು ಹಣ ವಾಪಸಿಗೆ ಯತ್ನ
ಸ್ವಿಸ್ ಬ್ಯಾಂಕ್ ನಲ್ಲಿಟ್ಟಿರುವ ಕಪ್ಪುಹಣವನ್ನು ವಾಪಸ್ ತರುವ ವಿಚಾರದಲ್ಲಿ ಕೇಂದ್ರ ಸರ್ಕಾರ ಕೇವಲ ಒಂದೇ ವರ್ಷದಲ್ಲಿ ಸಾಕಷ್ಟು ಯತ್ನಿಸಿದೆ. ಈ ಹಣ ತರುವುದಕ್ಕೆಂದೇ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದ್ದು, ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಧೀಶರು ಇದರ ಮುಖ್ಯಸ್ಥರಾಗಿದ್ದಾರೆ. ಈ ತಂಡಕ್ಕೆ ಈಗಾಗಲೇ 700 ಮಂದಿ ಹೆಸರನ್ನು ನೀಡಲಾಗಿದೆ. ಅದನ್ನಾಧರಿಸಿ ತಂಡ ತನಿಖೆ ನಡೆಸುತ್ತಿದೆ ಎಂದು ವಿವರಿಸಿದರು. ವಿಶೇಷ ತನಿಖಾ ತಂಡ ಸೂಚಿಸಿದ ಶ್ರೀಮಂತರು ತಮ್ಮ ನೈಜ ಆದಾಯವನ್ನು ಘೋಷಿಸಿಕೊಳ್ಳಬೇಕು.
ಇಲ್ಲದಿದ್ದರೆ ಅವರ ಮಿತಿ ಮೀರಿದ ಆದಾಯಕ್ಕೆ ಶೇ.300 ತೆರಿಗೆ ವಿಧಿಸಲಾಗುತ್ತದೆ. ಜತೆಗೆ 10 ವರ್ಷ ಜೈಲು ಶಿಕ್ಷೆಗೂ ಗುರಿಪಡಿಸಲಾಗುತ್ತದೆ. ಅಷ್ಟೇ ಅಲ್ಲದೇ, ಅವರ ಖಾತೆಗಳನ್ನು ಮತ್ತು
ಅವರು ಭಾರತದ ಯಾವುದೇ ಮೂಲೆಯಲ್ಲಿ ಆಸ್ತಿ ಹೊಂದಿದ್ದರೂ ಅದನ್ನು ಸರ್ಕಾರ ವಶಕ್ಕೆ ತೆಗೆದುಕೊಳ್ಳಲಿದೆ ಎಂದರು. ಸಂಪೂರ್ಣ ಭಾಷಣದಲ್ಲಿ ಮೋದಿ ಸರ್ಕಾರದ ಸಾಧನೆಗಳನ್ನು ವಿವರಿಸುವುದಕ್ಕೆ ಬಳಸಿ ಕೊಂಡ ಅವರು, ಪ್ರತಿ ವಿಚಾರವನ್ನೂ ಹಿಂದಿನ ಸರ್ಕಾರಕ್ಕೆ ಹೋಲಿಸಿ ಟೀಕಿಸಿದರು.
ಗಾಪಂಗೂ ಮೋದಿ ಅಲೆ
ಬಿ.ಎಸ್.ಯಡಿಯೂರಪ್ಪ ಮಾತನಾಡಿ, `59 ವರ್ಷಗಳ ಅಧಿಕಾರದ ಅವಧಿಯಲ್ಲಿ ಕಾಂಗ್ರೆಸ್ ಮಾಡದ ಸಾಧನೆಯನ್ನು ಮೋದಿ ಕಡಿಮೆ ಸಮಯದಲ್ಲಿ ಮಾಡಿ ತೋರಿಸಿ, ಭರವಸೆ ಮೂಡಿಸಿದ್ದಾರೆ. ಒಂದೇ ವರ್ಷದಲ್ಲಿ 12 ಕ್ಷೇತ್ರಗಳಲ್ಲಿ ಸಾಧನೆ ಮಾಡಲಾಗಿದೆ.
ರೈತರಿಗೆಂದೇ ಕಿಸಾನ್ ಹೆಸರಿನಲ್ಲಿ ಚಾನಲ್ ಆರಂಭಿಸಿ ಕೃಷಿಗೆ ಆದ್ಯತೆ ನೀಡಲಾಗುತ್ತಿದೆ. ಆದರೆ ಕಾಂಗ್ರೆಸ್ ಇದನ್ನು ಟೀಕಿಸಿ ಕಾಲಕಳೆಯುತ್ತಿದೆ ಎಂದರು. ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ, ಮಾಜಿ ಸಚಿವ ವಿ.ಸೋಮಣ್ಣ, ಬಿಬಿಎಂಪಿ ವ್ಯಾಪ್ತಿಯ ಎಲ್ಲ ಶಾಸಕರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


