ರಾಜಕೀಯ

ಅಸಹಿಷ್ಣುತೆ ಬಗ್ಗೆ ಮೋದಿ ಮೌನ ಉದ್ದೇಶಪೂರ್ವಕ: ಅರುಣ್ ಶೌರಿ

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಿಜೆಪಿ ನಾಯಕ ಅರುಣ್ ಶೌರಿ ಮತ್ತೊಮ್ಮೆ ಅಸಮಾಧಾನ ಹೊರಹಾಕಿದ್ದಾರೆ.

ಅಸಹಿಷ್ಣುತೆ ಬಗ್ಗೆ ಮೋದಿ ಮೌನ ಉದ್ದೇಶಪೂರ್ವಕ: ಅರುಣ್ ಶೌರಿ
ಅರುಣ್ ಶೌರಿ
Published On :

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಿಜೆಪಿ ನಾಯಕ ಅರುಣ್ ಶೌರಿ ಮತ್ತೊಮ್ಮೆ ಅಸಮಾಧಾನ ಹೊರಹಾಕಿದ್ದಾರೆ. ದೇಶದಲ್ಲಿ ಹೆಚ್ಚುತ್ತಿರುವ ಅಸಹಿಷ್ಣುತೆ ಸೇರಿದಂತೆ ಪ್ರಮುಖ ವಿಷಯಗಳ ಬಗ್ಗೆ ಪ್ರಧಾನಿ ಉದ್ದೇಶಪೂರ್ವಕವಾಗಿ ಮೌನ ವಹಿಸಿದ್ದಾರೆ ಎಂದು ಶೌರಿ ಹೇಳಿದ್ದಾರೆ.
ಖಾಸಗಿ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿರುವ ಶೌರಿ, ಪ್ರಧಾನಿ ಮೌನ ರಾಜಕೀಯ ಪ್ರೇರಿತವಾಗಿದ್ದು, ಬಿಹಾರದ ಚುನಾವಣೆ ಗೆಲ್ಲುವುದಕ್ಕಾಗಿ ಉದ್ದೇಶ ಪೂರ್ವಕವಾಗಿ ಮೌನ ವಹಿಸಿದ್ದಾರೆ ಎಂದಿದ್ದಾರೆ. ಪ್ರಧಾನಿ ಮೋದಿ ಹೋಮಿಯೋಪತಿ ಇಲಾಖೆ ಸೆಕ್ಷನ್ ಅಧಿಕಾರಿಯಲ್ಲ. ದೇಶದ ಪ್ರಧಾನಿ, ದೇಶಕ್ಕೆ ನೈತಿಕ ಮಾರ್ಗವನ್ನು ತೋರಬೇಕಾದ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಬ್ರಿಟಿಷ್ ಪ್ರಧಾನಿ ಡೇವಿಡ್ ಕೆಮರೂನ್ ಜನ್ಮ ದಿನಾಚರಣೆ ಅಂಗವಾಗಿ ಶುಭಾಶಯ ತಿಳಿಸಲು ಪ್ರಧಾನಿ ಮೋದಿಗೆ ಸಮಯವಿರುತ್ತದೆ. ಆದರೆ ದಾದ್ರಿ ಹಾಗೂ ಹರ್ಯಾಣದಲ್ಲಿ ನಡೆದ ದಲಿತ ಮಕ್ಕಳ ಹತ್ಯೆ ಪ್ರಕರಣಗಳ ಬಗ್ಗೆ ಪ್ರತಿಕ್ರಿಯೆ ನೀಡುವುದಕ್ಕೆ ಪ್ರಧಾನಿಗೆ ಸಮಯವಿರುವುದಿಲ್ಲ ಎಂದು ಶೌರಿ ಆರೋಪಿಸಿದ್ದಾರೆ.  
ಪ್ರಧಾನಿ ಮೋದಿ ಬಲಿಷ್ಠ ನಾಯಕನಾಗಿದ್ದರೂ ತಮ್ಮ ಸಂಸದರನ್ನು ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ. ಮೋದಿ ಅವರ ಮೌನ ಸಂಪೂರ್ಣ ರಾಜಕೀಯ ಪ್ರೇರಿತವಾಗಿದ್ದು ಎಂದಿದ್ದಾರೆ. ಇತ್ತೀಚೆಗಷ್ಟೇ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದ ಅರುಣ್ ಶೌರಿ, ಮೋದಿ ಸರ್ಕಾರ ಇತಿಹಾಸದಲ್ಲೇ ಅತಿ ದುರ್ಬಲ ಪ್ರಧಾನಿ ಕಾರ್ಯಾಲಯ ಹೊಂದಿದೆ, ಹಿಂದಿನ ಕಾಂಗ್ರೆಸ್ ಸರ್ಕಾರಕ್ಕೂ, ಎನ್.ಡಿ.ಎ ಸರ್ಕಾರಕ್ಕೂ ಹೆಚ್ಚಿನ ವ್ಯತ್ಯಾಸವಿಲ್ಲ ಎಂದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.