ಸಿದ್ದು ಸರ್ಕಾರದ ಮತ್ತಷ್ಟು ಹಗರಣ ಬಯಲಿಗೆಳೆಯುತ್ತೇವೆ: ಎಚ್ಡಿಕೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಳಿತದಲ್ಲಿ ನಡೆದಿರುವ ಮತ್ತಷ್ಟು ಹಗರಣಗಳನ್ನು ಬಯಲಿಗೆಳೆಯುತ್ತೇವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ...

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಳಿತದಲ್ಲಿ ನಡೆದಿರುವ ಮತ್ತಷ್ಟು ಹಗರಣಗಳನ್ನು ಬಯಲಿಗೆಳೆಯುತ್ತೇವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಗುರುವಾರ ಹೇಳಿದ್ದಾರೆ.
ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರು ಗುರುವಾರ ರಾಜ್ಯಪಾಲರನ್ನು ಭೇಟಿಯಾಗಿ ರಾಜ್ಯದಲ್ಲಿ ನಡೆದಿರುವ ಇತ್ತೀಚಿನ ಬೆಳವಣಿಗೆ ಕುರಿತು ಚರ್ಚಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ರಾಜ್ಯದಲ್ಲಿ ಇತ್ತೀಚೆಗೆ ಹಲವು ಕಾನೂನು ಬಾಹಿರ ಚಟುವಟಿಕೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿದ್ದೇನೆ. ಹಲವು ಇಲಾಖೆಗಳ ಬಗ್ಗೆ ಚರ್ಚೆ ಮಾಡಿದ್ದೇನೆ. ನಾನು ಸಂಗ್ರಹಿಸಿರುವ ದಾಖಲೆಗಳನ್ನು ರಾಜಭವನಕ್ಕೆ ಸಲ್ಲಿಸಲು ರಾಜ್ಯಪಾಲರ ಅನುಮತಿ ಕೇಳಿದ್ದೇನೆ' ಎಂದು ಹೇಳಿದರು. ಈ ವಿಚಾರದಲ್ಲಿ ರಾಜ್ಯಪಾಲರು ನನ್ನಿಂದ ಹಲವು ಮಾಹಿತಿ ಪಡೆದರು. ಸದ್ಯದಲ್ಲಿಯೇ ದಾಖಲೆಗಳನ್ನು ಕೊಡುತ್ತೇನೆ. ಪ್ರತಿಪಕ್ಷವಾಗಿ ಹೇಗೆ ಕೆಲಸ ಮಾಡಬೇಕೆಂದು ರಾಜ್ಯಪಾಲರು ಈ ಸಂದರ್ಭದಲ್ಲಿ ಸಲಹೆ ಕೊಟ್ಟಿದ್ದಾರೆ ಎಂದು ತಿಳಿಸಿದರು.
`ನನ್ನ ಧಮ್ ಮತ್ತು ತಾಕತ್' ಬಗ್ಗೆ ಪದೇ ಪದೇ ಚರ್ಚೆ ಬೇಡವೆಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು,`ಉಗ್ರಪ್ಪ ಹೇಗೆ ರಾಜಕೀಯಕ್ಕೆ ಬಂದಿದ್ದು ಮತ್ತು ಯಾವ ಕುಟುಂಬದಿಂದ ರಾಜಕೀಯ ಕಲಿತಿದ್ದು ಎಂದು ನೆನಪು ಮಾಡಿಕೊಳ್ಳಲಿ. ನನ್ನ ಧಮ್ ತಾಕತ್ತಿನ ಬಗ್ಗೆ ಸದನದಲ್ಲಿ ಮಾತನಾಡಿದ ಸಚಿವರೊಬ್ಬರ ಸ್ಥಿತಿ ಈಗ ಏನಾಗಿದೆ ಎಂದು ಗೊತ್ತಾಗಿದೆ. ಉಗ್ರಪ್ಪನವರು ಕೆಲವು ದಿನ ಕಾಯಲಿ' ಎಂದು ಹೇಳಿದರು.
ಪತ್ರಕರ್ತರ ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಕುಮಾರಸ್ವಾಮಿ, `ದೇವೇಗೌಡರು ಮಾಧ್ಯಮದ ಮುಂದೆ ಹೋಗುವುದು ಬೇಡ ಎಂದು ಸಲಹೆ ಕೊಟ್ಟಿದ್ದಾರೆ ಅಷ್ಟೆ. ದಾಖಲೆಗಳನ್ನು ಕೊಡಬೇಕಾದವರಿಗೆ ಕೊಡುತ್ತೇವೆ. ನಮ್ಮದು ಹೋರಾಟದ ಸಂಸ್ಕೃತಿಯ ಕುಟುಂಬ, ಸಿದ್ದರಾಮಯ್ಯನವರದ್ದು ಸುಳ್ಳು ಹೇಳುವ ಸಂಸ್ಕೃತಿ. ದನ ಕಾಯೋದು ಅಸಂಸದೀಯ ಪದ ಅಲ್ಲ. ಒಂದು ವೇಳೆ ಈ ಪದ ಬಳಕೆಯಿಂದ ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಬೇಸರವಾಗಿದ್ದರೆ ಇನ್ನು ಮುಂದೆ ಬಳಸುವುದಿಲ್ಲ' ಎಂದು ಸ್ಪಷ್ಟಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


